Advertisement

ಪ್ರತಿಯೊಬ್ಬರಿಗೂ ಗ್ರಾಹಕರ ಹಕ್ಕುಗಳ ಅರಿವು ಅಗತ್ಯ

11:56 AM Mar 16, 2023 | Team Udayavani |

ಚಾಮರಾಜನಗರ : ಗ್ರಾಹಕರ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರಿಗೂ ಜಾಗೃತಿ ಅವಶ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಬಿ.ಎಸ್‌. ಭಾರತಿ ಹೇಳಿದರು.

Advertisement

ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆ.ಡಿ.ಪಿ ಸಭಾಂಗಣದಲ್ಲಿ, ಬುಧವಾರ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮೊಬಿಲಿಟಿ ಇಂಡಿಯಾ ಸಹಯೋಗದಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನದ ಅಂಗವಾಗಿ ಪ್ರಾಧಿಕಾರದ ಕಾನೂನು ಸ್ವಯಂ ಸೇವಕರು ಮತ್ತು ದಿವ್ಯಾಂಗರಿಗೆ ಸಹಾಯಕ ಸಾಧನ ಸಲಕರಣೆ ವಿತರಣೆ ಕುರಿತು ಹಮ್ಮಿಕೊಳ್ಳಲಾಗಿದ್ದ ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಸಾರ್ವಜನಿಕರಿಗೆ ಅರಿವು ಅಗತ್ಯ: ಗ್ರಾಹಕರ ದಿನದ ಉದ್ದೇಶ ಮತ್ತು ಹಕ್ಕುಗಳ ಬಗ್ಗೆ ಜಾಗೃತಿ ಉಂಟಾದಾಗ ಮಾತ್ರ ಅರಿವು ಕಾರ್ಯಕ್ರಮಗಳು ಯಶಸ್ವಿ ಯಾಗಲೂ ಸಾಧ್ಯ. ಸರ್ಕಾರವು ಗ್ರಾಹಕರ ಹಕ್ಕುಗಳಿಗೆ ಸಂಬಂ ಧಿಸಿದಂತೆ ಹಲವಾರು ಜಾಗೃತಿ ಕಾರ್ಯ ಕ್ರಮಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಬೇಕು. ಎಲ್ಲಾ ವಸ್ತುಗಳು ನಿರ್ದಿಷ್ಟ ಕಾಲಾವಕಾಶ ಹೊಂದಿರುತ್ತದೆ. ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಅಗತ್ಯವಾಗಿದೆ ಎಂದರು.

ವಸ್ತುವಿನ ಬಗ್ಗೆ ಸರಿಯಾಗಿ ತಿಳಿದುಕೊಳ್ಳಿ: ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತೂರು ಇಂದುಶೇಖರ್‌ ಮಾತನಾಡಿ, ಗ್ರಾಹಕರ ಹಕ್ಕುಗಳ ದಿನವು ಸರಕು ಮತ್ತು ಸೇವೆಗಳಿಗೆ ಸಂಬಂಧಿಸಿದ ದಿನವಾಗಿದೆ. ಗ್ರಾಹಕರ ಹಕ್ಕುಗಳ ಮಹತ್ವವನ್ನು ಸಂಪೂರ್ಣವಾಗಿ ಅರಿಯಬೇಕು. ಪ್ರತಿಯೊಂದು ವಸ್ತುಗಳನ್ನು ಖರೀದಿಸುವ ಸಂದರ್ಭದಲ್ಲಿ ವಸ್ತುವಿನ ಬಗ್ಗೆ ಸರಿಯಾಗಿ ತಿಳಿದುಕೊಂಡು ವ್ಯವಹರಿಸಬೇಕು. ಮಾರುಕಟ್ಟೆಯಲ್ಲಿ ಕಂಡು ಬರುವ ಬಣ್ಣ ಬಣ್ಣದ ಪದಾರ್ಥಗಳಿಗೆ ಮಾರು ಹೋಗಬಾರದು ಎಂದರು.

ಈ ಸಂದರ್ಭದಲ್ಲಿ ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಶ್ರೀಧರ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎಚ್‌. ಎನ್‌. ಶ್ರೀನಿಧಿ, ಮೊಬಿಲಿಟಿ ಇಂಡಿಯಾದ ಎಸ್‌. ಎನ್‌. ಆನಂದ್‌, ಕಾರ್ಮಿಕ ಇಲಾಖೆಯ ನಿರೀಕ್ಷಕಿ ವೀಣಾ ಇತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next