Advertisement
ಕಾಶಿಬೆಟ್ಟು ಬಳಿ ಚಾಲನೆ ನೀಡಿ ಮಾತನಾಡಿದ ಸಂಸದರು, ಜಿಲ್ಲೆಯಲ್ಲಿ ಈ ಹಿಂದೆ ಅನುಭವ ಇಲ್ಲದ ಗುತ್ತಿಗೆದಾರರು ಕಾಮಗಾರಿ ನಡೆಸಿದ್ದರು. ಈಗ ಅನುಭವಿ ಗುತ್ತಿಗೆದಾರರ ವ್ಯವಸ್ಥೆ ಮಾಡಲಾಗಿದೆ. ರಸ್ತೆಯ ಹೊಂಡಗಳನ್ನು ಮುಚ್ಚುವ ಕೆಲಸಕ್ಕೆ ಚಾಲನೆ ನೀಡಲಾಗಿದೆ. 35 ಕಿ.ಮೀ. ವ್ಯಾಪ್ತಿಯ ಹೆದ್ದಾರಿಯಲ್ಲಿ ಸುಮಾರು 7 ಸ್ಥಳಗಳಲ್ಲಿ ಸಂಪೂರ್ಣ ಕೆಟ್ಟು ಹೋಗಿದ್ದು, ಮೊದಲ ಹಂತದಲ್ಲಿ ತತ್ಕ್ಷಣ ಈ ಸ್ಥಳಗಳಲ್ಲಿ ಕಾಮಗಾರಿ ನಡೆಯಲಿದೆ. ಬಳಿಕ ಇತರ ಕಾಮಗಾರಿಗಳು ಮುಂದುವರಿಯಲಿವೆ ಎಂದರು.
ಬೆಳ್ತಂಗಡಿ: ಪುಂಜಾಲಕಟ್ಟೆ – ಚಾರ್ಮಾಡಿ ಅಭಿವೃದ್ಧಿ ಕಾಮಗಾರಿಗೆ ಭೌಗೋಳಿಕ ಹಿನ್ನೆಲೆಯಲ್ಲಿ ಕೆಲಸ ನಿರ್ವಹಿಸಲು ಸಮಸ್ಯೆ ಎದುರಾಗಿದೆ. ಆದ್ದರಿಂದ ಶಾಸಕ ಹರೀಶ್ ಪೂಂಜ ಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿಯೊಂದಿಗೆ ಸಭೆ ನಡೆಸಿ ಅನೇಕ ಯೋಜನೆ ರೂಪಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ಜತೆಗೂ ಚರ್ಚಿಸಲಾಗಿದೆ. ಇದರ ಒಂದು ಭಾಗವಾಗಿ ಡಿ.ಪಿ. ಜೈನ್ ಅವರ ಮೂಲಕ, ಅವರ ಹೆಸರಲ್ಲೇ ಮುಗ್ರೋಡಿ ಕಂಪೆನಿ ಇನ್ನು ಮುಂದೆ ಹೆದ್ದಾರಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಿದೆ ಎಂದು ಸಂಸದ ಕ್ಯಾ| ಬ್ರಿಜೇಶ್ ಚೌಟ ಹೇಳಿದರು.
Related Articles
Advertisement
ಗುರುವಾಯನಕೆರೆ ವರಕಬೆಯಿಂದ ಉಜಿರೆ ಪೆಟ್ರೋಲ್ ಬಂಕ್ವರೆಗೆ ಸರ್ವಿಸ್ ರಸ್ತೆ ಇದ್ದು, ಇದನ್ನು ನಿಡಿಗಲ್ವರೆಗೆ ವಿಸ್ತರಿಸಲಾಗುವುದು. ಹಳೆಕೋಟೆ ವಾಣಿ ಕಾಲೇಜು ಬಳಿ ಮೇಲ್ಸೇತುವೆಗೆ ಪ್ರಸ್ತಾವನೆ ಕಳುಹಿಸಲಾಗಿದೆ. ಭೂಮಿ ಒತ್ತುವರಿ ಅಧಿಸೂಚನೆ ಆಗಿದ್ದು, ಜನವರಿ ಒಳಗೆ ಎಲ್ಲವೂ ಪೂರ್ಣಗೊಳ್ಳಲಿದೆ ಎಂದರು.
ಶಾಸಕ ಹರೀಶ್ ಪೂಂಜ ಮಾತನಾಡಿ, 700 ಕೋ.ರೂ. ಅನುದಾನದ ಟೆಂಡರ್ ಪ್ರಕ್ರಿಯೆ ಇದಾಗಿದೆ. ಮೂರ್ನಾಲ್ಕು ಬಾರಿ ಸಂಸದರೊಂದಿಗೆ ದಿಲ್ಲಿಯಲ್ಲಿ ಚರ್ಚಿಸಿದ್ದು, ಈಗ ಸೂಕ್ತ ಪ್ರತಿಫಲ ಸಿಕ್ಕಿದೆ ಎಂದರು. ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಉಪಸ್ಥಿತರಿದ್ದರು.