Advertisement

Udupi ಅ. 28, 29: ಬಂಟರ ಕ್ರೀಡಾಕೂಟ, ಸಾಂಸ್ಕೃತಿಕ ವೈಭವ

12:14 AM Oct 26, 2023 | Team Udayavani |

ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅ. 28, 29ರಂದು ವಿಶ್ವ ಬಂಟರ ಸಮ್ಮೇಳನ-2023 “ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ಸಂಭ್ರಮ’ ಉಡುಪಿಯಲ್ಲಿ ಅದ್ದೂರಿ ಯಾಗಿ ನಡೆಯಲಿದೆ ಎಂದು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

Advertisement

ಅ. 28ರ ಬೆಳಗ್ಗೆ 9ಕ್ಕೆ ನಗರದ ಬೋರ್ಡ್‌ ಹೈಸ್ಕೂಲ್‌ನಲ್ಲಿ ಮೆರವಣಿಗೆಗೆ ಚಾಲನೆ ದೊರೆಯ ಲಿದ್ದು, ಕೆ.ಎಂ. ಮಾರ್ಗದ ಮೂಲಕ ಹಳೆ ಡಯಾನ ವೃತ್ತ, ಜೋಡುಕಟ್ಟೆ, ಭುಜಂಗ ಪಾರ್ಕ್‌ ಮಾರ್ಗವಾಗಿ ಅಜ್ಜರಕಾಡು ಮೈದಾನ ಪ್ರವೇಶಿಸಲಿದೆ.

62ಕ್ಕೂ ಅಧಿಕ ಬಂಟರ ಸಂಘಗಳ 7 ಸಾವಿರಕ್ಕೂ ಅಧಿಕ ಮಂದಿ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಅನಂತರ ಉಡುಪಿ ಅಜ್ಜರಕಾಡು ಮೈದಾನದಲ್ಲಿ ಎಲ್ಲ ಬಂಟರ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆಯುವ ವಿಶ್ವ ಬಂಟರ ಸಮ್ಮೇಳನ- ಕ್ರೀಡೋತ್ಸವ ಉದ್ಘಾಟಿಸಲಿದ್ದಾರೆ.

ಬ್ಯಾಡ್ಮಿಂಟನ್‌ ಏಷ್ಯನ್‌ ಗೇಮ್ಸ್‌ ವಿಜೇತ ಚಿರಾಗ್‌ ಶೆಟ್ಟಿ, ಅಂಡರ್‌ 19 ವರ್ಲ್ಡ್ ಜೂನಿಯರ್‌ ಚ್ಯಾಂಪಿಯನ್‌ ಶಿಪ್‌ ವಿಜೇತ ಅಯುಷ್‌ ಶೆಟ್ಟಿ ಕಾರ್ಕಳ ಜತೆಗಿರಲಿದ್ದಾರೆ. ವಿವಿಧ ಮಠಗಳ ಯತಿಗಳು, ಇನ್ನಿತರ ವಿವಿಧ ಕ್ಷೇತ್ರದ ಗಣ್ಯರು, ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕ್ರೀಡೋತ್ಸವದಲ್ಲಿ ಜಾಗತಿಕ ಬಂಟರ ಸಂಘದ ವಿವಿಧ ತಂಡಗಳು ಭಾಗವಹಿಸಲಿದ್ದು, ಏಕಕಾಲದಲ್ಲಿ ಪುರುಷರ ವಾಲಿಬಾಲ್ , ಹಗ್ಗಜಗ್ಗಾಟ, ಮಹಿಳೆಯರ ತ್ರೋಬಾಲ್ , ಹಗ್ಗಜಗ್ಗಾಟ ನಡೆಯಲಿದೆ. ಎಲ್ಲ ವಯೋಮಾನದವರಿಗೆ ಆ್ಯತ್ಲೆಟಿಕ್‌ ನಡೆಯಲಿದೆ.

Advertisement

ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆಯ ತನಕ ಪ್ರೋ ಕಬಡ್ಡಿ ಮಾದರಿಯಲ್ಲಿ ಎಂಟು ತಂಡಗಳ ಕಬಡ್ಡಿ ಪಂದ್ಯಾಟ ನಡೆಯಲಿದೆ.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಜತೆ ಕಾರ್ಯದರ್ಶಿ ಚಂದ್ರಹಾಸ ಡಿ. ಶೆಟ್ಟಿ, ಕ್ರೀಡಾಕೂಟ ಸಂಚಾಲಕ ಗಿರೀಶ್‌ ಶೆಟ್ಟಿ ತೆಳ್ಳಾರು, ಪ್ರಮುಖರಾದ ನಾಗೇಶ್‌ ಹೆಗ್ಡೆ, ಪುರುಷೋತ್ತಮ ಪಿ. ಶೆಟ್ಟಿ, ಮನೋಹರ ಶೆಟ್ಟಿ ತೋನ್ಸೆ, ಅಶೋಕ್‌ ಪಕ್ಕಳ, ಉಳ್ತೂರು ಮೋಹನ್‌ದಾಸ್‌ ಶೆಟ್ಟಿ, ಕರ್ನೂರು ಮೋಹನ್‌ ರೈ, ಡಾ| ರೋಶನ್‌ ಕುಮಾರ್‌ ಶೆಟ್ಟಿ ಪತ್ರಿಕಾ ಗೋಷ್ಠಿಯಲ್ಲಿದ್ದರು.

ಸಾಧಕರಿಗೆ ಸಮ್ಮಾನ
ಬ್ಯಾಡ್ಮಿಂಟನ್‌ ಕ್ರೀಡಾಪಟುಗಳಾದ ಚಿರಾಗ್‌ ಶೆಟ್ಟಿ, ಅಯುಷ್‌ ಶೆಟ್ಟಿ ಕಾರ್ಕಳ, ವಿವಿಧ ಕ್ಷೇತ್ರಗಳ ಸಾಧಕರಾದ ಡಾ| ಎ. ಸದಾನಂದ ಶೆಟ್ಟಿ ಮಂಗಳೂರು, ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌, ಕೆ. ಪ್ರಕಾಶ್‌ ಶೆಟ್ಟಿ, ಚಂದ್ರಹಾಸ ಕೆ. ಶೆಟ್ಟಿ, ಪ್ರವೀಣ್‌ ಶೆಟ್ಟಿ ವಕ್ವಾಡಿ, ಸತೀಶ್‌ ಶೆಟ್ಟಿ ಪಟ್ಲ, ಸಂತೋಷ್‌ ಶೆಟ್ಟಿ ಪುಣೆ, ವಿಶು ಶೆಟ್ಟಿ ಅಂಬಲಪಾಡಿ ಅವರಿಗೆ ಸಮ್ಮಾನ ನಡೆಯಲಿದೆ. ಸಿನಿ ತಾರೆಯರಾದ ಸುನಿಲ್‌ ಶೆಟ್ಟಿ, ರಕ್ಷಿತ್‌ ಶೆಟ್ಟಿ, ಐಶ್ವರ್ಯಾ ರೈ ಬಚ್ಚನ್‌, ಶಿಲ್ಪಾ ಶೆಟ್ಟಿ ಕುಂದ್ರಾ, ರಿಷಬ್‌ ಶೆಟ್ಟಿ, ಗುರುಕಿರಣ್‌ ಶೆಟ್ಟಿ, ಶ್ರೀನಿಧಿ ಶೆಟ್ಟಿ, ಶಿವಧ್ವಜ್‌ ಶೆಟ್ಟಿ, ಅನುಷ್ಕಾ ಶೆಟ್ಟಿ, ಪೂಜಾ ಹೆಗ್ಡೆ, ರಾಜ್‌ ಬಿ. ಶೆಟ್ಟಿ, ರೂಪೇಶ್‌ ಶೆಟ್ಟಿ, ಯಶ್‌ ಭಾಗವಹಿಸಲಿದ್ದಾರೆ.

30 ತಂಡಗಳಿಂದ ಸಾಂಸ್ಕೃತಿಕ ವೈಭವ
ಅ. 29ರಂದು ಅಮ್ಮಣಿ ರಾಮಣ್ಣ ಶೆಟ್ಟಿ ತೆರೆದ ಮೈದಾನದಲ್ಲಿ ಸಾಂಸ್ಕೃತಿಕ ವೈಭವದ ಉದ್ಘಾಟನೆ ನಡೆಯಲಿದೆ. ಬೆಳಗ್ಗೆ ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ಉದ್ಘಾಟನೆ ನೆರವೇರಿಸಲಿದ್ದಾರೆ. ಕೇಂದ್ರ ಸಚಿವರಾದ ನಿತಿನ್‌ ಗಡ್ಕರಿ, ಶೋಭಾ ಕರಂದ್ಲಾಜೆ ಮೊದಲಾದವರು ಗಣ್ಯರು ಭಾಗವಹಿಸಲಿದ್ದಾರೆ. 30 ತಂಡಗಳಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next