Advertisement

ಡಿಸೆಂಬರ್ 3 ರಂದು ಕಂಠೀರವದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ

01:27 PM Dec 01, 2022 | Team Udayavani |

ಬೆಂಗಳೂರು: ಇದೇ ಡಿಸೆಂಬರ್ 3ರಂದು ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ವಿಶ್ವ ವಿಕಲಚೇತನ ದಿನಾಚರಣೆಯನ್ನು ಆಯೋಜಿಸಲಾಗಿದೆ.

Advertisement

ಎಲ್ಲರನ್ನೂ ಒಳಗೊಂಡ ಸಮಾಜದ ನಿರ್ಮಾಣಕ್ಕೆ ಪರಿವರ್ತಕ ಪರಿಹಾರಗಳು ಸುಗಮ್ಯ ಮತ್ತು ಸಮಾನ ಜಗತ್ತನ್ನು ಉತ್ತೇಜಿಸುವಲ್ಲಿ ಅವಿಷ್ಕಾರದ ಪಾತ್ರ ಎನ್ನುವ ಘೋಷವಾಕ್ಯದ ಹಿನ್ನಲೆಯಲ್ಲಿ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರು ನೆರವೇರಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ. ನಾರಾಯಣಸ್ವಾಮಿ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ, ಮತ್ತು ಜೀವನೋಪಾಯ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ಎಂ. ರಾಜೀವ್ ಚಂದ್ರಶೇಖರ್ ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.

ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವ ಹಾಲಪ್ಪ ಆಚಾರ್ ಅವರ ಘನ ಉಪಸ್ಥಿತಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಸೇರಿದಂತೆ ವಿಕಲ ಚೇತನ ಬಾಂಧವರು, ವಿಕಲ ಚೇತನ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳು, ಎನ್.ಜಿ.ಓ ಗಳು ಹಾಗೂ ಸಾರ್ವಜನಿಕರು  ಪಾಲ್ಗೊಳ್ಳಲಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next