ಶ್ರೀ ಹರಿಕೋಟ : ಜುಲೈ 14ರಂದು ತಾಂತ್ರಿಕ ಅಡಚಣೆಗಳ ಕಾರಣದಿಂದಾಗಿ ಮುಂದೂಲ್ಪಟ್ಟಿದ್ದ ಮಹತ್ವಾಕಾಂಕ್ಷಿ ಬಾಹ್ಯಾಕಾಶ ಯೋಜನೆ ‘ಚಂದ್ರಯಾನ-2’ ಇಂದು ಯಶಸ್ವಿಯಾಗಿ ಸಂಪನ್ನಗೊಂಡಿದೆ.
ಆಂದ್ರಪ್ರದೇಶದ ಶ್ರೀ ಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಮಧ್ಯಾಹ್ನ ಚಂದ್ರನ ಅಂಗಳದಲ್ಲಿ ಇಳಿಯಲಿರುವ ಪರಿಕರಗಳನ್ನು ಹೊತ್ತ ಜಿ.ಎಸ್.ಎಲ್.ವಿ. ಎಂ.ಕೆ.3 ರಾಕೆಟ್ ಅಗಾಧ ಬೆಂಕಿಯುಗುಳುತ್ತಾ ನಭಕ್ಕೆ ಚಿಮ್ಮುತ್ತಿದ್ದಂತೆ ಅಲ್ಲಿದ್ದ ಇಸ್ರೋ ವಿಜ್ಞಾನಿಗಳು ಸೇರಿದಂತೆ ಎಲ್ಲಾ ಸಿಬ್ಬಂದಿಗಳು ಮತ್ತು ಇದನ್ನು ವಿವಿಧ ಮಾಧ್ಯಮಗಳ ಮೂಲಕ ವೀಕ್ಷಿಸುತ್ತಿದ್ದವರ ಮುಖದಲ್ಲಿ ಹೆಮ್ಮೆಯ ನಗು ಮೂಡಿತು.
ಇಸ್ರೋದ ಈ ಸಾಧನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ರಮಾನಾಥ್ ಕೋವಿಂದ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಬಾಲಿವುಡ್ ತಾರೆಯರು, ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಭಾರತ ದೇಶವಾಸಿಗಳು ಕೊಂಡಾಡಿದ್ದಾರೆ. ಇವುಗಳಲ್ಲಿ ಪ್ರಮುಖ ಟ್ವೀಟ್ ಸಂದೇಶಗಳ ಸಂಗ್ರಹ ಇಲ್ಲಿದೆ.
Related Articles