Advertisement
ಕಾರ್ಮಿಕರ ದಿನಾಚರಣೆ ಅಂಗವಾಗಿ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ಕಂಡುಬಂದ ದೃಶ್ಯಗಳಿವು. ಹಲವಾರು ಸಂಘಟನೆ, ಒಕ್ಕೂಟಗಳಡಿ ಸಹಸ್ರ ಸಂಖ್ಯೆಯಲ್ಲಿ ಕಾರ್ಮಿಕರು ಒಗ್ಗಟ್ಟಾಗಿ ಶಕ್ತಿ ಪ್ರದರ್ಶನ ಮಾಡಿದರು.
Related Articles
Advertisement
ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಮಾತನಾಡಿ, ದೇಶದಲ್ಲಿ ಬಂಡವಾಳಶಾಹಿಗಳು ಅಭಿವೃದ್ಧಿಯಾಗುತ್ತಿದ್ದು, ದುಡಿಯುವ ವರ್ಗ ಹಿಂದುಳಿಯಲು ಆಳುವ ವರ್ಗಗಳ ದ್ವಿಮುಖ ನೀತಿಯೇ ಕಾರಣ ಎಂದು ಆರೋಪಿಸಿದರು. ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನಕ್ಕೆ ಆಗ್ರಹಿಸಿ ದಶಕಗಳಿಂದ ಹೋರಾಟ ಮಾಡಲಾಗುತ್ತಿದ್ದರೂ ಆಳುವ ವರ್ಗಗಳು ನ್ಯಾಯ ದೊರಕಿಸಿಲ್ಲ ಎಂದು ಆಕ್ರೋಶವ್ಯಕ್ತಪಡಿಸಿದರು.
ಸಭೆಗೂ ಮುನ್ನ ಪುರಭವನದಿಂದ ಆವರಣದಿಂದ ಸ್ವಾತಂತ್ರವ್ಯ ಉದ್ಯಾನದವರೆಗೂ ಸಿಐಟಿಯು ನೇತೃತ್ವದಲ್ಲಿ ಮೆರವಣಿಗೆ ನಡೆಯಿತು. ನೂರಾರು ಕಾರ್ಮಿಕರು ಸಿಐಟಿಯು ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಬಿಎಂಟಿಸಿಯಿಂದ ನಗದು ಪುರಸ್ಕಾರ: ಸಂಸ್ಥೆಯ ಎಲ್ಲ 45 ಘಟಕಗಳಲ್ಲಿ ನೌಕರರಿಂದ ಕಾರ್ಮಿಕ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರತಿ ಘಟಕಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ತಲಾ ಐವರು ಚಾಲಕರು, ಮೂವರು ನಿರ್ವಾಹಕರು ಹಾಗೂ ಇಬ್ಬರು ಮೆಕಾನಿಕ್‌ಗಳಿಗೆ ಸಾವಿರ ರೂ. ನಗದು ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಆಯಾ ವಿಭಾಗ ಮತ್ತು ಘಟಕಗಳ ಅಧಿಕಾರಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು.
ಪೌರಕಾರ್ಮಿಕರಿಗೆ ರಜಾ-ಮಜಾ: ಪಾಲಿಕೆ ವ್ಯಾಪ್ತಿಯಲ್ಲಿ ಇರುವ ಸುಮಾರು 17 ಸಾವಿರ ಪೌರಕಾರ್ಮಿಕರಿಗೂ ವೇತನ ಸಹಿತ ರಜೆ ಘೋಷಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರೆಲ್ಲಾ ನಗರದ ವಿವಿಧೆಡೆ ಹಮ್ಮಿಕೊಂಡಿದ್ದ ಕಾರ್ಮಿಕ ದಿನಾಚರಣೆಗಳು, ರ್ಯಾಲಿಗಳಲ್ಲಿ ಭಾಗವಹಿಸಿದ್ದರು. ಈ ಮೊದಲು ಅವರಿಗೆಲ್ಲಾ ಕಾರ್ಮಿಕ ದಿನದ ರಜೆಯನ್ನು ಮತ್ತೂಂದು ದಿನ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು.