Advertisement

ಗ್ರಾಹಕರ ಹಕ್ಕುಗಳ ಅರಿವು ಅವಶ್ಯಕ

03:12 PM Mar 16, 2022 | Team Udayavani |

ಚಿಕ್ಕಬಳ್ಳಾಪುರ: ಪ್ರಸ್ತುತ ಒಂದಲ್ಲ ಒಂದು ರೀತಿ ಎಲ್ಲರೂ ಗ್ರಾಹಕರಾಗಿದ್ದು, ಗ್ರಾಹಕರ ಹಕ್ಕುಗಳನ್ನು ಹಾಗೂ ಕಾನೂನನ್ನು ಪ್ರತಿಯೊಬ್ಬರೂ ಅರಿಯಬೇಕಿದೆ ಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

Advertisement

ಅವರು ಮಂಗಳವಾರ ಜಿಲ್ಲಾ ಭವನದ ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಜಿಪಂ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನ ಶಾಸ್ತ್ರ ಇಲಾಖೆ, ವಾರ್ತಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಾಹಿತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನ್ಯಾಯಬೆಲೆ ಅಂಗಡಿಯವರು ವಸ್ತುಗಳ ತೂಕ ಮತ್ತು ಅಳತೆಯನ್ನು ನ್ಯಾಯುತವಾಗಿ ಮಾಡಬೇಕು. ಜತೆಗೆ ಅಂಗಡಿ ಮಾಲೀಕರು ಗ್ರಾಹಕರ ನಂಬಿಕೆಯನ್ನುಗಳಿಸುವಲ್ಲಿ ವಸ್ತುಗಳ ಗುಣಮಟ್ಟವನ್ನು ನೀಡಬೇಕು ಎಂದರು. ಗ್ರಾಹಕರ ಹಕ್ಕುಗಳನ್ನು ಅರಿವು ಮೂಡಿಸಲು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಇದನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಬೇಕು ಎಂದು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಹಿರಿಯ ಸಿವಿಲ್‌ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲಕ್ಷ್ಮೀಕಾಂತ್‌ ಜೆ. ಮಿಸ್ಕಿನ್‌ ಅಧ್ಯಕ್ಷತೆ ವಹಿಸಿ ಮಾತನಾಡಿ ದರು. ಗ್ರಾಹಕರು ವಸ್ತುಗಳನ್ನು ಖರೀದಿಸುವಾಗ ಅದರಲ್ಲಿ ಸರ್ಕಾರದ ಷರತ್ತುಗಳು, ಉತ್ಪಾದನೆಯ ದಿನಾಂಕ ಕೂಲಂಕುಷವಾಗಿ ಪರಿಶೀಲಿಸಿ ಖರೀದಿಸಬೇಕು. ಕಾನೂ ನಾತ್ಮಕವಾಗಿ ಗ್ರಾಹಕರ ಹಕ್ಕುಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.

ಬಿಜಿಎಸ್‌ ನಿರ್ವಹಣಾ ಅಧ್ಯಯನಗಳ ಶಿಕ್ಷಣ ಸಂಸ್ಥೆ ಪ್ರಾಂಶುಪಾಲರಾದ ಡಾ.ವೆಂಕಟೇಶ್‌ ಬಿ.ಆರ್‌. ಅವರು ವಿಶೇಷ ಉಪನ್ಯಾಸ ನೀಡಿದರು.

Advertisement

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಂದಿರಾ ಆರ್‌.ಕಬಾಡೆ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕಿ ಪಿ.ಸವಿತಾ, ಕಾನೂನು ಮಾಪನ ಶಾಸ್ತ್ರ ಸಹಾಯಕ ನಿಯಂತ್ರಕರಾದ ಮಾಲಾ ಕಿರಣ್‌, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹರೀಶ್‌, ನ್ಯಾಯಾಬೆಲೆ ಅಂಗಡಿ ಮಾಲೀಕರು, ಗ್ರಾಹಕರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿದ್ದರು.

ಗುಣಮಟ್ಟ, ಸುರಕ್ಷತೆಯ ಜ್ಞಾನ ಅತ್ಯಗತ್ಯ : ಸಾಕಷ್ಟು ಗ್ರಾಹಕರು ಆನ್‌ಲೈನ್‌ ವಸ್ತುಗಳ ಖರೀದಿಗೆ ಆಕರ್ಷಿತರಾಗಿ ಆಹಾರ, ಎಲೆಕ್ಟ್ರಾನಿಕ್‌ ವಸ್ತು, ಬಟ್ಟೆ ಇತರೆ ವಸ್ತುಗಳ ಖರೀದಿಗೆ ಮೊರೆಹೋಗಿದ್ದಾರೆ. ಆದರೆ, ಖರೀದಿಸುವ ವಸ್ತುಗಳ ಗುಣಮಟ್ಟ, ಸುರಕ್ಷತೆ ಹಾಗೂ ಉತ್ಪಾದನೆ ಕುರಿತು ಅರಿವಿರಬೇಕು. ವಂಚಿತರಾದಲ್ಲಿ ಕೂಡಲೇ ಜಿಲ್ಲಾ ಗ್ರಾಹಕರ ವೇದಿಕೆಗೆ ದೂರು ನೀಡಿ ಪರಿಹಾರ ಪಡೆದುಕೊಳ್ಳಬೇಕು. ಜತೆಗೆ ಗ್ರಾಹಕರಿಗಿರುವ ಹಕ್ಕು ಮತ್ತು ಕರ್ತವ್ಯಗಳನ್ನು ತಿಳಿದುಕೊಂಡು ಇತರರಿಗೆ ತಿಳಿ ಹೇಳಬೇಕು ಎಂದು ಜಿಲ್ಲಾಧಿಕಾರಿ ಆರ್‌. ಲತಾ ಸಲಹೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next