Advertisement
ಪಟ್ಟಣದ ಗಿರಿಯಮ್ಮ ವೃತ್ತದ ಡಾ.ಬಿ.ಆರ್.ಅಂಬೇ ಡ್ಕರ್ ಭವನದಲ್ಲಿ ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಸಂಯುಕ್ತಾಶ್ರಯ ದಲ್ಲಿ ನಡೆದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯಲ್ಲಿ ಮಾತನಾಡಿದ ಅವರು, ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಆಸೆ ಅವರಿಗೂ ಇರುತ್ತದೆ. ಆದರೆ, ಬಡತನದಿಂದ ಮಕ್ಕಳ ದುಡಿಮೆ ಯಿಂದ ಪೋಷಣೆ ಮಾಡಬೇಕಾಗಿರುವ ಕಾರಣ ಮಕ್ಕಳನ್ನು ಕೆಲಸಕ್ಕೆ ಕಳುಹಿಸುವ ಪರಿಪಾಠ ಇದೆ ಎಂದರು.
Related Articles
Advertisement
ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಎನ್.ಶ್ರೀಕಂಠ, ಕಾರ್ಮಿಕ ಜಿಲ್ಲಾಮಟ್ಟದ ಅಧಿಕಾರಿ ನಾಗೇಂದ್ರ, ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ಸುಬಾರಾವ್.ಎಸ್, ಜಿಲ್ಲಾ ದಿವ್ಯಾಂಗ ಕಲ್ಯಾಣಾಧಿಕಾರಿ ಜಗ ದೀಶ್, ಕಾರ್ಮಿಕ ಇಲಾಖೆ ತಾಲೂಕು ಕಾರ್ಮಿಕ ನಿರೀಕ್ಷಕಿ ಅಂಬಿಕಾ, ಪುರಸಭೆ ಮುಖ್ಯಾಧಿಕಾರಿ ಎ. ಎಚ್.ನಾಗರಾಜ್, ಎನ್‌ಸಿಸಿ ವಿದ್ಯಾರ್ಥಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಇದ್ದರು.
ಬಾಲಕಾರ್ಮಿಕ ಪದ್ಧತಿ ಬುಡಸಮೇತ ತೊಲಗಲಿ : ಮಕ್ಕಳ ಸರ್ವತೋಮುಖ ಬೆಳೆವಣಿಗೆಗೆ ಸಹಕಾರ ನೀಡುವುದರ ಮೂಲಕ ಬಾಲಕಾರ್ಮಿಕ ಪದ್ಧತಿ ಬುಡಸಮೇತ ತೊಲಗಿಸಬೇಕು. ಇದಕ್ಕೆ ಎಲ್ಲರ ಸಹಕಾರ ಬೇಕು. ಸಂವಿಧಾನ, ಸರ್ಕಾರ ಅನೇಕ ಕಾಯ್ದೆ, ಕಾನೂನು ಜಾರಿಗೊಳಿಸುವುದರ ಮೂಲಕ ಬಾಲಕ ಕಾರ್ಮಿಕ ವಿರೋಧಿ ಪದ್ಧತಿ ಮೂಲಕ ಜಾಗೃತಿ ಮೂಡಿಸುತ್ತಿದೆ. ಬಾಲ ಕಾರ್ಮಿಕ ಪದ್ಧತಿ ವಿರೋಧಿ ಕಾಯ್ದೆಯನ್ನು ಅನುಷ್ಠಾನಕ್ಕೆ ತರಬೇಕು. ಇಂತಹ ಅನಿಷ್ಟ ಪದ್ಧತಿ ತೊಲಗಿಸಬೇಕು ಎಂದು ಐದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್. ಬಿರಾದಾರ ದೇವಿಂದ್ರಪ್ಪ ಹೇಳಿದರು.
ಕಡ್ಡಾಯ ಶಿಕ್ಷಣ ಪ್ರತಿ ಮಗುವಿನ ಹಕ್ಕು : ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿಯು ಮಕ್ಕಳನ್ನು ದೈಹಿಕವಾಗಿ, ನೈತಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಹಾಗೂ ಸರ್ವಾಂಗೀಣ ಪ್ರಗತಿಯ ಅವಕಾಶಗಳನ್ನು ತಡೆಗಟ್ಟುತ್ತದೆ. ಶಿಕ್ಷಣ ವಂಚಿತ ಹಾಗೂ ದುಡಿಮೆಯಲ್ಲಿ ತೊಡಗಿರುವ ಈ ಮಕ್ಕಳನ್ನು ರಾಷ್ಟ್ರದ ಮುಖ್ಯವಾಹಿನಿಗೆ ಕರೆತರಲು ಸರ್ಕಾರ, ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಸಂಘಟಿತರಾಗಿ ಪ್ರಯತ್ನಿಸಬೇಕಾಗಿದೆ. ಉಚಿತ ಮತ್ತು ಕಡ್ಡಾಯ ಶಿಕ್ಷಣ ಪ್ರತಿ ಮಗುವಿನ ಹಕ್ಕು ಹಾಗೂ ಅದನ್ನು ಪ್ರತಿ ಮಗುವಿಗೆ ದೊರಕಿಸುವುದು ಪ್ರತಿ ನಾಗರಿಕನ ಕರ್ತವ್ಯ ಆಗಿರುತ್ತದೆ ಎಂದು ತಹಶೀಲ್ದಾರ್ ಶಿವರಾಜ್ ಹೇಳಿದರು.