Advertisement

ಕಾರ್ಮಿಕರು ಆಯುಷ್ಮಾನ್ ಕಾರ್ಡ್‌ ಪಡೆಯಿರಿ

01:21 PM May 29, 2022 | Team Udayavani |

ಕಾರಟಗಿ: ಉದ್ಯೋಗ ಖಾತ್ರಿ ಯೋಜನೆ ಯಡಿ ಕಾರ್ಯ ನಿರ್ವಹಿಸುವ ಎಲ್ಲ ಕೂಲಿ ಕಾರ್ಮಿಕರು ಕಡ್ಡಾಯವಾಗಿ ಆಯುಷ್ಮಾನ್‌ ಕಾರ್ಡ್‌ ಮಾಡಿಸಿಕೊಳ್ಳಬೇಕು ಎಂದು ತಾಪಂ ಸಹಾಯಕ ನಿರ್ದೇಶಕ (ಗ್ರಾ.ಉ.) ನರಸಪ್ಪ ಹೇಳಿದರು.

Advertisement

ತಾಲೂಕಿನ ಬರಗೂರ ಗ್ರಾಪಂ ವ್ಯಾಪ್ತಿಯ ಕೂಲಿಕಾರರು ಜೀರಾಳ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಹಾಗೂ ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಕಾರ್ಡ್‌ ವಿತರಣೆ ಅಭಿಯಾನದಲ್ಲಿ ಮಾತನಾಡಿದ ಅವರು, ಆಯುಷ್ಮಾನ್‌ ಕಾರ್ಡ್‌ ಸೌಲಭ್ಯ ಹೊಂದಿದರೆ ವರ್ಷಕ್ಕೆ 5 ಲಕ್ಷ ರೂ. ವರೆಗೆ ಚಿಕಿತ್ಸೆ ಪಡೆಯಲು ಅವಕಾಶ ಇರುತ್ತದೆ. ಜತೆಗೆ ಕೂಲಿಕಾರರು ಇ-ಶ್ರಮ ಪೊರ್ಟಲ್‌ ನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಅಲ್ಲದೇ ನರೇಗಾ ಕೂಲಿಕಾರರಿ ಅನುಕುಲವಾಗಲೆಂದು ಕಾಮಗಾರಿ ಸ್ಥಳದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ. ಕೋವಿಡ್‌ ಲಸಿಕೆ ಹಾಕಿಸಿಕೊಳ್ಳದವರು ಲಸಿಕೆ ಕಾಕಿಸಿಕೊಂಡು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ತಾಪಂ ಸಹಾಯಕ ನಿರ್ದೇಶಕ ನರಸಪ್ಪ ಅವರು ಕೊವಿಡ್‌ ಲಸಿಕಾ ಅಭಿಯಾನದ ಶಿಬಿರದಲ್ಲಿ ಬೂಸ್ಟರ್‌ ಡೋಸ್‌ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕೂಲಿಕಾರರಿಗೆ ಲಸಿಕೆ ಹಾಕಿಸಿಕೊಳ್ಳಲು ಪ್ರೇರೇಪಿಸಿದರು. ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಯುತ್ತಿದ್ದವರಿಗೆ ಮನವೊಲಿಸಿ ಲಸಿಕೆ ಹಾಕಿಸಿದರು. ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಗುರುದೇವಮ್ಮ, ಗ್ರಾಪಂ ಅಧ್ಯಕ್ಷರಾದ ಯಲ್ಲಮ್ಮ ದೇವಪ್ಪಗೌಡ, ಆರೋಗ್ಯ ಸಹಾಯಕಿಯರು, ಗ್ರಾಪಂ ಸಿಬ್ಬಂದಿ, ಗ್ರಾಮ ಕಾಯಕ ಮಿತ್ರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next