ಬೆಳ್ತಂಗಡಿ: ಯುವ ಸಮೂಹ ಮಾದಕ ವಸ್ತುಗಳ ದಾಸರಾಗುತ್ತಿರುವು ದರಿಂದ ಸಮಾಜದಲ್ಲಿ ಅಶಾಂತಿ ನೆಲೆಸಲು ಕಾರಣವಾಗುತ್ತಿದೆ. ಈ ನಿಟ್ಟಿ ನಲ್ಲಿ ಸಮಾಜದಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಬೆಳೆಸುವ ಅಗತ್ಯವಿದೆ ಎಂದು ಬಂಟ್ವಾಳ ಉಪವಿಭಾಗದ ಎಎಸ್‌ಪಿ ಸೈದುಲ್ ಅಡಾವತ್ ತಿಳಿಸಿದರು.
ಪ್ರಸನ್ನ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ಶುಕ್ರವಾರ ಪ್ರಸನ್ನ ಎಜುಕೇಶನ್ ಟ್ರಸ್ಟ್ , ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ಮತ್ತು ವಕೀಲರ ಸಂಘ ಬೆಳ್ತಂಗಡಿ ಹಾಗೂ ಪ್ರಸನ್ನ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ನಡೆದ ವಿಶ್ವ ತಂಬಾಕು ವಿರೋಧಿ ದಿನಾಚರಣೆಯಲ್ಲಿ ಅವರು ಉಪನ್ಯಾಸ ನೀಡಿದರು.
ಗಾಂಜಾ ಬಳಸಿದರೆ ವೈದ್ಯಕೀಯ ವರದಿ ಆಧಾರದಲ್ಲಿ ಪ್ರಕರಣ ದಾಖಲಿಸಿದರೆ 2 ವರ್ಷ ಜೈಲು ಶಿಕ್ಷೆ ಅನುಭವಿಸ ಬೇಕಾಗುತ್ತದೆ. ಮಾದಕ ವಸ್ತುಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಮಾರಾಟ ಮಾಡುವುದು ಅಪರಾಧ ಎಂದರು.
ಪ್ರಧಾನ ಸಿವಿಲ್- ಜೆಎಂಎಫ್ ನ್ಯಾಯಾ ಧೀಶ ಕೆ.ಎಂ. ಆನಂದ ಮಾತನಾಡಿ, ಕಾಯಿದೆಯನ್ನು ಪ್ರತಿಯೊಬ್ಬರೂ ತಿಳಿ ದಾಗ ಅಪರಾಧ ಕೃತ್ಯಗಳಿಗೆ ಒಳಗಾಗುವುದನ್ನು ತಡೆಯಬಹುದು. ಉತ್ತಮ ಆರೋಗ್ಯ ಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ ಎಂದರು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಸತೀಶ್ ಕೆ.ಜಿ., ಸರಕಾರಿ ಅಭಿಯೋಜಕ ಕಿರಣ್ ಕುಮಾರ್ ಬಿ.ಕೆ., ಬೆಳ್ತಂಗಡಿ ತಾಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಮನೋಹರ್ ಕುಮಾರ್ ಎ., ಪ್ರಸನ್ನ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಕಿರಣ್ ಹೆಬ್ಟಾರ್, ವಕೀಲರ ಸಂಘದ ಉಪಾಧ್ಯಕ್ಷ ಶ್ರೀನಿವಾಸ ಗೌಡ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ಬಿ.ಕೆ.ಪ್ರಶಾಂತ್ ಸ್ವಾಗತಿಸಿ, ಡಾ| ಅಮಿತ್ ನಿರೂಪಿಸಿದರು.
ಜಾಗೃತಿ
ಮಾದಕ ವಸ್ತುಗಳ ವಿರುದ್ಧ ಉಚಿತ ಮಾಹಿತಿ ನಿಡುವ ಕಾರ್ಯಕ್ರಮವನ್ನು ಪ್ರತೀ ವರ್ಷ ಮಾಡುತ್ತಿದ್ದು, ಜನರಲ್ಲಿ ಜಾಗೃತಿ ಮೂಡಿಸಿದಾಗ ಮಾತ್ರ ಈ ದುಶ್ಚಟ ನಿಯಂತ್ರಿಸಲು ಸಾಧ್ಯ.
– ಬಿ.ಕೆ. ನಾಗೇಶ್ ಮೂರ್ತಿ, ಬೆಳ್ತಂಗಡಿ ಪ್ರಧಾನ ಹಿರಿಯ ವಿಭಾಗದ ಸಿವಿಲ್ ನ್ಯಾಯಾಧೀಶರು