Advertisement

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ

09:03 AM Jun 14, 2020 | Suhan S |

ಚಿತ್ರದುರ್ಗ: ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಬೇಕು. 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಮತ್ತು 18 ವರ್ಷದೊಳಗಿನ ಕಿಶೋರಾವಸ್ಥೆ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಯಲ್ಲಿ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂದು ಜಿಲ್ಲಾಕಾರಿ ಆರ್‌. ವಿನೋತ್‌ ಪ್ರಿಯಾ ಹೇಳಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಆಟೋ ಮೂಲಕ ಜನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬಾಲಕಾರ್ಮಿಕರನ್ನು ನೇಮಿಸಿಕೊಂಡ ಮಾಲೀಕರಿಗೆ ದಂಡ ಹಾಗೂ 2 ವರ್ಷದವರೆಗೆ ಜೈಲುಶಿಕ್ಷೆ ಅನುಭವಿಸಬೇಕಾಗುತ್ತದೆ. ತಪ್ಪಿತಸ್ಥ ಮಾಲೀಕರ ವಿರುದ್ಧ ಪೊಲೀಸ್‌ ಇಲಾಖೆಯಿಂದ ಎಫ್‌ಐಆರ್‌ ಸಹ ದಾಖಲಿಸಬಹುದು. ಕೆಲಸಕ್ಕೆ ಸೇರಿಸಿದ ಪಾಲಕರ ಮೇಲೆಯೂ ಮೊಕದ್ದಮೆ ದಾಖಲಿಸಬಹುದು ಎಂದರು.

ಮಕ್ಕಳನ್ನು ಕೋವಿಡ್‌-19 ಸಾಂಕ್ರಾಮಿಕ ರೋಗದಿಂದ ರಕ್ಷಣೆ ಮಾಡಬೇಕು. ಈ ಕುರಿತು ಹಲವಾರು ಸೂಚನೆ ಬಾರಿ ಸೂಚನೆ ನೀಡಿ ಜಾಗೃತಿ ಮೂಡಿಸಲಾಗಿದೆ. ಆದರೂ ಕೆಲವು ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ 10 ವರ್ಷದ ಒಳಗಿನ ಮಕ್ಕಳಿಗೆ ಕೊರೊನಾ ಹೆಚ್ಚು ಬಾ ಧಿಸುವ ಸಾಧ್ಯತೆ ಇದೆ. ಹಾಗಾಗಿ ಪೋಷಕರು ಹೆಚ್ಚು ಜಾಗೃತಿ ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ. ರಾಧಿಕಾ, ಉಪವಿಭಾಗಾ ಧಿಕಾರಿ ಪ್ರಸನ್ನ, ತಹಶೀಲ್ದಾರ್‌ ಜೆ.ಸಿ. ವೆಂಕಟೇಶಯ್ಯ, ಜಿಲ್ಲಾ ಕಾರ್ಮಿಕ ಅಧಿಕಾರಿ ವಿನುತಾ, ವಾರ್ತಾಧಿಕಾರಿ ಬಿ. ಧನಂಜಯಪ್ಪ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next