Advertisement
500 ಲೀ. ಸಾಮಾರ್ಥ್ಯವುಳ್ಳ ಟ್ಯಾಂಕ್‌ನಲ್ಲಿ ಮಳೆ ನೀರು ಸಂಗ್ರಹಿಸಿ ಬಳಿಕ ಅದನ್ನು ಶುದ್ಧೀಕರಿಸಿ ಬಾವಿಗೆ ಹಾಯಿಸುವ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಬಾವಿಯ ನೀರಿನ ಮಟ್ಟದಲ್ಲೂ ಏರಿಕೆ ಕಂಡುಬಂದಿದ್ದು, ಬೇಸಗೆಯಲ್ಲಿ ಈ ಬಾರಿ ನೀರನ ಅಭಾವವಾಗದು ಎಂಬ ಆಶಾಭಾವದಲ್ಲಿ ಹೇಮಾವತಿ ಅವರಿದ್ದಾರೆ.
ಕಡಿಮೆ ಖರ್ಚಿನಲ್ಲಿ ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ಬೇಸಗೆಯಲ್ಲಿ ಉಂಟಾಗುವ ನೀರಿನ ಅಭಾವವನ್ನು ತಪ್ಪಿಸಬುದು. ಈ ನಿಟ್ಟಿನಲ್ಲಿ ಯೋಜನೆ ಅಳವಡಿಸಿಕೊಂಡಿದ್ದೇವೆ.
– ಹೇಮಾವತಿ, ಅಶೋಕ್ ನಗರ ನೀವೂ ಅಳವಡಿಸಿ, ವಾಟ್ಸಪ್‌ಮಾಡಿ
ಉದಯವಾಣಿಯ ಅಭಿಯಾನದಿಂದ ಪ್ರೇರಣೆಗೊಂಡು ಕಾರ್ಯಾಗಾರದಲ್ಲಿ ಭಾಗವಹಿಸಿದವರು ಮಳೆ ನೀರು ಕೊಯ್ಲು ಪದ್ಧತಿಯನ್ನು ತಮ್ಮ ಮನೆಗಳಲ್ಲಿ ಅಳವಡಿಸುತ್ತಿರುವುದು ಗಮನಕ್ಕೆ ಬಂದಿದೆ. ಇನ್ನಷ್ಟು ಮಂದಿಯನ್ನು ಜಲ ಸಂರಕ್ಷಣೆ ಯತ್ತ ತೊಡಗಿಸಲು, ನಿಮ್ಮ ಮನೆಯಲ್ಲಿ ಕೈಗೊಂಡ ಮಳೆ ಕೊಯ್ಲು ವ್ಯವಸ್ಥೆಯ ಕುರಿತು ವಿವರಿಸಿ, ಫೋಟೋ ವಾಟ್ಸಪ್‌ನಲ್ಲಿ ಕಳುಹಿಸಿ. ಅವುಗಳನ್ನು ಪ್ರಕಟಿಸಿ ಮತ್ತಷ್ಟು ಜನರನ್ನು ಉತ್ತೇಜಿಸೋಣ.
-7618774529