Advertisement

ಕಾರ್ಮಿಕರಿಗೆ ವೇತನ ಪಾವತಿಸಲು ಆಗ್ರಹ

05:37 AM Jul 04, 2020 | Lakshmi GovindaRaj |

ಮೈಸೂರು: ಉದ್ಯೋಗ, ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಹಾಗೂ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. ಜಿಲ್ಲೆಯಲ್ಲಿ ಕೋವಿಡ್‌-19 ಹೆಸರಿನಲ್ಲಿ ಮುಚ್ಚಿರುವ ಎಲ್ಲಾ ಕೈಗಾರಿಕೆ, ಸಂಸ್ಥೆಗಳನ್ನು ತೆರೆದು ಎಲ್ಲರಿಗೂ ಉದ್ಯೋಗ ನೀಡಬೇಕು.

Advertisement

ವೇತನ ಪಾವತಿಸಬೇಕು.  ಮಂಚೂಣಿ ಆರೋಗ್ಯ ಯೋಧರಿಗೆ ಸುರಕ್ಷತಾ ಕ್ರಮಗಳನ್ನು ಒದಗಿಸಬೇಕು. ಹಿಂದಿರುಗಿರುವ ಎಲ್ಲಾ ವಲಸೆ ಕಾರ್ಮಿಕರಿಗೆ ಕೆಲಸದ ಖಾತ್ರಿ ಒದಗಿಸಬೇಕು. ಎಲ್ಲಾ ಆದಾಯ ರಹಿತ ತೆರಿಗೆ ಪಾವತಿಗಳ ಕುಟುಂಬಗಳಿಗೆ ಮೂರು ತಿಂಗಳವರೆಗೆ  ಮಾಸಿಕ 7500 ರೂ.ನಗದು ವರ್ಗಾವಣೆ ಮಾಡಬೇಕು. ಯೋಜನಾ ಕಾರ್ಮಿಕರಿಗೆ ಗೌರವ ಧನ ನೀಡಬೇಕು ಎಂದು ಒತ್ತಾಯಿಸಿದರು.

ನರೇಗಾ ವಿಸ್ತರಿಸಿ: ವಲಸೆ ಕಾರ್ಮಿಕರಿಗಾಗಿ ನರೇಗಾ ಯೋಜನೆಯನ್ನು ಹೆಚ್ಚಿಸಿ ನಗರ ಪ್ರದೇಶಕ್ಕೆ ವಿಸ್ತರಿಸಬೇಕು. ಪೂರ್ಣ ವೇತನದೊಂದಿಗೆ ಉದ್ಯೋಗಗಳನ್ನು ಮರುಸ್ಥಾಪಿಸಿ ಮತ್ತು ಲಾಕ್‌ಡೌನ್‌ ಅವಧಿಯಲ್ಲಿ ಕೆಲಸದಿಂದ ತೆಗೆದು  ಹಾಕಿದವರನ್ನು ಪುನಃ ಕೆಲಸಕ್ಕೆ ಸೇರಿಸಿಕೊಳ್ಳಬೇಕು. ಎಲ್ಲಾ ಕಾರ್ಮಿಕರಿಗೆ ಕನಿಷ್ಠ 6 ತಿಂಗಳವರೆಗೆ ಪಡಿತರ ಒದಗಿಸಬೇಕು. ಕೋವಿಡ್‌-19ನ್ನು ವೈದ್ಯಕೀಯ ತುರ್ತು ಪರಿಸ್ಥಿತಿ ಎಂದು ಪರಿಗಣಿಸಬೇಕು. ಖಾಸಗೀಕರಣದ ನಡೆಯನ್ನು  ಕೈಬಿಡಬೇಕು.

ವಿದ್ಯುತ್‌ ತಿದ್ದುಪಡಿ ಮಸೂದೆ 2020ನ್ನು ಕೈಬಿಡಬೇಕು. ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಮತ್ತು ಪಿಂಚಣಿದಾರರಿಗೆ ಡಿಎ ಮರು ಸ್ಥಾಪಿಸಬೇಕು. ಕಾರ್ಮಿಕ ಕಾನೂನುಗಳನ್ನು ಬದಲಾಯಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರ ಮೇಟಿ, ಹೆಚ್‌.ಆರ್‌.ಶೇಷಾದ್ರಿ, ಜೆ.ಜಯರಾಂ, ಅನಿಲ್‌ ಕುಮಾರ್‌ ಮತ್ತಿತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next