Advertisement

D.K., ಉಡುಪಿ ಜಿಲ್ಲಾಡಳಿತದಿಂದ ವಿಶ್ವ ಪರಿಸರ ದಿನಾಚರಣೆ

11:23 PM Jun 05, 2024 | Team Udayavani |

ಮಂಗಳೂರು: ಮರ, ಗಿಡಗಳನ್ನು ನಾಶಗೊಳಿಸುವುದರಿಂದ ಮಾತ್ರ ಪರಿಸರ ನಾಶವಾಗುವುದಲ್ಲ, ಮಾಲಿನ್ಯದಿಂದಲೂ ಪರಿಸರ ನಾಶವಾಗುತ್ತದೆ. ಇದರ ಬಗ್ಗೆಯೂ ಎಚ್ಚರ ಅಗತ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಶೋಭಾ ಬಿ.ಜಿ. ಹೇಳಿದರು.

Advertisement

ದ.ಕ. ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ವಿಶ್ವವಿದ್ಯಾನಿಲಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಕೈಗಾರಿಕಾ ಉದ್ದಿಮೆದಾರರು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿಯ ಸಂಯುಕ್ತಾಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಬುಧವಾರ ನಡೆದ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಎಸ್‌. ಮರಿಯಪ್ಪ ಮಾತನಾಡಿ, ಜಾಗತಿಕ ತಾಪಮಾನವನ್ನು ಸಮತೋಲನದಲ್ಲಿ ಇರಿಸುವಲ್ಲಿ ಪರಿಸರದ ಪಾತ್ರ ಮಹತ್ತರವಾದದ್ದು, ಇಂದು ಗಿಡಮರಗಳ ನಾಶದಿಂದ ಅಂತರ್ಜಲ ಬತ್ತಿ ಹೋಗುತ್ತಿದೆ. ನಾವು ನಮ್ಮ ಉದ್ದೇಶಗಳಿಗಾಗಿ ಮರ ಗಿಡಗಳನ್ನು ಕಡಿಯುತ್ತಿದ್ದೇವೆ. ಅವುಗಳ ಸಂಖ್ಯೆಯನ್ನು ಸರಿದೂಗಿಸಬೇಕೆಂದರೆ ನಾವು ಪ್ರತೀ ವರ್ಷವೂ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

ಮರ, ಗಿಡಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಸಬೇಕು. ಮಳೆನೀರಿನ ಕೊಯ್ಲುಗಳನ್ನು ಪ್ರತಿ ಮನೆಯಲ್ಲೂ ಅಳವಡಿಸುವುದರಿಂದ ಅಂತರ್ಜಲ ಕುಸಿತವನ್ನು ತಡೆಗಟ್ಟಬೇಕು ಎಂದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ| ತಾರಾನಾಥ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿ ವಿಜಯ ಹೆಗಡೆ, ಉಪ ಪರಿಸರ ಅಧಿಕಾರಿ ಡಾ| ಮಹೇಶ್ವರಿ ಸಿಂಗ್‌, ಮಂಗಳೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಸಾಮಾಜಿಕ ಅರಣ್ಯ ವಿಭಾಗದ ಸಾಮಾಜಿಕ ಅರಣ್ಯ ವಿಭಾಗದ ಪಿ. ಶ್ರೀಧರ್‌ ಉಪಸ್ಥಿತರಿದ್ದರು.

Advertisement

ಸ್ಪರ್ಧಾ ವಿಜೇತರಿಗೆ ಸಮ್ಮಾನ
ಪರಿಸರ ದಿನದ ಅಂಗವಾಗಿ ವಿವಿಧ ಕಾಲೇಜುಗಳಿಗೆ ಆಯೋಜಿಸಿದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ಮತ್ತು ಸಾಂಕೇತಿಕವಾಗಿ ಜ್ಯೂಟ್‌ (ಸೆಣಬು) ಚೀಲ, ಬಟ್ಟೆ ಚೀಲ ಮತ್ತು ಸಸಿಗಳನ್ನು ವಿತರಿಸಲಾಯಿತು. ವಿವಿಧ ಕೈಗಾರಿಕಾ ವಲಯಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸುರತ್ಕಲ್‌ ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ಡಾ| ರಾಜೇಂದ್ರ ಕಲಾºವಿ ಉಪನ್ಯಾಸ ನೀಡಿದರು.

ಜೀವನ ಶೈಲಿ ಬದಲಾವಣೆಯಿಂದ ಮಾಲಿನ್ಯ ನಿಯಂತ್ರಣ: ಕಿರಣ್‌
ಉಡುಪಿ: ಮನುಷ್ಯರ ಉಳಿವಿಗೆ ಪರಿಸರ, ಜೀವ ವೈವಿಧ್ಯ ತನ್ನದೇ ಆದ ಕೊಡುಗೆ ನೀಡುತ್ತಿದೆ. ನಮ್ಮ ಜೀವನ ಶೈಲಿಯಲ್ಲಿ ಇರುವಂತಹ ಅನೇಕ ವಿಷಯ, ವಸ್ತುಗಳು ಹಾಗೂ ಆಚರಣೆಗಳು ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿವೆ. ದೈನಂದಿನ ಜೀವನ ಶೈಲಿಯಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಪರಿಸರ ಮಾಲಿನ್ಯವನ್ನು ಕಡಿಮೆ ಮಾಡಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಪ್ರಧಾನ ಜಿÇÉಾ ಮತ್ತು ಸತ್ರ ನ್ಯಾಯಾಧೀಶರಾದ ಕಿರಣ್‌ ಸಿದ್ದಪ್ಪ ಗಂಗಣ್ಣವರ್‌ ಹೇಳಿದರು.

ಮಣಿಪಾಲ ರಜತಾದ್ರಿಯಲ್ಲಿ ಬುಧವಾರ ಜಿಲ್ಲಾಡಳಿತ, ಮಾಲಿನ್ಯ ನಿಯಂತ್ರಣ ಮಂಡಳಿ, ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ಲಾಸ್ಟಿಕ್‌ ಪರಿಸರಕ್ಕೆ ಮಾರಕವಾದ ವಸ್ತು. ದೈನಂದಿನ ಜೀವನದಲ್ಲಿ ಪ್ಲಾಸ್ಟಿಕ್‌ ಕಡಿಮೆ ಬಳಕೆ, ಮರುಬಳಕೆ, ನಿಷೇಧದ ಮೂಲಕ ಅದರ ದುಷ್ಪರಿಣಾಮಗಳನ್ನು ತಡೆಯಲು ಸಾಧ್ಯವಾಗಲಿದೆ ಎಂದರು.

ಕ.ರಾ.ಮಾ.ನಿ. ಮಂಡಳಿ ಪ್ರಾದೇಶಿಕ ಅಧಿಕಾರಿ ಡಿ.ಪಿ ಮಹೇಂದ್ರ ಪ್ರಾಸ್ತಾವನೆಗೈದರು. ವಿಶ್ವ ಪರಿಸರ ದಿನಾಚರಣೆ-2024 ರ ಅಂಗವಾಗಿ ಶಾಲಾ ಮಕ್ಕಳಿಗಾಗಿ ಆಯೋಜಿಸಲಾದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಎಎಸ್ಪಿ ಸಿದ್ಧಲಿಂಗಪ್ಪ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಪುರುಷೋತ್ತಮ, ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕ ನಾಗರಾಜ್ , ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಉಪನ್ಯಾಸಕರು ಉಪಸ್ಥಿತರಿದ್ದರು.

ಉಪ ಪರಿಸರ ಅಧಿಕಾರಿ ಡಾ| ಅಮೃತಾ ಎ.ಎಸ್‌. ಸ್ವಾಗತಿಸಿ, ಶಿವಪ್ರಸಾದ್‌ ಅಡಿಗ ನಿರೂಪಿಸಿ, ಪರಿಸರ ಇಲಾಖೆ ಸಿಬಂದಿ ರಾಜೇಶ್ವರಿ ವಂದಿಸಿದರು.

ಧನಾತ್ಮಕ ಶಕ್ತಿ
ಎಂಐಟಿ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದ ಪ್ರಾಧ್ಯಾಪಕ ಡಾ| ಬಾಲಕೃಷ್ಣ ಮ¨ªೋಡಿ ಉಪನ್ಯಾಸ ನೀಡಿ, ಪ್ರತಿಯೊಬ್ಬರೂ ಪರಿಸರದ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಯತ್ನ ಮಾಡಬೇಕು. ಪರಿಸರದಲ್ಲಿರುವ ಧನಾತ್ಮಕ ಶಕ್ತಿಯನ್ನು ಪಡೆದುಕೊಂಡು ಚೈತನ್ಯ ಹೊಂದಬೇಕು ಎಂದರು. ಪರಿಸರಕ್ಕೆ ಪೂರಕವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು. ಪರಿಸರ ದಿನಾಚರಣೆ ಕೇವಲ ಆಚರಣೆಗೆ ಸೀಮಿತವಾಗಿರದೇ ಅದನ್ನು ಮುಂದಿನ ಪೀಳಿಗೆಗೆ ಉಳಿಸುವ ಕೆಲಸ ಮಾಡಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next