Advertisement

ಸಂಘಟನೆ ಕಾರ್ಯಕ್ಕೆ ಆದ್ಯತೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಲಹೆ

03:38 AM Aug 09, 2020 | Hari Prasad |

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿಗೆ ಸಂಘಟನಾತ್ಮಕ ಶಕ್ತಿ ಚೆನ್ನಾಗಿದೆ.

Advertisement

ಆದರೂ, ಹಳೆ ಮೈಸೂರು ಭಾಗದ ಜಿಲ್ಲೆಗಳಲ್ಲಿ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜ್ಯ ಬಿಜೆಪಿ ನೂತನ ಪದಾಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳೊಂದಿಗೆ ಶನಿವಾರ ವರ್ಚುವಲ್‌ ವ್ಯವಸ್ಥೆ ಮೂಲಕ ಮಾತನಾಡಿದ ಅವರು, ಕರ್ನಾಟಕವು ಕೋವಿಡ್ 19 ತಡೆಗಟ್ಟುವಲ್ಲಿ ದೇಶಕ್ಕೆ ಮಾದರಿಯಾಗಿದೆ ಮತ್ತು ಇದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಎಲ್ಲೆಲ್ಲಿ ಸಂಘಟನೆ ದುರ್ಬಲವಾಗಿದೆಯೋ ಆ ಪ್ರದೇಶ ದಲ್ಲಿ ಸಂಘಟನ ಕಾರ್ಯ ಚುರುಕುಗೊಳಿಸಲು ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಬೇಕು. ಇಲ್ಲಿ ಒಂದು ವರ್ಷದ ಯೋಜನೆಯನ್ನು ಸಿದ್ಧಪಡಿಸಿ, ಸಚಿವರು ಸಹಿತವಾಗಿ ಹೊಸ ಪದಾಧಿಕಾರಿಗಳಿಗೆ ಜವಾಬ್ದಾರಿ ನೀಡಬೇಕು. ಒಂದು ವರ್ಷದಲ್ಲಿಈ ಭಾಗದಲ್ಲಿ ಪಕ್ಷದ ಸಂಘಟನೆ ಇನ್ನಷ್ಟು ಉತ್ಕೃಷ್ಟವಾಗಿ ಬೆಳೆಯಬೇಕು ಎಂದು ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಸಲಹೆ ನೀಡಿದರು.

ಐಟಿ ಘಟಕ ಬಲಿಷ್ಠವಾಗಬೇಕು
ಐಟಿ ಘಟಕವು ಇನ್ನಷ್ಟು ಬಲಿಷ್ಠವಾಗಬೇಕು. ಪ್ರತಿ ವಾರವು ಮಾಹಿತಿ ನೀಡುತ್ತಿರಬೇಕು. ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳು, ಮುಖ್ಯಮಂತ್ರಿ ಹಾಗೂ ಪ್ರಧಾನಿ ಹಾಗೂ ಪ್ರಮುಖ ನಾಯಕರು ಭಾಷಣ, ಯೋಜನೆಯ ಘೋಷಣೆ, ಕಾರ್ಯಕ್ರಮದ ಅನುಷ್ಠಾನ ಇತ್ಯಾದಿಗಳ ಕುರಿತ ವಿಡಿಯೋ ಕ್ಲಿಪ್ಪಿಂಗ್‌ ಅಥವಾ ಮಾಹಿತಿಯನ್ನು ವಾಟ್ಸ್‌ಆ್ಯಪ್‌ ಗ್ರೂಪ್‌ ಗಳಿಗೆ ಕಳುಹಿಸುವ ಕಾರ್ಯವನ್ನು ಮಾಡಬೇಕು ಎಂದರು.

Advertisement

ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಮಾತನಾಡಿ, ಜಗತ್ತಿನಲ್ಲೇ ಕೋವಿಡ್ ಸೋಂಕನ್ನು ನಮ್ಮ ದೇಶದಲ್ಲಿ ಸಮರ್ಥವಾಗಿ ನಿಭಾಯಿಸಲಾಗಿದೆ. ಅದಕ್ಕಾಗಿ ಕೇಂದ್ರ ಸರಕಾರವನ್ನು ಅಭಿನಂದಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಕೇಂದ್ರ ಸರಕಾರದ ಕೆಲವು ಪ್ರಮುಖ ನಿರ್ಣಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಲಾಯಿತು. ರಾಜ್ಯ ಸರಕಾರದ ಒಂದು ವರ್ಷದ ಸಾಧನೆಯನ್ನೂ ಮುಕ್ತಕಂಠದಿಂದ ಶ್ಲಾಘಿ ಸಲಾಯಿತು.

ವಾಟ್ಸ್‌ಆ್ಯಪ್‌ ಗ್ರೂಪ್‌ ಕಡ್ಡಾಯ
ಈಗಾಗಲೇ ಇರುವ ಕಾರ್ಯಕರ್ತರ ವಾಟ್ಸ್‌ಆ್ಯಪ್‌ ಗ್ರೂಪ್‌ ಗಳನ್ನು ಇನ್ನಷ್ಟು ಸುಧಾರಿಸಬೇಕು. ಶಾಸಕರು, ಸಚಿವರು ಹಾಗೂ ಪದಾಧಿಕಾರಿಗಳನ್ನು ಕೂಡ ವಾಟ್ಸ್‌ ಆ್ಯಪ್‌ ಗ್ರೂಪ್‌ಗೆ ಸೇರಿಸಬೇಕು. ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಏನಾಗುತ್ತಿದೆ ಎಂಬುದು ಅವರಿಗೆ ತಿಳಿಯಬೇಕು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next