Advertisement

ಮಲೇರಿಯಾ ನಿಯಂತ್ರಣ ದಿನಾಚರಣೆ

02:49 AM Apr 26, 2019 | sudhir |

ಮಂಗಳೂರು/ ಉಡುಪಿ: ವಿಶ್ವ ಮಲೇರಿಯಾ ದಿನಾಚರಣೆ ಪ್ರಯುಕ್ತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುರುವಾರ ಮಲೇರಿಯಾ ದಿನಾಚರಣೆ ನಡೆಸಲಾಯಿತು.

Advertisement

ಮಂಗಳೂರಿನ ದ.ಕ. ಜಿ.ಪಂ. ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಡಾ| ಸೆಲ್ವಮಣಿ ಆರ್‌. ಮಲೇರಿಯಾ ನಿಯಂತ್ರಣ ಅಭಿಯಾನಕ್ಕೆ ಚಾಲನೆ ನೀಡಿದರು. ಜಿಲ್ಲಾ ಆರೋಗ್ಯಾಧಿಕಾರಿ ಮತ್ತಿತರ ಪ್ರಮುಖರು ಭಾಗವಹಿಸಿದ್ದರು. ಈ ಬಾರಿಯ ಮುಖ್ಯ ಕಾರ್ಯಕ್ರಮವಾಗಿ ನಗರದ 62 ಸರಕಾರಿ ಕಚೇರಿಗಳಿಗೆ ಭೇಟಿ ನೀಡಿ ಮಲೇರಿಯಾ ತಡೆಗಟ್ಟುವ ನಿಟ್ಟಿನಲ್ಲಿ ವಹಿಸಬೇಕಾದ ಎಚ್ಚರಿಕೆ, ಜಾಗೃತಿ ಕಾರ್ಯಗಳ ಕುರಿತು ಕಚೇರಿ ಸಿಬಂದಿಗಳಿಗೆ ಮಾಹಿತಿ ನೀಡಲಾಯಿತು. “ಮಲೇರಿಯಾ ನಿರ್ಮೂಲನೆ ನನ್ನಿಂದ ಪ್ರಾರಂಭ’ ಎಂಬ ಘೋಷವಾಕ್ಯದಡಿ ಕಾರ್ಯಕ್ರಮ ನಡೆಯಿತು.

ಉಡುಪಿ ಪತ್ರಿಕಾ ಭವನದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ, ಆಶ್ರಿತ ರೋಗಗಳ ನಿಯಂತ್ರಣ ಕಚೇರಿ ಆಶ್ರಯದಲ್ಲಿ ನಡೆದ ವಿಶ್ವ ಮಲೇರಿಯಾ ದಿನಾಚರಣೆ ಮತ್ತು ಮಾಧ್ಯಮ ಪ್ರತಿನಿಧಿಗಳ ಕಾರ್ಯಾಗಾರದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಓಂಪ್ರಕಾಶ್‌ ಕಟ್ಟಿಮನಿ ಮಾತನಾಡಿದರು. ದೇಶವನ್ನು 2030ರ ವೇಳೆಗೆ ಮತ್ತು ರಾಜ್ಯವನ್ನು 2025ಕ್ಕೆ ಮಲೇರಿಯಾ ಮುಕ್ತ ಮಾಡಲು ಸರಕಾರ ಗುರಿ ನಿಗದಿ ಮಾಡಿದ್ದು, ಆರೋಗ್ಯ ಇಲಾಖೆ 2022ಕ್ಕೆ ಮಲೇರಿಯಾ ನಿರ್ಮೂಲನೆ ಮಾಡಿ, ಮತ್ತೆ 3 ವರ್ಷ ನಿಗಾ ವಹಿಸಲು ಚಿಂತನೆ ನಡೆಸಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next