Advertisement

ಸಂಘಟನೆಗೆ ಶಕ್ತಿ ತುಂಬುವ ಕಾರ್ಯ ಮಾಡಿ: ಕಾಶಪ್ಪನವರ

05:52 PM Feb 24, 2022 | Shwetha M |

ಇಳಕಲ್ಲ: ಅಸಂಘಟಿತ ಕಾರ್ಮಿಕರೆಲ್ಲರನ್ನು ಸೇರಿಸಿ ಸಂಘಟನೆ ಮೂಲಕ ಶಕ್ತಿಯನ್ನು ತುಂಬುವಂತ ಕಾರ್ಯ ಮಾಡುತ್ತಿರುವ ಬೀದಿ ಬದಿ ವ್ಯಾಪಾರಿ ಸಂಘಟನೆ ಕಾರ್ಯ ಶ್ಲಾಘನೀಯ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

Advertisement

ನಗರದ ಶ್ರೀ ವಿಜಯಮಹಾಂತೇಶ ದಾಸೋಹ ಭವನದಲ್ಲಿ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಇಳಕಲ್ಲ ತಾಲೂಕು ಘಟಕ ಅಡಿಯಲ್ಲಿ ರಾಷ್ಟ್ರೀಯ ಬೀದಿ ಬದಿ ವ್ಯಾಪಾರ ದಿನಾಚರಣೆ, ಕಡುಬಡವ ಬೀದಿ ಬದಿ ವ್ಯಾಪಾರಸ್ಥರಿಗೆ ತಳ್ಳು ಬಂಡಿ ವಿತರಣಾ ಸಮಾರಂಭ ಹಾಗೂ ಉಚಿತ ಆರೋಗ್ಯ ತಪಾಸಣೆ, ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ, ಇಳಕಲ್ಲ ನಗರಸಭೆಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ಡಿಜಿಟಲ್‌ ವ್ಯವಹಾರ ಹಾಗೂ ಎಫ್‌ಎಸ್‌ಎಸ್‌ಎಐ ಕುರಿತು ತರಬೇತಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.

ಸಾನ್ನಿಧ್ಯ ವಹಿಸಿದ್ದ ಇಳಕಲ್ಲ-ಚಿತ್ತರಗಿ ಸಂಸ್ಥಾನಮಠದ ಗುರುಮಹಾಂತ ಶ್ರೀ ಮಾತನಾಡಿ, ಸಂಘಟಿತರಾಗಿ ಸರಕಾರದ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸದೃಢರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಹೇಳಿದರು.

ಎನ್‌ಎಎಸ್‌ವಿಐ ರಾಷ್ಟ್ರೀಯ ಅಧ್ಯಕ್ಷ ಅರಬಿಂದ್‌ ಸಿಂಗಜಿ ಹಾಗೂ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ| ಸಿ.ಇ. ರಂಗಸ್ವಾಮಿ ಮಾತನಾಡಿದರು.ಇದೇ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಸ್ಥರ ಆರೋಗ್ಯ ತಪಾಸಣೆ ನಡೆಸಲಾಯಿತು. ಹಾಗೂ ನಗರದ ಕಡುಬಡವ ಬೀದಿ ಬದಿ ವ್ಯಾಪಾರಸ್ಥರಿಗೆ ತಳ್ಳು ಬಂಡಿಗಳನ್ನು ವಿತರಿಸಲಾಯಿತು. ಇದಕ್ಕೂ ಪೂರ್ವದಲ್ಲಿ ರಾಷ್ಟ್ರೀಯ ಬೀದಿ ಬದಿ ವ್ಯಾಪಾರ ದಿನಾಚರಣೆ ಅಂಗವಾಗಿ ನಗರದಲ್ಲಿ ಬೀದಿ ಬದಿ ವ್ಯಾಪಾರಸ್ಥರ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ರಾಜ್ಯ ಪ್ರಧಾನ ಕಾರ್ಯದರ್ಶಿ ಅನ್ವರ ಶಿರಹಟ್ಟಿ, ಇಳಕಲ್ಲ ತಾಲೂಕು ಅಧ್ಯಕ್ಷ ಪವಾಡೆಪ್ಪ ಚಲವಾದಿ, ನಗರಸಭೆ ಅಧ್ಯಕ್ಷ ಮಂಜುನಾಥ ಶೆಟ್ಟರ, ನಗರಸಭೆ ಪೌರಾಯುಕ್ತ ರಾಮಕೃಷ್ಣ ಸಿದ್ದನಕೊಳ್ಳ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next