Advertisement

ಮಲೇರಿಯಾ ನಿರ್ಮೂಲನೆಗೆ ಸಹಕರಿಸಿ

03:21 PM Apr 26, 2022 | Team Udayavani |

ಕೋಲಾರ: ದೇಶದಲ್ಲಿ ಮಲೇರಿಯಾ ರೋಗವನ್ನು 2025 ರೊಳಗಾಗಿ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಉದ್ದೇಶವನ್ನು ಹೊಂದಲಾಗಿದ್ದು ಅದಕ್ಕಾಗಿ ಪ್ರತಿಯೊಬ್ಬ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಕೈ ಜೋಡಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎ.ವಿ. ನಾರಾಯಣಸ್ವಾಮಿ ಸಲಹೆ ನೀಡಿದರು.

Advertisement

ಸೋಮವಾರ ನಗರದ ದರ್ಗಾಮೊಹಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. “ನವೀನ ವಿಧಾನವನ್ನು ಬಳಸೋಣ-ಮಲೇರಿಯಾ ಕಡಿಮೆ ಮಾಡಿ ಜೀವ ಉಳಿಸೋಣ’ ಎಂಬ ಈ ವರ್ಷದ ಘೋಷಣೆಯೊಂದಿಗೆ ಮಲೇರಿಯಾ ಹರಡುವಿಕೆ ಹಾಗೂ ಅದರ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಆಶಾ ಕಾರ್ಯಕರ್ತೆಯರು, ಅಂಗನವಾಡಿ, ಆರೋಗ್ಯ ಕಾರ್ಯಕರ್ತೆಯರು ಜನತೆಗೆ ಅರಿವು ಮೂಡಿಸುವ ಕೆಲಸ ಮಾಡಿ ಎಂದು ಕೋರಿದರು.

ಸೊಳ್ಳೆಗಳಿಂದ ಮಲೇರಿಯಾ, ಡೆಂಗ್ಯು, ಚಿಕನ್‌ಗುನ್ಯಾ, ಮೆದುಳು ಜ್ವರ ಬರುತ್ತದೆ, ಕಳೆದ ವರ್ಷ ಜಿಲ್ಲೆಯಲ್ಲಿ 15787 ರಕ್ತ ಲೇಪನ ಪರೀಕ್ಷೆಗೆ ಒಳಪಡಿಸಿದಾಗ ತಾಲೂಕಿನಲ್ಲಿ ಕೇವಲ 3 ಮಲೇರಿಯಾ ಪ್ರಕರಣ ಕಂಡು ಬಂದಿತ್ತು ಎಂದ ಅವರು, ಈ ಸಾಲಿನಲ್ಲಿ ಕಳೆದ ಜನವರಿಯಿಂದ ಈವರೆಗೂ 15787 ರಕ್ತ ಲೇಪನ ಪರೀಕ್ಷೆಗೆ ಒಳಪಡಿಸಿದ್ದು, ಒಂದೂ ಪ್ರಕರಣ ಕಂಡು ಬಂದಿಲ್ಲ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರಸಭಾ ಸದಸ್ಯ ಹಾಗೂ ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಅಸ್ಲಾಂಪಾಷ, ಸೊಳ್ಳೆಗಳ ನಿಯಂತ್ರಣಕ್ಕೆ ಜನತೆ ವೈದ್ಯಾ ಕಾರಿಗಳು ಹೇಳುವ ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊ ಳ್ಳುವ ಮೂಲಕ ಮಲೇರಿಯಾ ನಿಯಂತ್ರಣಕ್ಕೆ ಕೈಜೋಡಿಸಬೇಕು ಎಂದರು.

ಜಿಲ್ಲಾ ಕೀಟತಜ್ಞ ವೇಣುಗೋಪಾಲ್‌ ಮಾತನಾಡಿ, ಕೋಲಾರ ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳು ಈ ವರ್ಷ ವರದಿಯಾಗಿಲ್ಲ ಆದರೆ ಡೆಂಗ್ಯು 46 ಪ್ರಕರಣ ವರದಿಯಾಗಿದೆ ಎಂದು ತಿಳಿಸಿ, ಸೊಳ್ಳೆಗಳ ನಿಯಂತ್ರಣದ ಮೂಲಕ ಈ ಎಲ್ಲಾ ಸಾಂಕ್ರಾಮಿಕ ರೋಗಗಳನ್ನು ತಡೆಯಬಹುದು ಎಂದರು. ತಾಲ್ಲೂಕು ಆರೋಗ್ಯ ನಿರೀಕ್ಷಕ ಸತ್ಯನಾರಾಯಣಗೌಡ ಮಾತನಾಡಿದರು.

Advertisement

ಆರೋಗ್ಯ ರಕ್ಷಾ ಸಮಿತಿ ಸದಸ್ಯ ಜಿಯಾವುಲ್ಲಾ ಖಾನ್‌, ಆರೋಗ್ಯ ನಿರೀಕ್ಷಕ ಮಹೇಶ್‌, ಆಯುಷ್‌ ವೈದ್ಯಾಧಿಕಾರಿ ಡಾ.ರೋಹಿ ಸುಲ್ತಾನಾ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next