Advertisement

ಬಿಜೆಪಿ ಕಾರ್ಯಕರ್ತರನ್ನು ಹತ್ತಿಕುವ ಕೆಲಸ

12:17 PM Nov 25, 2017 | |

ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಅವರ ವಿರುದ್ಧ ಪ್ರತಿಭಟನೆ ಕೈಗೊಂಡ ಸಮಯದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಮುಖಂಡರನ್ನು ಹೆದರಿಸುವ ಕೆಲಸ ಮಾಡಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ಆರೋಪಿಸಿದರು.

Advertisement

ನಗರದಲ್ಲಿ ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದೇ ಸಮಯಕ್ಕೆ ಎರಡು ಪ್ರತಿಭಟನೆಗೆ ಪೊಲೀಸರು ಅನುವು ಮಾಡಿಕೊಟ್ಟಿದ್ದಾರಲ್ಲದೇ ನಮ್ಮ ಮೇಲೆ ದರ್ಪ ಮೆರೆಯಲು ಬಂದರು.

ಪೊಲೀಸರು ಕಾಂಗ್ರೆಸ್‌ ಕಾರ್ಯಕರ್ತರನ್ನು ಮೇಲೆತ್ತಿ ಬಿಜೆಪಿ ಕಾರ್ಯಕರ್ತರನ್ನು ಹತ್ತಿಕ್ಕುವ ಕೆಲಸ ಮಾಡಿದ್ದಾರೆ ಎಂದು ದೂರಿದರು. ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿನಯ ಕುಲಕರ್ಣಿ ಕೂಡಲೇ ರಾಜಿನಾಮೆ ನೀಡಿ ನಿಷ್ಪಕ್ಷಪಾತ ತನಿಖೆ ಮಾಡಲು ಅನುವು ಮಾಡಿಕೊಡಬೇಕು.

ಈ ಪ್ರಕರಣವನ್ನು ಕೂಡಲೇ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು. ಲಿಂಗಾಯತ ಹೋರಾಟ ಆರಂಭವಾಗಿ ಮೂರು ತಿಂಗಳಾಗಿದೆ. ಯೋಗೀಶಗೌಡರ ಕೊಲೆಯಾಗಿ ಒಂದೂವರೆ ವರ್ಷವಾಗಿದೆ. ಹೀಗಾಗಿ ಲಿಂಗಾಯತ ಧರ್ಮದ ಹೋರಾಟಕ್ಕೂ ಈ ವಿಷಯಕ್ಕೂ ಸಂಬಂಧವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 

ಬಿಜೆಪಿ ಮುಖಂಡರ ಕಡೆಗಣನೆ: ನ.25ರಂದು ಕರ್ನಾಟಕ ಕಲಾ ಕಾಲೇಜಿನ ಶತಮಾನೋತ್ಸವ ಸಮಾರಂಭ ನಡೆಯಲಿದ್ದು, ಈ ಶತಮಾನೋತ್ಸವ ಸಮಿತಿ ಆಮಂತ್ರಣ ಪತ್ರಿಕೆಯಲ್ಲಿ ಬಿಜೆಪಿ ಮುಖಂಡರನ್ನು ಕಡೆಗಣಿಸಿದ್ದಾರೆ. ಸ್ಥಳೀಯ ಶಾಸಕರಾಗಿದ್ದರೂ ತಮ್ಮನ್ನು ಅಧ್ಯಕ್ಷತೆಗೆ ಹಾಗೂ ವಿಪಕ್ಷ ನಾಯಕ ಜಗದೀಶ ಶೆಟ್ಟರ ಹಾಗೂ ಸಂಸದ ಪ್ರಹ್ಲಾದ ಜೋಶಿ ಅವರನ್ನು ಮುಖ್ಯ ಅತಿಥಿಗಳಾಗಿ ಆಹ್ವಾನಿಸಿಲ್ಲ. 

Advertisement

ಬರೀ ವಿಶೇಷ ಆಮಂತ್ರಿತರನ್ನಾಗಿ ಕರೆಯಲಾಗಿದೆ ಎಂದು ಶಾಸಕ ಅರವಿಂದ ಬೆಲ್ಲದ ಆರೋಪಿಸಿದರು.ಈ ಕುರಿತಂತೆ ಕವಿವಿ ಕುಲಪತಿ ಡಾ|ಪ್ರಮೋದ ಗಾಯಿ ಸ್ಪಷ್ಟಪಡಿಸಿದ್ದು, ಕರ್ನಾಟಕ ವಿವಿ ಪೂರ್ಣ ಸರ್ಕಾರದ ಸಂಸ್ಥೆಯಲ್ಲ. ಸ್ವಾಯತ್ತ ಸಂಸ್ಥೆ. ಹೀಗಾಗಿ ಶತಮಾನೋತ್ಸವ ಸಮಿತಿ ನಿರ್ಧಾರದಂತೆ ವಿಶೇಷ ಆಹ್ವಾನಿತರನ್ನಾಗಿ ಕರೆಯಲಾಗಿದೆ ಎಂದು ತಿಳಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next