ಬೆಳ್ತಂಗಡಿ: ಗ್ರಾಮಗಳ ಅಭಿವೃದ್ಧಿಯಾಗಬೇಕಾದರೆ ಜನರ ಅಭಿವೃದ್ಧಿಯಾಗಬೇಕು. ಗ್ರಾಮೀಣ ಜನರ ಸಮಗ್ರ ಅಭಿವೃದ್ಧಿಯಿಂದ ದೇಶದ ಪ್ರಗತಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಧರ್ಮಸ್ಥಳದಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಆಶ್ರಯದಲ್ಲಿ ಹಿರಿಯ ಶ್ರೇಣಿಯ ಅಧಿಕಾರಿಗಳಿಗೆ ಆಯೋಜಿಸ ಲಾದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಧರ್ಮಸ್ಥಳದಿಂದ ನಡೆಸಲ್ಪಡುವ ಅನೇಕ ಸಮಾಜಮುಖಿ ಸೇವಾ ಕಾರ್ಯಗಳ ಕುರಿತು ಅಧಿಕಾರಿಗಳು ಮೂರು ದಿನ ಅಧ್ಯಯನ ನಡೆಸಿದರು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ಪ್ರೊ| ಸಂಕರ್ಷನ್ ಬಸು, ಪ್ರೊ| ದಾಮೋದರ್, ಪ್ರೊ| ಶರತ್ ಕುಮಾರ್, ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಬಿ. ಯಶೋವರ್ಮ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ| ಎಲ್.
ಎಚ್. ಮಂಜುನಾಥ್ ಉಪಸ್ಥಿತರಿದ್ದರು. ಒಟ್ಟು 40 ಮಂದಿ ಹಿರಿಯ ಶ್ರೇಣಿಯ ಅಧಿಕಾರಿಗಳು ಕಾರ್ಯಾಗಾರದಲ್ಲಿ
ಭಾಗವಹಿಸಿದ್ದರು.
ಅಭಿವೃದ್ಧಿಗೆ ಯೋಜನೆ ಬಡವರು ಹಾಗೂ ದುರ್ಬಲ ವರ್ಗದವರಿಗೆ ಕರುಣೆ, ಅನುಕಂಪ ತೋರುವುದರೊಂದಿಗೆ ಅವರ ಅಭಿವೃದ್ಧಿಗಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಿದರೆ ನಿಜವಾದ ಪರಿವರ್ತನೆ ಸಾಧ್ಯವಾಗುತ್ತದೆ. ಧರ್ಮಸ್ಥಳದ ವತಿಯಿಂದ ಈ ದಿಸೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ.
– ಡಾ| ಡಿ. ವೀರೇಂದ್ರ ಹೆಗ್ಗಡೆ
ಧರ್ಮಾಧಿಕಾರಿ