Advertisement

ಹುದ್ದೆ ಕಾಯಂ ಮಾಡುವಂತೆ ಆಗ್ರಹಿಸಿ ಗುತ್ತಿಗೆ ವೈದ್ಯರ ಉಪವಾಸ ಜೊತೆ ಕೆಲಸ

02:28 PM Jul 07, 2020 | mahesh |

ಬೆಂಗಳೂರು: ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ವೈದ್ಯರು ತಮ್ಮ ಸೇವೆಯನ್ನು ಕಾಯಂ ಮಾಡುವಂತೆ ಒತ್ತಾಯಿಸಿ ಮಂಗಳವಾರ ಉಪವಾಸದೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದು, ವಿಶಿಷ್ಟವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ನಮ್ಮನ್ನು ಪರಿಗಣಿಸದೆ ಇದ್ದಲ್ಲಿ ನಾಳೆಯಿಂದ 507 ವೈದ್ಯಾಧಿಕಾರಿಗಳು ಕೆಲಸ ನಿರ್ವಹಿಸದೇ ಇರಲು ತೀರ್ಮಾನಿಸಿದ್ದಾರೆ. ಕಷ್ಟವನ್ನು ಅರ್ಥ ಮಾಡಿಕೊಂಡು ಕಾಯಂಗೊಳಿಸಬೇಕು ಎಂದು ಸರಕಾರವನ್ನು ಆಗ್ರಹಿಸಿದ್ದಾರೆ. ನಿನ್ನೆಯಾ ದಿನ ಕಪ್ಪು ಬಟ್ಟೆ ಧರಿಸಿ ಕೆಲಸ ನಿರ್ವಹಿ ರಾಜ್ಯ ಸರಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು ಕೂಡ ಯಾವುದೇ ಪ್ರಯೋಜನವಾಗಿರಲಿಲ್ಲ ಇಂದು ಮತ್ತೆ ಉಪವಾಸ ಇದ್ದು ಕಾರ್ಯ ನಿರ್ವಹಿಸುದರೊಂದಿಗೆ ವಿಶಿಷ್ಟವಾಗಿ ಪ್ರತಿಭಟನೆ ಕೈಗೊಂಡಿದ್ದಾರೆ. 

Advertisement

ಹಿಂದಿನಿಂದಲೂ ಮೂರು ವರ್ಷ ಸೇವೆ ಮಾಡಿರುವ ಗುತ್ತಿಗೆ ವೈದ್ಯರನ್ನು ಕಾಯಂ ಮಾಡಲಾಗಿದೆ. ಪ್ರವಾಹ, ಬರಗಾಲ, ಕೋವಿಡ್ 19 ಸಮಯದಲ್ಲೂ ನಾವು ಹಿಂಜರಿಯದೇ ಜನರ ಸೇವೆ ಮಾಡಿದ್ದೇವೆ. ಕಾಯಂ ವೈದ್ಯರಷ್ಟೇ ಜವಾಬ್ದಾರಿಯುತವಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಹೀಗಿದ್ದರೂ ಗುತ್ತಿಗೆ ಆಧಾರಿತ ವೈದ್ಯರ ಸೇವೆಯನ್ನು ಕಾಯಂಗೊಳಿಸುವ ಪ್ರಕ್ರಿಯೆಯನ್ನು ಸರಕಾರ ರದ್ದು ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next