Advertisement

ವಿಶ್ವ ವಿಖ್ಯಾತ ಐಫೆಲ್ ಟವರ್ ಗೆ ಬಾಂಬ್ ಬೆದರಿಕೆ

07:42 PM Sep 23, 2020 | Hari Prasad |

ಪ್ಯಾರಿಸ್: ವಿಶ್ವ ವಿಖ್ಯಾತ ಐಫೆಲ್ ಟವರ್ ನಲ್ಲಿ ಬಾಂಬ್ ಇರಿಸಲಾಗಿದೆ ಎಂದು ಅನಾಮಿಕ ವ್ಯಕ್ತಿಯೊಬ್ಬ ದೂರವಾಣಿ ಕರೆ ಮಾಡಿ ತಿಳಿಸಿದ ಕಾರಣದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಇಲ್ಲಿಂದ ಪ್ರವಾಸಿಗರನ್ನು ತೆರವುಗೊಳಿಸಲಾಗಿದೆ ಮತ್ತು ಟವರ್ ಸುತ್ತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

Advertisement

ಸ್ಥಳೀಯ ಕಾಲಮಾನದ ಪ್ರಕಾರ ಬುಧವಾರ ಬೆಳಗ್ಗೆ ಕರೆ ಮಾಡಿದ್ದ ಅನಾಮಿಕ ವ್ಯಕ್ತಿ ಈ ಬಾಂಬ್ ಬೆದರಿಕೆಯನ್ನು ಒಡ್ಡಿದ್ದಾನೆ ಎಂದು ಈ ಟವರ್ ನ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿರುವ ಕಂಪೆನಿಯ ಅಧಿಕಾರಿಯವರು ನೀಡಿರುವ ಮಾಹಿತಿಯನ್ನುದ್ದೇಶಿಸಿ ಇಂಡಿಯಾ ಟುಡೇ ವರದಿ ಮಾಡಿದೆ.

ಟವರ್ ಕಡೆಗೆ ಸಾಗುವ ಎಲ್ಲಾ ರಸ್ತೆಗಳನ್ನೂ ಪೊಲೀಸರು ಬಂದ್ ಮಾಡಿದ್ದಾರೆ. ಆದರೆ ಕೆಲ ಹೊತ್ತಿನ ಬಳಿಕ ಈ ತಡೆಗಳನ್ನು ತೆರವುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

131 ವರ್ಷಗಳಷ್ಟು ಹಳೆಯದಾಗಿರುವ ಈ ಟವರ್ ಗೆ ಸಾಮಾನ್ಯ ದಿನಗಳಲ್ಲಿ ಸುಮಾರು 25 ಸಾವಿರದಷ್ಟು ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ ಕೋವಿಡ್ 19 ನಿರ್ಬಂಧಗಳ ಕಾರಣ ಈ ವರ್ಷ ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next