Advertisement

ವಿಶ್ವ ಮಕ್ಕಳ ಕ್ರೀಡಾಕೂಟ: ಬಂಗಾರದ ಪದಕ ಗೆದ್ದ ಪ್ರೇರಣಾಗೆ ಸನ್ಮಾನ

07:25 PM Jun 10, 2022 | Team Udayavani |

ಬೆಂಗಳೂರು: ಫ್ರಾನ್ಸ್ ನಲ್ಲಿ ನಡೆದ ವಿಶ್ವ ಮಕ್ಕಳ ಕ್ರೀಡಾಕೂಟದಲ್ಲಿ ಭಾಗವಹಿಸಿ, ಬ್ಯಾಡ್ಮಿಂಟನ್ ವಿಭಾಗದಲ್ಲಿ ಬಂಗಾರದ ಪದಕ ಗೆದ್ದ ಶಿರಸಿಯ ಪ್ರೇರಣಾ ನಂದಕುಮಾರ ಶೇಟ್ ಅವರನ್ನು ಕರ್ನಾಟಕ ವಿಧಾನ ಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಸನ್ಮಾನಿಸಿದರು.

Advertisement

ಜತೆಗೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿ.ಪ. ಸದಸ್ಯೆ ಭಾರತಿ ಶೆಟ್ಟಿ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಜೀವರಾಜ್, ಕ್ರೀಡಾ ಇಲಾಖೆಯ ಹಿರಿಯ ಅಧಿಕಾರಿಗಳು, ಪ್ರೇರಣಾ ಪಾಲಕರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next