ವಿಶೇಷ ವರದಿ – ಮಹಾನಗರ: ವಿಶ್ವ ಕಪ್ ಏಕದಿನ ಕ್ರಿಕೆಟ್ ಪಂದ್ಯ ಆರಂಭವಾಗಿದ್ದು, ಮುಂದಿನ ಒಂದೂವರೆ ತಿಂಗಳು ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬದ ಸೀಸನ್. ಪಂದ್ಯ ಆಡಲಿರುವ 10 ತಂಡಗಳಲ್ಲಿ ಯಾರು ಗೆಲ್ಲುತ್ತಾರೆ ಮತ್ತು ಸೋಲುತ್ತಾರೆ ಎಂಬ ಕುತೂಹಲ ಕ್ರಿಕೆಟ್ ಪ್ರೇಮಿಗಳಿಗೆಲ್ಲ ಇರುವುದು ಸಹಜ.
ಕ್ರಿಕೆಟ್‌ನಲ್ಲಿ ಸೋಲು – ಗೆಲುವಿನ ಬಗ್ಗೆ ಬಾಜಿ ಕಟ್ಟುವುದು ಅಥವಾ ಬೆಟ್ಟಿಂಗ್ ನಡೆಸುವುದು ಹೊಸತೇ ನಲ್ಲ; ಇದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಪ್ರಸ್ತುತ ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ ನಡೆಯುತ್ತಿರುವ ಈ ವಿಶ್ವಕಪ್ ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿಯೂ ಬೆಟ್ಟಿಂಗ್ ದಂಧೆ ನಡೆಯುವ ಎಲ್ಲ ಸಾಧ್ಯತೆಗಳಿವೆ.
ಮಂಗಳೂರಿನ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ಬೆಟ್ಟಿಂಗ್ ದಂಧೆಯಲ್ಲಿ ತೊಡಗುವ ವರನ್ನು ಹೆಡೆಮುರಿ ಕಟ್ಟಿ ಜೈಲಿಗಟ್ಟಲು ಸನ್ನದ್ಧರಾಗಿದ್ದಾರೆ. ಈ ಕುರಿತು ವಿಶ್ವಕಪ್ ಕ್ರಿಕೆಟ್ ಪಂದ್ಯದ ಪ್ರಾರಂಭದ ದಿನವಾದ ಗುರುವಾರ ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು ವಿಶ್ವಕಪ್ ಕ್ರಿಕೆಟ್‌ಗೆ ಸಂಬಂಧಿಸಿ ಬೆಟ್ಟಿಂಗ್ ವ್ಯವಹಾರದಲ್ಲಿ ತೊಡಗುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಎರಡು ತಿಂಗಳ ಹಿಂದೆ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯಾ ಟದ ಸಂದರ್ಭ ಬೆಟ್ಟಿಂಗ್ ದಂಧೆಯ ವಿರುದ್ಧ ಧ್ವನಿ ಎತ್ತಿದ್ದ ಸಂದೀಪ್ ಪಾಟೀಲ್ ಅವರು ಬೆಟ್ಟಿಂಗ್‌ನಲ್ಲಿ ತೊಡಗುವವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳ ಲಾ ಗುವುದು ಎಂಬ ಸೂಚನೆ ನೀಡಿದ್ದರು. ಆದರೆ ಅವರ ಮುನ್ನೆಚ್ಚರಿಕೆಯನ್ನು ಕಡೆಗಣಿಸಿ ಕೆಲವರು ಬೆಟ್ಟಿಂಗ್‌ನಲ್ಲಿ ತೊಡಗಿದ್ದರು. ಆಗ ಆಯುಕ್ತರ ಸೂಚನೆಯಂತೆ ವಿವಿಧ ಠಾಣೆಗಳ ಪೊಲೀಸರು ಕಾರ್ಯಾಚರಣೆ ನಡೆಸಿ ಒಟ್ಟು 18 ಪ್ರಕರಣಗಳನ್ನು ದಾಖಲಿಸಿದ್ದರು.
ಲೋಕಸಭಾ ಚುನಾವಣೆಯ ಮತಗಳ ಎಣಿಕೆಯ ದಿನ ಸಮೀಪಿಸುತ್ತಿದ್ದಂತೆ ಫಲಿತಾಂಶದ ಬಗ್ಗೆ ಬೆಟ್ಟಿಂಗ್ ನಡೆಯುವ ಸಾಧ್ಯತೆ ಇರುವುದನ್ನು ಗಮನಿಸಿ ಈ ಬಗ್ಗೆ ಎಚ್ಚರಿಕೆಯ ಸಂದೇಶವನ್ನು ಪೊಲೀಸ್ ಆಯುಕ್ತರು ನೀಡಿದ್ದರು. ಇದೀಗ ವಿಶ್ವಕಪ್ ಕ್ರಿಕೆಟ್ ಪಂದ್ಯ ಆರಂಭವಾಗುತ್ತಿದ್ದಂತೆ ಮತ್ತೆ ಎಚ್ಚರಿಕೆ ನೀಡಿದ್ದಾರೆ.
ಬೆಟ್ಟಿಂಗ್ ದಂಧೆಯಲ್ಲಿ ದೊಡ್ಡ ಮೊತ್ತದ ಹಣದ ವ್ಯವ ಹಾರ ನಡೆಯುತ್ತದೆ. ಕೆಲವರು ಹಣ ಗಳಿಸುವ, ಕೆಲವರು ಹಣ ಕಳೆದುಕೊಳ್ಳುವ ಈ ವ್ಯವಹಾರ ಸಾಮಾ ಜಿಕ ಸ್ವಾಸ್ತÂದ ದೃಷ್ಟಿಯಿಂದ ಒಳ್ಳೆಯದಲ್ಲ. ಹಲವು ಅನಪೇಕ್ಷಿತ ಘಟನೆಗಳಿಗೂ ಇದು ಕಾರಣವಾಗುವ ಸಾಧ್ಯ ತೆ ಯಿದೆ. ಆದ್ದರಿಂದ ಬೆಟ್ಟಿಂಗ್ ದಂಧೆಯ ಕುರಿತು ಸಾರ್ವಜನಿಕರಿಗೆ ಮಾಹಿತಿ ಲಭಿಸಿದಲ್ಲಿ ಸಂಬಂಧ ಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಸಹಕರಿ ಸಬೇಕು ಎಂದು ಆಯಕ್ತ ಸಂದೀಪ್ ಪಾಟೀಲ್ ಮನವಿ ಮಾಡಿದ್ದಾರೆ.
ಆಯುಕ್ತರ ಟ್ವೀಟ್…
“ವಿಶ್ವ ಕಪ್ ಕ್ರಿಕೆಟ್ ಇಂದು ಆರಂಭವಾಗಿದೆ… ಅತ್ತ ಬ್ಯಾಟ್ಸ್‌ಮನ್‌ಗಳು ತಮ್ಮ ಅದ್ಭುತ ಬ್ಯಾಂಟಿಂಗ್ ಪ್ರದರ್ಶನ ನೀಡುವಾಗ ಇತ್ತ ಮಂಗಳೂರು ಪೊಲೀಸರು ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸಲಿದ್ದಾರೆ…ಈ ಬಾರಿ ಕೂಡ ನಾವು ಬುಕ್ಕಿಗಳ ವಿರುದ್ಧ ಕಠಿನ ಕ್ರಮ ಕೈಗೊಂಡು ಅವರನ್ನು ಹೊಡೆದೋಡಿಸುತ್ತೇವೆ…’ ಎಂಬುದಾಗಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಟ್ವೀಟ್ ಮಾಡಿದ್ದಾರೆ.
ಕಟ್ಟು ನಿಟ್ಟಿನ ಕ್ರಮ
ಕ್ರಿಕೆಟ್ ಬೆಟ್ಟಿಂಗ್ ದಂಧೆಯ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಬೆಟ್ಟಿಂಗ್ ದಂಧೆಯ ವಿರುದ್ಧ ಮುಖ್ಯವಾಗಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಲಿದ್ದಾರೆ; ಜತೆಗೆ ಆಯಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿರುವ ಪೊಲೀಸರು ಕೂಡ ಈ ದಂಧೆಯ ಬಗ್ಗೆ ಕಣ್ಗಾವಲು ಇರಿಸುವರು. ಅಲ್ಲದೆ ಬುಕ್ಕಿಗಳ ಮೇಲೆ ವಿಶೇಷ ನಿಗಾ ವಹಿಸಲಾಗುವುದು.
- ಸಂದೀಪ್ ಪಾಟೀಲ್,
ಪೊಲೀಸ್ ಆಯುಕ್ತರು