Advertisement
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯ ಭೂಸೇನಾ ನಿಗಮದ ಅಧ್ಯಕ್ಷ ರುದ್ರೇಶ್ ಅವರು ಮುಂದಿನ ವಿಧಾನಸಭಾ ಚುನಾವಣೆ ಯಲ್ಲಿ ಚಾಮರಾಜನಗರ ಕ್ಷೇತ್ರಕ್ಕೆ ಬಿಜೆಪಿ ಆಕಾಂಕ್ಷಿ ಎಂದು ಹೇಳಿಕೆ ನೀಡುವ ಮೂಲಕ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಜನರ ಬಳಿ ಇಂತಹ ಹೇಳಿಕೆ ನೀಡುತ್ತಿರುವುದು ಖಂಡನೀ ಯ ಈ ಸಂಬಂಧ ಪಕ್ಷದ ವರಿಷ್ಠರನ್ನು ಭೇಟಿಯಾಗಿ ದೂರು ನೀಡಲಾಗುವುದು ಎಂದರು.
Related Articles
Advertisement
ಆಯಿಷ್ ಆಡಳಿತ ಮಂಡಳಿ ಸದಸ್ಯ ಡಾ. ಎ.ಆರ್. ಬಾಬು ಮಾತನಾಡಿ, ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆ ಮಾಡಿದ್ದೇವೆ. ಪಕ್ಷವನ್ನು ಬಲಪಡಿಸಲು ಶ್ರಮಿಸಿದ್ದೇವೆ. ನಮ್ಮಲ್ಲಿ ಯಾರಿಗೇ ಟಿಕೆಟ್ ಕೊಟ್ಟರೂ ಒಗ್ಗಟ್ಟಿನಿಂದ ಗೆಲುವಿಗೆ ಶ್ರಮಿಸುತ್ತೇವೆ ಎಂದರು. ಸುದ್ದಿಗೋಷ್ಠಿಯಲ್ಲಿ ಜಿ.ಪಂ. ಮಾಜಿ ಸದಸ್ಯ ಸಿ.ಎನ್.ಬಾಲರಾಜ್ ಇದ್ದರು.
ಸಭೆಗೆ ಮಲ್ಲಿಕಾರ್ಜುನಪ್ಪ, ನಾಗಶ್ರೀ ಗೈರು ಸೋಮವಾರ, ನಗರದಲ್ಲಿ ಬಿಜೆಪಿಯ ಪ್ರಮುಖ ಟಿಕೆಟ್ ಆಕಾಂಕ್ಷಿಗಳು ಕರೆದಿದ್ದ ಸುದ್ದಿಗೋಷ್ಠಿಯ ಆಹ್ವಾನದಲ್ಲಿ ಮುಖಂಡರಾದ ಪ್ರೊ. ಕೆ.ಆರ್. ಮಲ್ಲಿಕಾರ್ಜುನಪ್ಪ ಹಾಗೂ ನಾಗಶ್ರೀ ಪ್ರತಾಪ್ ಅವರ ಹೆಸರಿತ್ತು. ಆದರೆ ಅವರಿಬ್ಬರೂ ಗೈರು ಹಾಜರಾಗಿದ್ದರು. ಈ ಬಗ್ಗೆ ಪ್ರಶ್ನಿಸಿದಾಗ, ಇಬ್ಬರೂ ಅನಿವಾರ್ಯ ಕಾರಣಗಳಿಂದ ಬಂದಿಲ್ಲ. ಇಬ್ಬರೂ ಊರಿನಲ್ಲಿಲ್ಲ. ಹಾಗಾಗಿ ಬಂದಿಲ್ಲ. ಸುದ್ದಿಗೋಷ್ಠಿಗೆ ತಮ್ಮ ಸಹಮತವಿದೆ ಎಂದು ತಿಳಿಸಿದ್ದಾರೆ ಎಂದು ನಿಜಗುಣರಾಜು ಹೇಳಿದರು.
ಈಗ ಹೊರಗಿನವರಿಗೆ ಟಿಕೆಟ್ ನೀಡುತ್ತಾರೆಂದು ಒಂದಾಗಿದ್ದೇವೆ ಎನ್ನುತ್ತಿದ್ದೀರಿ. ನಾಳೆ ನಿಮ್ಮಲ್ಲೇ ಒಬ್ಬರಿಗೆ ಟಿಕೆಟ್ ನೀಡಿದರೂ ನೀವು ಅವರ ಪರವಾಗಿ ಕೆಲಸ ಮಾಡುವುದಿಲ್ಲ ಎಂಬ ಆರೋಪಗಳಿವೆಯಲ್ಲ? ಎಂದು ಪ್ರಶ್ನಿಸಿದಾಗ, ಪ್ರತಿ ಚುನಾವಣೆಯಲ್ಲೂ ನಾವು ಪಕ್ಷದ ಅಭ್ಯರ್ಥಿಯ ಪರವಾಗಿ ನಮ್ಮ ಹಣ ಹಾಕಿಕೊಂಡು ಕೆಲಸ ಮಾಡಿದ್ದೇವೆ ಎಂದು ಮಲ್ಲೇಶ್ ಹೇಳಿದರು. ಜನರು ಬದಲಾವಣೆ ಬಯಸಿದ್ದಾರೆ: ಕ್ಷೇತ್ರ ಅಭಿವೃದ್ಧಿಯಲ್ಲಿ ಹಿಂದುಳಿದಿದೆ.
ಜನರ ಸಮಸ್ಯೆಗೆ ಸ್ಪಂದನೆಯಿಲ್ಲ ಎಂಬ ನೋವಿದೆ. ಹಾಗಾಗಿ ಈ ಬಾರಿ ಬದಲಾವಣೆ ಬಯಸಿದ್ದಾರೆ. ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದು ಜನರಿಗೆ ತಿಳಿಸುವುದಕ್ಕಾಗೇ ಈ ಸುದ್ದಿಗೋಷ್ಠಿ ಕರೆದಿದ್ದೇವೆ ಎಂದು ಕಾಡಾ ಅಧ್ಯಕ್ಷ ನಿಜಗುಣರಾಜು ತಿಳಿಸಿದರು.