ಚಿಕ್ಕಬಳ್ಳಾಪುರ: ದಿನ ನಿತ್ಯದ ಜೀವನ ಜಂಜಾಟದಲ್ಲಿ ಒತ್ತಡಗಳು ಸರ್ವೇ ಸಾಮಾನ್ಯ. ಆದರೆ, ಆತ್ಮಸ್ಥೈರ್ಯ ಕಳೆದುಕೊಳ್ಳುವ ಕೆಲಸವನ್ನು ಯಾರೂ ಮಾಡಬಾರದು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷಬೈರಪ್ಪ ಶಿವಲಿಂಗ ನಾಯಿಕ ಹೇಳಿದರು.
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನುಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ,ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿವಿಶ್ವಮಾನಸಿಕಆರೋಗ್ಯದಿನಾಚರಣೆಯ ಪ್ರಯುಕ್ತ ಜಿಲ್ಲಾನ್ಯಾಯಾಲಯದ ಆವರಣದಲ್ಲಿ ಅರಿವು ರಥಕ್ಕೆ ಚಾಲನೆ ನೀಡಿ ಮಾತನಾಡಿದರು.
ಸದೃಢ ಮನೋಭಾವ ಇರಲಿ: ಕೋವಿಡ್ ದಂತಹ ಮಹಾಮಾರಿಯಿಂದ ಕಳೆದ 7 ತಿಂ ಗಳಿನಿಂದ ಹಲವಾರು ಜನ ಮಾನಸಿಕ ಖನ್ನತೆಗೆ ಒಳಗಾಗಿದ್ದಾರೆ. ಆದ್ದರಿಂದ ಆಂತಹವರಆತ್ಮಸ್ಥೈರ್ಯ ತುಂಬುವ ಸಲುವಾಗಿ ಇಂತಹ ಅರಿವು ಕಾರ್ಯಕ್ರಮ ಆಯೋಜಿಸುವ ಮೂಲ ಕ ಅವರಲ್ಲಿ ಸದೃಢ ಮನೋಭಾವ ಬೆಳೆಸುವ ಕರ್ತವ್ಯ ನಮ್ಮದಾಗಿದೆ ಎಂದು ತಿಳಿಸಿದರು.
ಆತ್ಮಸ್ಥೈರ್ಯ ತುಂಬಿ:ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಎಚ್. ತಮ್ಮೇಗೌಡ ಮಾತನಾಡಿ, ಮಾನಸಿಕ ಕಾಯಿಲೆಗೆ ಅತೀ ಹೆಚ್ಚಾಗಿ ಅನಕ್ಷರಸ್ಥರು, ಬಡವರು, ಮೂಡನಂಬಿಕೆ ನಂಬುವರು ಹೆಚ್ಚಾಗಿ ತುತ್ತಾಗುತ್ತಿದ್ದಾರೆ. ಮಾನಸಿಕ ಒತ್ತಡದಿಂದ ಆ ವ್ಯಕ್ತಿಗಳು ಹುಚ್ಚರಾಗುತ್ತಿದ್ದಾರೆ. ಇಂತಹ ವ್ಯಕ್ತಿಗಳನ್ನು ಮನೋವೈದ್ಯರು ಸಮಾಲೋಚನೆ ನಡೆಸಿ ಅವರಿಗೆ ಆತ್ಮ ಸ್ಥೈರ್ಯ ತುಂಬುವ ಕೆಲಸ ಮಾಡಬೇಕಿದೆ ಎಂದರು.
ಜಿಲ್ಲಾ ಮಾನಸಿಕ ತಜ್ಞರಾದ ಕಿಶೋರ್ ಮಾತನಾಡಿ, ಎಲ್ಲರಿಗೂ “ಮಾನಸಿಕ ಆರೋಗ್ಯ: ಹೆಚ್ಚಿನ ಹೂಡಿಕೆ-ಚಿಕಿತ್ಸೆಗೆ ಹೆಚ್ಚಿನ ಅವಕಾಶ’ ಎಂಬ ಘೋಷವಾಕ್ಯದಡಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಆಚರಿಸಲಾಗುತ್ತಿದ್ದು, ಇಂದಿನ ಆಧುನಿಕ ಜಂಜಾಟದಲ್ಲಿ ಮಾನಸಿಕ ಒತ್ತಡಕ್ಕೆ ಒಳಗಾಗಿ ಅನೇ ಕದೈಹಿಕ ಸಮಸ್ಯೆಗಳಿಗೂ ತುತ್ತಾಗುವ ಸಾಧ್ಯತೆಯಿದೆ ಎಂದು ನುಡಿದರು.
ನಾಲ್ಕನೇ ಜಿಲ್ಲಾ ಸತ್ರ ನ್ಯಾಯಾಧೀಶರಾದ ಎಸ್.ನಟರಾಜ್, ಅಪರ ಜಿಲ್ಲಾ ಸತ್ರ ನ್ಯಾಯಾಧೀಶರಾದ (ವಿಶೇಷ ನ್ಯಾಯಾಲಯ) ಬಿ.ಸಿ.ಭಾನುಮತಿ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ ಶ್ರೀಮತಿ ರೂಪಾ ಕೆ.ಎನ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯಕಾರ್ಯದರ್ಶಿಗಳಾದ ಎಚ್.ದೇವರಾಜ್, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾದ ಕೆ.ವಿ.ಬಾಲಾಜಿ, ಜಿಲ್ಲಾ ವಕೀಲರ ಸಂಘದ ಪ್ರಧಾನಕಾರ್ಯದರ್ಶಿ ವಿನೋದ್‌ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಹಾಗೂ ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುಳಾ, ಜಿಲ್ಲಾ ಆರೋಗ್ಯ ಮೇಲ್ವಿಚಾರಕರಾದ ಮಹೇಶ್, ಮನೋವೈದ್ಯರಾದ ನವೀನ್ ಮತ್ತಿತರರಿದ್ದರು