Advertisement

ಕಾಯಕವೇ ಕೈಲಾಸವೆಂಬ ತತ್ವ ಅಳವಡಿಸಿಕೊಳ್ಳಿ : ಜವರೇಗೌಡ

12:09 AM Mar 03, 2020 | sudhir |

ಮಡಿಕೇರಿ :ಕಾಯಕವೇ ಕೈಲಾಸ ಎಂಬ ತಣ್ತೀವನ್ನು ಅಳವಡಿಸಿಕೊಂಡು ದುಡಿಮೆ ಮಾಡಿ. ಯಾವುದೇ ವೃತ್ತಿ ಮೇಲು ಕೀಳು ಎಂಬ ಭಾವನೆಗಳು ಇರಬಾರದು ಎಂದು ಉಪವಿಭಾಗಾಧಿಕಾರಿ‌ ಟಿ. ಜವರೇಗೌಡ ಅವರು ತಿಳಿಸಿದರು.

Advertisement

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭಧ್ರತಾ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಭಾನುವಾರ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಕಾರ್ಮಿಕ ಸಮ್ಮಾನ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಬಹಳಷ್ಟು ಕೆಳ ಸ್ತರದಲ್ಲಿ ದುಡಿಯುವ ಕಾರ್ಮಿಕರನ್ನು ಗುರುತಿಸಿ ಸನ್ಮಾನಿಸುವುದು ನಿಜಕ್ಕೂ ಸಂತಸದ ವಿಚಾರ ಮತ್ತು ಇದೊಂದು ವಿಶಿಷ್ಠ ಕಾರ್ಯಕ್ರಮ. ಸಮಾಜದಲ್ಲಿ ಯಾವುದೇ ವೃತ್ತಿ ಮೇಲು-ಕೀಳು ಎಂಬ ಭಾವನೆಗಳು ನಮ್ಮಲ್ಲಿರಬಾರದು ಎಂದು ಅವರು ಹೇಳಿದರು
ಆಟೋಚಾಲಕರ ಸಂಘದ ಅಧ್ಯಕ್ಷ ‌ ಎಸ್‌.ಜಿ. ಮೇದಪ್ಪ ಅವರು ಮಾತನಾಡಿ, ಸಮಾಜದಲ್ಲಿ ಅಸಂಘಟಿತ ಕಾರ್ಮಿಕರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ.

ಸರ್ಕಾರ ಇತ್ತೀಚಿನ ದಿನಗಳಲ್ಲಿ ಈ ವರ್ಗದ ಕಾರ್ಮಿಕರ ಸೇವೆಯನ್ನು ಪರಿಗಣಿಸಿ ಸನ್ಮಾನ ಮಾಡುತ್ತಿರುವುದು ಸಂತಸದ ವಿಷಯ. ಇಲಾಖೆಯೂ ಸಹ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿದೆ ಎಂದು ತಿಳಿಸಿದರು.
ಟೈಲರ್ಸ್‌ ಅಸೋಸಿಯೇಷನ್‌ ಅಧ್ಯಕ್ಷ‌ ಆನಂದ್‌ ಅವರು, ಅಸಂಘಟಿತ ವಲಯದ ಕಾರ್ಮಿಕರು ಸಮಾಜದಲ್ಲಿ ಸಾಕಷ್ಟು ಸೇವೆ ಸಲ್ಲಿಸುತ್ತಿದ್ದಾರೆ. ನಮ್ಮ ಸೇವೆಯನ್ನೂ ಪರಿಗಣಿಸಿ ಸಮ್ಮಾನ ಮಾಡುತ್ತಿರುವುದಕ್ಕೆ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು. 11 ವಲಯದ ಅಸಂಘಟಿತ ಕಾರ್ಮಿಕರು ಹಾಗೂ ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯಡಿ ಆಯ್ಕೆಯಾದ 1 ವಲಯದ, ಒಟ್ಟು 90 ಜನ ಕಾರ್ಮಿಕರಿಕೆ ಶ್ರಮ ಸಮ್ಮಾನ ಪ್ರಶಸ್ತಿ ಮತ್ತು ವಿಶೇಷ ಪುರಸ್ಕಾರ ನೀಡಿ ಗೌವರವಿಸಲಾಯಿತು.

ವಿರಾಜಪೇಟೆ ಮತ್ತು ಸೋಮವಾರ ಪೇಟೆ ತಾಲೂಕು ಕಾರ್ಮಿಕ ಅಧಿಕಾರಿಗಳಾದ ಎಂ. ಮಹದೇವ ಸ್ವಾಮಿ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಕಾರ್ಮಿಕ ಅಧಿಕಾರಿ ಯತ್ನಟ್ಟಿ ಅವರು ವಂದಿಸಿದರು.
ಕೊಡಗು ಜಿಲ್ಲಾ ವಿದ್ಯಾ ಸಾಗರ ಕಲಾವೇದಿಕೆಯ ಈ. ರಾಜು ಮತ್ತು ತಂಡದವರು ನಾಡಗೀತೆ ಹಾಡಿದರು.

Advertisement

ಸ್ಮಾರ್ಟ್‌ ಕಾರ್ಡ್‌ ವಿತರಣೆ
ಈ ಸನ್ಮಾನ ಕಾರ್ಯಕ್ರಮವು 2019ರ ಮಾ. 1 ರಂದು ಪ್ರಥಮವಾಗಿ ಆಚರಿಸಲಾಗಿತ್ತು ಎಂದು ಕಾರ್ಮಿಕಾಧಿಕಾರಿಯತ್ನಟ್ಟಿ ತಿಳಿಸಿದರು.
2018 ರಲ್ಲಿ ಸರ್ಕಾರ ಅಸಂಘಟಿತ ವಲಯದ ಕಾರ್ಮಿಕರಾದ ಹಮಾಲರು, ಟೈಲರ್‌ ಗಳು , ಅಗಸರು, ûೌರಿಕರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಚಿಂದಿ ಆಯುವವರು, ಮನೆಗೆಲಸದವರು, ಮೆಕ್ಯಾನಿಕ್‌, ಮಂಡಕ್ಕಿ ಭಟ್ಟಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಣೆ ಪ್ರಾರಂಭಿಸಲಾಯಿತು. ಜಿಲ್ಲೆಯಲ್ಲಿ ಈ ವಲಯಗಳಲ್ಲಿ ಕೆಲಸ ಮಾಡುವ ಈ ವರ್ಗದ ಕಾರ್ಮಿಕರಿಂದ 1764 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ವರೆಗೆ 1067 ಸ್ಮಾರ್ಟ್‌ ಕಾರ್ಡ್‌ ಗಳು ವಿತರಣೆಯಾಗಿದ್ದು, ಉಳಿದ ಸ್ಮಾರ್ಟ್‌ ಕಾರ್ಡ್‌ ನೀಡಲಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next