ಅಹಮದಾಬಾದ್: ಡೆಂಗ್ಯೂ ಜ್ವರದಿಂದ ಚೇತರಿಸಿಕೊಳ್ಳುತ್ತಿರುವ ಭಾರತದ ಆರಂಭಿಕ ಆಟಗಾರ ಶುಭಮನ್ ಗಿಲ್ ಬುಧವಾರ ಅಹಮದಾಬಾದ್ ಗೆ ತಲುಪಿದ್ದಾರೆ.
ಭಾರತ ತಂಡವಿಂದು ಹೊಸದಿಲ್ಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಅಫ್ಘಾನಿಸ್ತಾನ ವಿರುದ್ಧ ಆಡುತ್ತಿದೆ. ಆದರೆ ಗಿಲ್ ಅವರು ಅಹಮದಾಬಾದ್ ಗೆ ಪ್ರಯಾಣಿಸಿದ್ದಾರೆ. ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ತಂಡವು ಪಾಕಿಸ್ತಾನ ವಿರುದ್ಧ ಅ.14ರಂದು ಪಂದ್ಯವಾಡುತ್ತಿದೆ.
“ಗಿಲ್ ಸದ್ಯ ಆರಾಮವಾಗಿದ್ದಾರೆ. ಇಂದು ಚೆನ್ನೈನಿಂದ ಅಹಮದಾಬಾದ್ ಗೆ ತೆರಳಲಿದ್ದಾರೆ. ಗಿಲ್ ಗುರುವಾರ ಮೊಟೆರಾದಲ್ಲಿ ಪ್ರಾಕ್ಟೀಸ್ ಮಾಡುತ್ತಾರೆಯೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಅವರ ಚೇತರಿಕೆಯು ಉತ್ತಮವಾಗಿದೆ ಆದರೆ ಅವರು ಪಾಕಿಸ್ತಾನದ ವಿರುದ್ಧ ಆಡಬಹುದೇ ಎಂದು ಖಚಿತವಾಗಿ ಹೇಳಲಾಗುವುದಿಲ್ಲ” ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ.
ಇದನ್ನೂ ಓದಿ:IOC ಅಧ್ಯಕ್ಷ ಥಾಮಸ್ ಬಾಚ್ ಅವರಿಗೆ ಮುಖೇಶ್ ಅಂಬಾನಿ ನಿವಾಸದಲ್ಲಿ ಆದರಾತಿಥ್ಯ
ಡೆಂಗ್ಯೂ ಜ್ವರದಿಂದ ಬಳಲುತ್ತಿರುವ ಶುಭಮನ್ ಗಿಲ್ ಅವರು ಈಗಾಗಲೇ ಎರಡು ಪಂದ್ಯಗಳನ್ನು ತಪ್ಪಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಮೊದಲ ಪಂದ್ಯ ಮತ್ತು ಅಫ್ಘಾನ್ ವಿರುದ್ಧದ ಇಂದಿನ ಪಂದ್ಯದಲ್ಲಿ ಗಿಲ್ ಆಡಿಲ್ಲ. ಅವರ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ.