Advertisement

ವಿಶ್ವ ತಂಬಾಕು ವಿರೋಧಿ ದಿನಾಚರಣೆ

10:13 PM Jun 04, 2019 | sudhir |

ಶನಿವಾರಸಂತೆ: ವಿದ್ಯಾರ್ಥಿ ಸಮೂಹ ದುಶ್ಚಟಗಳಿಗೆ ಬಲಿಯಾಗದೆ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸಿದರೆ ಮಾತ್ರ ದುಶ್ಚಟಗಳಂತಹ ಸಾಮಾಜಿಕ ಪಿಡುಗುಗಳು ನಿವಾರಣೆಯಾಗುತ್ತವೆ ಎಂದು ಸ್ಥಳೀಯ ವಿN°àಶ್ವರ ಬಾಲಕಿ ಯರ ಪ್ರೌಢಶಾಲಾ ಸಹ ಶಿಕ್ಷಕ ಕೆ.ಪಿ. ಜಯಕುಮಾರ್‌ ಅಭಿಪ್ರಾಯ ಪಟ್ಟರು.

Advertisement

ಅವರು ವಿN°àಶ್ವರ ಬಾಲಕಿಯರ ವಿದ್ಯಾಸಂಸ್ಥೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೊಡ್ಲಿ ಪೇಟೆ ವಲಯ, ಜಿಲ್ಲಾ ಜನ ಜಾಗೃತಿ ವೇದಿಕೆ ಮತ್ತು ವಿN°àಶ್ವರ ಬಾಲಕಿಯರ ವಿದ್ಯಾಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಇಂದಿನ ಯುವಕ, ಯುವತಿಯರು ಸೇರಿದಂತೆ ಇಡೀ ಯುವ ಸಮೂಹ ತಂಬಾಕು, ಮದ್ಯಪಾನಗಳಂತಹ ದುಶ್ಚಟಗಳಿಗೆ ದಾಸರಾಗುತ್ತಿರುವುದು ಕಳವಳಕಾರಿಯಾಗಿದೆ. ಶೋಕಿಗಾಗಿ ಸಿಗರೇಟ್‌, ಬೀಡಿ ಮುಂತಾದ ಮಾದಕ ಪದಾರ್ಥಗಳನ್ನು ಸೇವಿಸುತ್ತಾರೆ. ಕೊನೆಗೆ ಇಂತಹ ದುಶ್ಚಟಗಳಿಗೆ ದಾಸರಾಗಿ ಆರೋಗ್ಯ ಹಾಳು ಮಾಡಿಕೊಳ್ಳುವುದರ ಜತೆಯಲ್ಲಿ ಹದಿ ವಯಸಿನಲ್ಲೆ ಸಾವೀಗಿಡಾಗುತ್ತಿದ್ದಾರೆ ಎಂದರು.

ಕಾಲೇಜು ಪ್ರಾಂಶುಪಾಲ ಟಿ.ಪಿ. ಶಿವ ಪ್ರಕಾಶ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಂಬಾಕು ಸೇವನೆಯಿಂದ ನಮ್ಮ ದೇಶ ಸೇರಿದಂತೆ ವಿಶ್ವಾದ್ಯಂತ ಹೆಚ್ಚಿನ ಜನರು ಸಾಯುತ್ತಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ತಂಬಾಕು ಸೇವನೆಯಿಂದ ಜನರು ಸಾಯುತ್ತಿರುವುದು, ಶ್ವಾಸಕೋಶ ಕ್ಯಾನ್ಸರ್‌ನಂತಹ ಕಾಯಿಲೆಗೆ ತುತ್ತಾಗಿ ಆರೋಗ್ಯ ಹಾಲಾಗುತ್ತಿರುವುದನ್ನು ಮನಗಂಡು ವಿಶ್ವ ತಂಬಾಕು ವಿರೋಧಿ ದಿನವನ್ನಾಗಿ ಆಚರಿಸುತ್ತಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಂಬಾಕು ಸೇವನೆಯಂತಹ ದುಶ್ಚಟಗಳ ಬಗ್ಗೆ ಪೋಷಕರಲ್ಲಿ ಮತ್ತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮುಂದಾಗುವಂತೆ ಸಲಹೆ ನೀಡಿದರು.

ಜನ ಜಾಗೃತಿ ವೇದಿಕೆ ಅಧ್ಯಕ್ಷ ಭಗವಾನ್‌ ಮಾತನಾಡಿದರು. ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ವಲಯ ಮೇಲ್ವಿಚಾರಕ ರಮೇಶ್‌, ತಾಲೂಕು ಪತ್ರಕರ್ತ ಸಂಘದ ನಿರ್ದೇಶಕ ದಿನೇಶ್‌ ಮಾಲಂಬಿ, ವಿ.ಸಿ. ಸುರೇಶ್‌ ಒಡೆಯನಪುರ, ಸೇವಾ ಪ್ರತಿನಿಧಿಗಳಾದ ಎಸ್‌.ಆರ್‌. ಶೋಭಾವತಿ, ಯಶೋದಾ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next