ಬೆಂಗಳೂರು: ಕೆಲಸ ಮಾಡುತ್ತಿರುವ ಕಾರ್ಖಾನೆಯಲ್ಲಿ ಸರಿಯಾಗಿ ರಜೆ ನೀಡುತ್ತಿಲ್ಲ ಎಂಬ ಕಾರಣಕ್ಕೆ ಮನ ನೊಂದ ಕಾರ್ಮಿಕನೊಬ್ಬ ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲ ಗುಂಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಟಿ.ದಾಸರಹಳ್ಳಿ ನಿವಾಸಿ ಗೋವಿಂದ ರಾಜು (26) ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕ. ಗುರುವಾರ ಸಂಜೆ 6 ಗಂಟೆಗೆ ಟಿ.ದಾಸರಹಳ್ಳಿಯ ಆರ್‌ಪಿಎಂ ಅಪಾ ರ್ಟ್‌ಮೆಂಟ್‌ನಲ್ಲಿ ಘಟನೆ ನಡೆದಿದೆ.
ಆಂಧ್ರಪ್ರದೇಶದ ಮಡಕಶಿರಾ ಮೂಲದ ಗೋವಿಂದರಾಜು ಆರು ವರ್ಷಗಳಿಂದ ಪೀಣ್ಯದ ಕೆಆರ್‌ಡಿಆರ್ ವಾಚ್ ತಯಾರಿಕಾ ಕಾರ್ಖಾನೆಯಲ್ಲಿ ಕೆಲಸ ಮಾಡಿಕೊಂಡಿದ್ದ. ಜತೆಗೆ ಆರ್ ಪಿಎಂ ಅಪಾರ್ಟ್‌ಮೆಂಟ್‌ನ ನಿರ್ವಹಣೆ ವಿಭಾಗದಲ್ಲೂ ಕೆಲಸ ಮಾಡುತ್ತಿದ್ದ. ಹೀಗಾಗಿ ರಾತ್ರಿ ಇದೇ ಅಪಾರ್ಟ್ಮೆಂಟ್‌ನಲ್ಲಿಯೇ ಮಲಗುತ್ತಿದ್ದ ಎಂದು ಪೊಲೀಸರು ಹೇಳಿದರು.
ರಜೆ ಕೊಡದೇ ಕಿರುಕುಳ: ಕೆಲ ದಿನಗಳ ಹಿಂದೆ ಗೋವಿಂದರಾಜು, ಕಾರ್ಖಾ ನೆಯ ಹಿರಿಯ ಅಧಿಕಾರಿಗಳ ಬಳಿ ರಜೆ ಬೇಕೆಂದು ಕೇಳಿದ್ದಾನೆ. ಆದರೆ, “ರಜೆ ಕೊಡಲು ಸಾಧ್ಯವಿಲ್ಲ. ಮತ್ತೂಮ್ಮೆ ರಜೆ ಕೇಳಿದರೆ ಕೆಲಸದಿಂದ ತೆಗೆದು ಹಾಕುತ್ತೇನೆ’ ಎಂದು ಹೆದರಿಸಿದ್ದಾರೆ. ಅದರಿಂದ ಬೇಸರಗೊಂಡ ಗೋವಿಂದ ರಾಜು, ಗುರುವಾರ ಕಾರ್ಖಾನೆಯ ಕೆಲಸಕ್ಕೆ ಹೋಗದೆ ಅಪಾರ್ಟ್‌ಮೆಂಟ್ ನಲ್ಲಿಯೇ ಉಳಿದುಕೊಂಡಿದ್ದ. ಸಂಜೆ 6 ಗಂಟೆಗೆ ತಾನು ಉಳಿದುಕೊಂಡಿದ್ದ ಕೊಠಡಿ ಪಕ್ಕದಲ್ಲಿರುವ ಮೆಟ್ಟಿಲುಗಳ ಕಂಬಿಗೆ ಸೀರೆಕಟ್ಟಿಕೊಂಡು ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೆಲ ಹೊತ್ತಿನ ಬಳಿಕ ಅದನ್ನು ಗಮನಿಸಿದ ಅಪಾರ್ಟ್‌ಮೆಂಟ್ ನಿವಾಸಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ.
ಡೆತ್‌ನೋಟ್ ಪತ್ತೆ: ಗೋವಿಂದರಾಜು ಮೃತದೇಹದ ಬಳಿ ಡೆತ್‌ನೋಟ್ ಪತ್ತೆಯಾಗಿದ್ದು, ಕೆಲಸ ಮಾಡುತ್ತಿದ್ದ ಕಾರ್ಖಾನೆಯ ಮ್ಯಾನೇ ಜ ರ್ ಮತ್ತು ಸೂಪರ್ ವೈಸರ್ ರಜೆ ನೀಡದೆ ಕಿರುಕುಳ ನೀಡುತ್ತಿದ್ದಾರೆ. ಮತ್ತೂಮ್ಮೆ ರಜೆ ಕೇಳಿದರೆ ಕೆಲಸದಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎದು ಡೆತ್‌ನೋಟ್‌ನಲ್ಲಿ ಉಲ್ಲೇಖೀಸಿದ್ದಾನೆ. ಈ ಹಿನ್ನೆಲೆಯಲ್ಲಿ ಕಾರ್ಖಾನೆಯ ಮ್ಯಾ ನೇಜರ್ ಮತ್ತು ಸೂಪರ್ ವೈಸರ್ ವಿರುದ್ಧ ಪ್ರಕರಣ ದಾಖಲಿ ಸಲಾಗಿದೆ ಎಂದು ಪೊಲೀಸರು ಹೇಳಿದರು. ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.