Advertisement

ಕೋವಿಡ್‌-19 : ಸಂಕಷ್ಟದ ನಡುವೆ ಭರವಸೆಯ ಬೆಳಕು ಮೂಡುತ್ತಿದೆ

12:03 AM Jun 20, 2020 | Hari Prasad |

ಜಿನೀವಾ: ವಿಶ್ವದಾದ್ಯಂತ ಕೋವಿಡ್‌-19 ಪ್ರಕರಣಗಳು ಹೆಚ್ಚಾಗುತ್ತಿದ್ದರೂ, ‘ಭರವಸೆಯ ಬೆಳಕು ಮೂಡುತ್ತಿದೆ  ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರು ಹೇಳಿದ್ದಾರೆ.

Advertisement

ಜಿನೀವಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶಕ ಡಾ. ಟೆಡ್ರೊಸ್‌ ಅಧಾನೊಮ್‌ ಘೆಬ್ರೆಯೆಸಸ್‌, ಯುನೈಟೆಡ್‌ ಕಿಂಗ್‌ಡಂನಲ್ಲಿ ಸಾಮಾನ್ಯ ಸ್ಟೀರಾಯ್ಡ್ ಡೆಕ್ಸಮೆಥಾಸೊನ್‌ ತೀವ್ರವಾಗಿ ಅನಾರೋಗ್ಯ ಪೀಡಿತರಿಗೆ ಪ್ರಯೋಜನಕಾರಿ ಪರಿಣಾಮಗಳನ್ನು ತೋರಿಸಿದೆ ಎಂದು ವೈದ್ಯಕೀಯ ಪರೀಕ್ಷೆಯ ಪ್ರಗತಿಯನ್ನು ಶ್ಲಾಘಿಸಿದ್ದಾರೆ.

ಆದರೆ ಈ ಔಷಧಿಯನ್ನು ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಮಾತ್ರ ಬಳಸಬೇಕು ಹಾಗೂ ಅಗತ್ಯವಿರುವ ರೋಗಿಗಳಿಗೆ ಮಾತ್ರ ಬಳಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳು ಎಚ್ಚರಿಸಿದ್ದು, ನಿರ್ಣಾಯಕ ರೋಗಿಗಳಿಗೆ ಸಹಾಯ ಮಾಡಬಹುದಾದರೂ, ಇದು ವೈರಸ್‌ಗೆ ಚಿಕಿತ್ಸೆಯಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆರೋಗ್ಯ ತುರ್ತು ಕಾರ್ಯಕ್ರಮದ ಕಾರ್ಯನಿರ್ವಾಹಕ ನಿರ್ದೇಶಕ ಮೈಕೆಲ್‌ ರಯಾನ್‌ ಅಭಿಪ್ರಾಯಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next