Advertisement

ನಾಳೆ ಪೌರತ್ವ ಕಾಯ್ದೆ ವಿರುದ್ಧ ಕಾರ್ಯಾಗಾರ

10:49 PM Jan 14, 2020 | Team Udayavani |

ಬೆಂಗಳೂರು: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯಿದೆ ಜಾಗೃತಿಗೆ ಬಿಜೆಪಿ ಮನೆ ಮನೆ ಭೇಟಿ ಅಭಿಯಾನ ಆರಂಭಿಸಿದ್ದು, ಅದಕ್ಕೆ ವಿರುದ್ಧವಾಗಿ ಕಾಂಗ್ರೆಸ್‌ ಜನ ಜಾಗೃತಿ ಮೂಡಿಸಲು ಜ.16ರಂದು ಪಕ್ಷದ ಪ್ರಮುಖ ನಾಯಕರಿಗೆ ಒಂದು ದಿನದ ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದು ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ ಹೇಳಿದರು.

Advertisement

ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿ, ಪೌರತ್ವ ಕಾಯಿದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ಯೋಜನೆ ಅನುಷ್ಠಾನಗೊಳಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಬಿಜೆಪಿ ಕಾಯ್ದೆ ಪರ ಜನ ಜಾಗೃತಿ ಮೂಡಿಸಲು ಪ್ರಯತ್ನ ನಡೆಸುತ್ತಿದೆ. ಕಾಂಗ್ರೆಸ್‌ ಕಾಯ್ದೆಯಲ್ಲಿನ ನಕಾರಾತ್ಮಕ ಅಂಶಗಳ ಬಗ್ಗೆ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಜನಜಾಗೃತಿಗೊಳಿಸಲು ತಾಲೂಕು, ಜಿಲ್ಲಾ ಮಟ್ಟದ ಪಕ್ಷದ ಕಾರ್ಯಕರ್ತರಿಗೆ ತಿಳಿವಳಿಕೆ ಮೂಡಿಸಲಿದೆ.

ಹೀಗಾಗಿ ಶಾಸಕರು, ಕೆಪಿಸಿಸಿ ಮಾಜಿ ಪದಾಧಿಕಾರಿಗಳು, ವಕ್ತಾರರು ಹಾಗೂ ಆಯ್ದ ಮುಖಂಡರಿಗೆ ಜ.16ರಂದು ಕೆಪಿಸಿಸಿ ಕಚೇರಿಯಲ್ಲಿ ಒಂದು ದಿನದ ಕಾರ್ಯಾಗಾರ ಏರ್ಪಡಿಸ ಲಾಗಿದೆ ಎಂದರು. ವಿಪಕ್ಷ ನಾಯಕ ಸಿದ್ದರಾಮಯ್ಯ, ಮೇಲ್ಮನೆ ವಿಪಕ್ಷ ನಾಯಕ ಎಸ್‌.ಆರ್‌.ಪಾಟೀಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ, ಶಾಸಕರು ಪಾಲ್ಗೊಳ್ಳಲಿದ್ದಾರೆಂದರು.

Advertisement

Udayavani is now on Telegram. Click here to join our channel and stay updated with the latest news.

Next