Advertisement

ಮಲೇರಿಯಾ ನಿರ್ಲಕ್ಷಿಸದೇ ಸಕಾಲಕ್ಕೆ ಚಿಕಿತ್ಸೆ ಪಡೆಯಿರಿ  

06:49 PM Apr 27, 2022 | Team Udayavani |

ತುಮಕೂರು: ವಿಶ್ವ ಮಲೇರಿಯಾ ದಿನದ ಅಂಗವಾಗಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜನಸಾಮಾನ್ಯರಲ್ಲಿ ಮಲೇರಿಯಾ ರೋಗದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಮಲೇರಿಯಾ ದಿನದ ಅಂಗವಾಗಿ ಜಾಗೃತಿ ಜಾಥಾ ನಡೆಯಿತು.

Advertisement

ನಗರದ ಟೌನ್‌ಹಾಲ್‌ ವೃತ್ತದಲ್ಲಿ ಜಮಾಯಿಸಿದ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿಗಳಿಂದ ನಡೆದ ಜಾಥಾಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್‌ ಹಾಗೂ ಜಿಪಂ ಸಿಇಒ ಡಾ.ಕೆ.ವಿದ್ಯಾಕುಮಾರಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಜಿಪಂ ಸಿಇಒ ಡಾ.ಕೆ. ವಿದ್ಯಾಕುಮಾರಿ, ಮಲೇರಿಯಾ ಜ್ವರದ ರೂಪದಲ್ಲಿ ಕಾಣಿಸಿಕೊಳ್ಳುತ್ತಿದೆ. ಒಂದು ಸೊಳ್ಳೆಯಿಂದ ಬರು ವಂತಹ ಕಾಯಿಲೆ ಇದಾಗಿದೆ. ಈ ಹಿಂದೆ ಈ ಕಾಯಿಲೆಯಿಂದ ಅನೇಕ ಜನ ಸಾವನ್ನಪ್ಪಿದ್ದಾರೆ. ಆದರೆ ಇಂದು ಚಿಕಿತ್ಸೆಯಿಂದಾಗಿ ಸಾವು ಸಂಭವಿ ಸುತ್ತಿಲ್ಲ. ನಿರ್ಲಕ್ಷ್ಯ ಮಾಡದೆ ಜ್ವರ ಕಾಣಿಸಿಕೊಂಡ ತಕ್ಷಣ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.

ಸ್ವಚ್ಛತೆ ಕಾಪಾಡಿ: ಮನೆಯ ಸುತ್ತಮುತ್ತ ನೀರು ನಿಲ್ಲದ ಹಾಗೆ, ಸೊಳ್ಳೆಗಳು ಉತ್ಪಾದನೆಯಾಗದಂತೆ ನೋಡಿಕೊಳ್ಳಬೇಕು. ಸ್ವಚ್ಛತೆ ಕಾಪಾಡಬೇಕು. ಈ ಮೂಲಕ ನಮ್ಮ ಆರೋಗ್ಯವನ್ನು ನಾವು ಕಾಪಾಡಿ ಕೊಳ್ಳಬೇಕು. ನಮ್ಮ ಪರಿಸರವನ್ನು ಸ್ವತ್ಛವಾಗಿಟ್ಟು ಕೊಳ್ಳುವ ಮೂಲಕ ಮಲೇರಿಯಾ ರೋಗ ಬರದಂತೆ ಎಲ್ಲರೂ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಟಿ.ಎನ್‌. ಪುರುಷೋ ತ್ತಮ್‌ ಮಾತನಾಡಿ, ಮಲೇರಿಯಾ ಸೊಳ್ಳೆಯಿಂದ ಹರಡುವ ಕಾಯಿಲೆ ಇದಾಗಿದೆ. ವಿಶ್ವಾದ್ಯಂತ ಸಹಸ್ರಾರು ವರ್ಷಗಳಿಂದ ಮಲೇರಿಯಾ ಕಾಯಿಲೆ ಇದ್ದು, ಅನೇಕ ಜನ ಈ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ ಎಂದರು.

Advertisement

 ಜಾಗೃತಿ ಮೂಡಿಸಲು ಜಾಥಾ: ಮಲೇರಿಯಾ ದೊಡ್ಡ ಪಿಡುಗಾಗಿ ಕಾಡುತ್ತಿರುವ ಕಾಯಿಲೆ. ಇದನ್ನು ಹತೋಟಿಗೆ ತರಲು ವಿಶ್ವಸಂಸ್ಥೆ ಮಟ್ಟದಲ್ಲಿ 2008 ರಿಂದ ವಿಶ್ವ ಮಲೇರಿಯಾ ದಿನ ಆಚರಣೆ ಮಾಡಲಾಗುತ್ತಿದೆ. ನಿಯಂತ್ರಣಕ್ಕಾಗಿ ಆಗಿರುವ ಕೆಲಸಗಳ ಬಗ್ಗೆ ಚರ್ಚೆ ಮಾಡಲಾಗುವುದು. ನಿಯಂತ್ರಣಕ್ಕಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಚರ್ಚಿಸುವ ಸಲುವಾಗಿ ವಿಶ್ವ ಮಲೇರಿಯಾ ದಿನವನ್ನು ಆಚರಿಸಲಾಗುತ್ತಿದೆ. ಜತೆಗೆ ಈ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಜಾಥಾ ನಡೆಸಲಾಗುತ್ತಿದೆ ಎಂದರು.

ಮೇಯರ್‌ ಬಿ.ಜಿ.ಕೃಷ್ಣಪ್ಪ, ಡಿಹೆಚ್‌ಒ ಡಾ. ನಾಗೇಂದ್ರಪ್ಪ, ಡಾ.ಚೇತನ್‌ಕುಮಾರ್‌, ಡಾ. ಲಕ್ಷಿ¾à ಕಾಂತ್‌, ಆರೋಗ್ಯ ಇಲಾಖೆಯ ಪುಟ್ಟಯ್ಯ, ಚಿಕ್ಕ ತಿಮ್ಮಯ್ಯ, ಸತೀಶ್‌ಬಾಬು, ನಾಗರಾಜು, ತಿಮ್ಮಪ್ಪ, ಕಾಂತರಾಜು, ಶ್ರೀನಿವಾಸ್‌, ಮಂಜಣ್ಣ, ಜಯಣ್ಣ, ನಾಗೇಶ್‌, ಕಲ್ಲೇಶ್‌ ಮತ್ತಿತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next