Advertisement

12 ಜನರಲ್ಲಿ ಒಬ್ಬರಿಗೆ ಮಧುಮೇಹ!

07:19 PM Nov 13, 2021 | Team Udayavani |

ನವದೆಹಲಿ: ಭಾರತದಲ್ಲಿ ಜೀವಿಸುತ್ತಿರುವ ಪ್ರತಿ 12 ಮಂದಿಯ ಪೈಕಿ ಒಬ್ಬರು ಮಧುಮೇಹದಿಂದ ಬಳಲುತ್ತಿದ್ದಾರೆ. ಅಂತಾರಾಷ್ಟ್ರೀಯ ಮಧುಮೇಹ ಫೆಡರೇಷನ್‌ನ ವರದಿಯಿಂದ ಈ ಅಂಶ ಬೆಳಕಿಗೆ ಬಂದಿದೆ.

Advertisement

ಪ್ರಸ್ತುತ ಭಾರತದಲ್ಲಿ 7.4 ಕೋಟಿ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ವಿಶ್ವದಲ್ಲಿ ಅತಿ ಹೆಚ್ಚು ಮಧುಮೇಹಿಗಳನ್ನು ಹೊಂದಿರುವ ರಾಷ್ಟ್ರದಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ಮೊದಲನೇ ಸ್ಥಾನದಲ್ಲಿರುವ ಚೀನಾದಲ್ಲಿ 14.1 ಕೋಟಿ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಒಟ್ಟಾರೆ ವಿಶ್ವಾದ್ಯಂತ 53.7 ಕೋಟಿ ಜನರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ.

ಭಾರತದ ಮಧುಮೇಹಿಗಳಲ್ಲಿ 4 ಕೋಟಿ ಮಂದಿ ಟೈಪ್‌ 2 ಮಧುಮೇಹಿಗಳಾಗಿದ್ದಾರೆ. ಹಾಗೆಯೇ ಶೇ. 53.1 ಮಧುಮೇಹಿಗಳು ಚಿಕಿತ್ಸೆಯನ್ನೇ ಪಡೆಯುತ್ತಿಲ್ಲ ಎನ್ನುವುದು ವರದಿಯಿಂದ ಬೆಳಕಿಗೆ ಬಂದಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next