Advertisement

ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಅರ್ಹರಿಗೆ ಅನ್ಯಾಯ

06:17 PM Jan 22, 2020 | Suhan S |

ಚಿತ್ರದುರ್ಗ: ನೋಂದಾಯಿತ ಕಟ್ಟಡ ಕಾರ್ಮಿಕರ ಮರಣಕ್ಕೆ 10 ಲಕ್ಷ ರೂ. ಧನಸಹಾಯ, ಕಟ್ಟಡಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನವನ್ನು ದ್ವಿಗುಣಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ನೂರಾರು ಕಾರ್ಮಿಕರು ನಗರದಲ್ಲಿ ಪ್ರತಿಭಟನೆ ನಡೆಸಿದರು.

Advertisement

ನಗರದ ನೀಲಕಂಠೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಒನಕೆ ಓಬವ್ವ ವೃತ್ತಕ್ಕೆ ಆಗಮಿಸಿದ ಪ್ರತಿಭಟನಾಕಾರರು, ಮಾನವ ಸರಪಳಿ ರಚಿಸಿ ಕಾರ್ಮಿಕ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಜಿಲ್ಲಾ ಧಿಕಾರಿ ಕಚೇರಿಗೆ ತೆರಳಿ ಅಲ್ಲಿಯೂ ಪ್ರತಿಭಟಿಸಿ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ ಸರಿಯಾಗಿ ಉದ್ಯೋಗ ದೊರೆಯುತ್ತಿಲ್ಲ. ನಡೆಯುತ್ತಿರುವ ಕಟ್ಟಡ ಮತ್ತಿತರೆ ಕಾಮಗಾರಿಗಳಿಗೆ ಹೊರ ರಾಜ್ಯಗಳಿಂದ ಕಾರ್ಮಿಕರನ್ನು ಕರೆತರಲಾಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಅಥವಾ ಜನಪ್ರತಿನಿ ಗಳು ಚಕಾರ ಎತ್ತುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳು ಮರೀಚಿಕೆಯಾಗಿವೆ. ಮಂಡಳಿ ಆರಂಭವಾಗಿ 13 ವರ್ಷ ಕಳೆದರೂ ಒಬ್ಬನೇ ಒಬ್ಬ ನೋಂದಾಯಿತ ಕಾರ್ಮಿಕನಿಗೆ ಮಂಡಳಿಯಿಂದ ಮನೆ ನಿರ್ಮಾಣ ಮಾಡಿಕೊಟ್ಟಿಲ್ಲ ಎಂದು ದೂರಿದರು.

ಕಾರ್ಮಿಕ ಮಂಡಳಿಯಲ್ಲಿ 8 ಸಾವಿರ ಕೋಟಿ ಹಣವಿದೆ. ಇದರಲ್ಲಿ ಶೇ. 10 ರಷ್ಟು ಮಾತ್ರ ಖರ್ಚಾಗಿದೆ. ಮಂಡಳಿಗೆ ವರ್ಷಕ್ಕೆ 500 ರಿಂದ 600 ಕೋಟಿ ರೂ. ಹಣ ಸಂಗ್ರಹವಾಗುತ್ತಿದೆ. ಆದರೆ ಕಳೆದ 12 ವರ್ಷದಲ್ಲಿ ಕೇವಲ 532 ಕೋಟಿ ರೂ.ಗಳನ್ನು ಮಾತ್ರ ಖರ್ಚು ಮಾಡಲಾಗಿದೆ. ನೋಂದಾಯಿತ ಕಟ್ಟಡ ಕಾರ್ಮಿಕರ ಸಹಜ ಸಾವಿಗೆ 5 ಲಕ್ಷ ರೂ. ಪರಿಹಾರ ನೀಡಬೇಕು. 60 ವರ್ಷ ತುಂಬಿದ ಕಟ್ಟಡ ಕಾರ್ಮಿಕರಿಗೆ ಬದುಕಿನ ಅಂತ್ಯದವರೆಗೆ ವೈದ್ಯಕೀಯ ಧನಸಹಾಯ ಮಾಡಬೇಕು ಎಂದು ಒತ್ತಾಯಿಸಿದರು.

Advertisement

ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎನ್‌. ರಮೇಶ್‌, ಉಪಾಧ್ಯಕ್ಷ ಗೌಸ್‌ಪೀರ್‌, ಪ್ರಧಾನ ಕಾರ್ಯದರ್ಶಿ ವೈ. ಕುಮಾರ್‌, ಖಜಾಂಚಿ ಡಿ. ಈಶ್ವರಪ್ಪ, ಜಿಲ್ಲಾಧ್ಯಕ್ಷ ಜೆ. ಮಂಜುನಾಥ್‌, ಜಿಲ್ಲಾ ಖಜಾಂಚಿ ಇಮಾಮ್‌ ಮೊಹಿಮುದ್ದೀನ್‌, ಸಂಚಾಲಕ ವೈ. ಬಸವರಾಜ್‌, ಮುಜೀಬುಲ್ಲಾ, ರಾಜಣ್ಣ, ಯಲ್ಲಪ್ಪ, ತಿಪ್ಪೇಸ್ವಾಮಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next