Advertisement
ಮಗು ಹುಟ್ಟುವ ಸಂದರ್ಭ ಅಮೃತಘಳಿಗೆ ಎಂದು ಹೇಳುತ್ತಾರೆ. ತಾಯಿಗೆ ಅದು ಅವಿಸ್ಮರಣೀಯ ಕ್ಷಣ. ಜನ್ಮ ನೀಡಿ ಮರುಜನ್ಮ ಪಡೆಯುವ ನಿಸ್ವಾರ್ಥ ಹೃದಯಕ್ಕೆ ಅಮ್ಮಂದಿರ ದಿನದ ಶುಭಾಶಯ. ನಮ್ಮನ್ನೆಲ್ಲ ಕಣ್ಣ ರೆಪ್ಪೆಯಂತೆ ಸಲಹಿ, ಹೃದಯದಲ್ಲಿ ಬೆಚ್ಚಗೆ ಕಾಪಿಟ್ಟು ತಮ್ಮ ಉಸಿರು ಇರುವರೆಗೂ ಕಾಳಜಿ ಮಾಡುವ ಬರೀ ನಿಷ್ಕಲ್ಮಶ ಪ್ರೀತಿಯನ್ನೇ ಧಾರೆ ಯೆರೆಯುವ ಕರುಣಾಮೂರ್ತಿ ಅಮ್ಮ. ಮಾತೃಹೃದಯವೇ ಅಂಥದ್ದು. ಎಲ್ಲ ಕಡೆಯೂ ಇರಲಾಗದ ದೇವರು, ಅಮ್ಮನೆಂಬ ಜೀವವನ್ನು ಸೃಷ್ಟಿಸಿದನಂತೆ. ಎಲ್ಲರ ಜೀವನ ತುಂಬಾ ಅಮ್ಮನೇ ಆವರಿಸಿ ಕೊಂಡಿ¨ªಾಳೆ, ಸೂರ್ಯೋದಯದ ಸಮಯದಲ್ಲಿ ಆಗಸದ ತುಂಬಾ ಹಬ್ಬಿಕೊಳ್ಳುವ ಹೊಂಬಣ್ಣದಂತೆ. ಹೌದು, ಅಮ್ಮ ಎನ್ನೋ ಎರಡ ಕ್ಷರದಲ್ಲಿ ಸಹನೆ, ಪ್ರೀತಿ, ಕರುಣೆ, ವಾತ್ಸಲ್ಯ, ತಾಳ್ಮೆ, ತ್ಯಾಗದ ಪ್ರತಿ ರೂಪ ಅಡಗಿದೆ. ನವಮಾಸದಲ್ಲಿ ಅದೆಷ್ಟೋ ನೋವು ಅನು ಭವಿಸಿ ನಮ್ಮನ್ನು ಈ ಜಗತ್ತಿಗೆ ಪರಿಚಯಿಸಿದ ತಾಯಿಯ ಋಣ ತೀರಿಸಲಾಗದು. ಅದಕ್ಕಾಗಿ ವಿಶೇಷ ದಿನದ ಅಗತ್ಯವೂ ಇಲ್ಲ. ಹಾಗಿದ್ದರೂ ಆಕೆಯನ್ನು ಗೌರವಿಸಲು ಪ್ರತೀ ವರ್ಷ ಮೇ 2ನೇ ರವಿವಾರ ವಿಶ್ವ ತಾಯಂದಿರ ದಿನ ಆಚರಿಸಲಾಗುತ್ತದೆ.
Related Articles
Advertisement
ನಿಸ್ವಾರ್ಥ ಸೇವೆ: ಭೂಮಿ ಮೇಲೆ ತಂದೆ-ತಾಯಿ ಇಲ್ಲದವರು ಅನಾಥರಲ್ಲ ಬದಲಾಗಿ ಅವರ ಮೌಲ್ಯ ಅರಿಯದವರೇ ನಿಜವಾದ ಅನಾಥರು. ಆಕೆ ಮಾಡುವುದೆಲ್ಲವೂ ಮಕ್ಕಳಿಗಾಗಿಯೇ. ಮಕ್ಕಳ ಭವಿಷ್ಯ ರೂಪಿಸುವ ಶಿಲ್ಪಿ ತಾಯಿ. ಆ ತಾಯಿಯ ಕನಸಿಗೆ, ಹೋರಾಟಕ್ಕೆ ಹೆಗಲು ಕೊಟ್ಟು, ಬೆಂಗಾವಲಾಗಿರುವುದು ತಂದೆ. ಹೊತ್ತು ಮೂಡುವ ಮುನ್ನವೇ ರಸ್ತೆ ಕಸ ಗುಡಿಸಿ ಸ್ವತ್ಛ ಮಾಡುವ ಪೌರ ಕಾರ್ಮಿಕ ಮಹಿಳೆಯರು, ಹಗಲಿರುಳು ರೋಗಿಯ ಸೇವೆ ಮಾಡುವ ನರ್ಸ್, ವೈದ್ಯೆ, ದಾದಿಯರು ಹಾಗೂ ಸಮಾಜದ ಸ್ವಾಸ್ಥ್ಯಕ್ಕಾಗಿ ದುಡಿಯುವ ಪೊಲೀಸ್ ಮಹಿಳಾ ಸಿಬಂದಿ ಎಲ್ಲರೂ ತಾಯಂದಿರ ಪಟ್ಟಿಗೆ ಸೇರುತ್ತಾರೆ. ಇವರೆಲ್ಲರೊಂದಿಗೆ ಸಂಸಾರದ ಹೊಣೆ ನಿಭಾಯಿಸಲೆಂದು ಪುರುಷ ಸ್ಥಾನ ತುಂಬಬಲ್ಲ ಪ್ರತೀ ಮಹಿಳೆಯ ನಿಸ್ವಾರ್ಥ ಸೇವೆ ಗುರುತಿಸಿ ಕೃತಜ್ಞತೆ ಸಲ್ಲಿಸಬೇಕಿದೆ.
ಪ್ರೀತಿ ಹಂಚುವ ದಿನವಾಗಲಿ: ಅಮ್ಮ ಟೈ ಎಲ್ಲಿ? ಅಮ್ಮ ಪರ್ಸ್ ಎಲ್ಲಿ? ಮೊಬೈಲ್ ಎಲ್ಲಿದೆ ಅಮ್ಮ? ಹೀಗೆ ಪ್ರತಿಯೊಂದಕ್ಕೂ ಅಮ್ಮ ನನ್ನು ಕರೆದಷ್ಟು ಬಾರಿಯೂ ಅಷ್ಟೇ ಸಹನೆಯಿಂದಲೇ ಆಕೆ ಪ್ರತಿಕ್ರಿಯಿಸುತ್ತಾಳೆ. ಆದರೆ ಈಗ ಕೆಲವೆಡೆಗಳಲ್ಲಿ ಅದೇ ಮಕ್ಕಳನ್ನು ತಾಯಿ ಕರೆದರೆ, ಆಕೆಗೆ ವಯಸ್ಸಾಗಿದೆ ಎಂಬರ್ಥದಲ್ಲಿ ವ್ಯಂಗ್ಯವಾಡುವ ಮಕ್ಕಳೂ ಇದ್ದಾರೆ. ಇಲ್ಲಿ ನೆನಪಿರಬೇಕಾದ್ದು ಒಂದೇ, ಆಕೆ ಇಲ್ಲದಿದ್ದರೆ ನಮ್ಮ ಅಸ್ತಿತ್ವವೇ ಇಲ್ಲವೆಂಬುದು. ನಮ್ಮ ತೊದಲು ನುಡಿ, ತಪ್ಪು ಹೆಜ್ಜೆ ಸರಿಪಡಿಸಿ ಜೀವನ ರೂಪಿಸುವ ಮಾರ್ಗದರ್ಶಕಿಯಾದ ಆಕೆ ಮಕ್ಕಳಿಂದ ಏನನ್ನು ಬಯಸ ಲಾರಳು. ತಾಯಿ ಬಗ್ಗೆ ನಮಗಿರುವ ಪ್ರೀತಿಯನ್ನು ವ್ಯಕ್ತಪಡಿಸಲು ಈ ದಿನ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ, ಡಿಪಿ, ಸ್ಟೇಟ ಸ್‌ಗೆ ಸೀಮಿತಗೊಳಿಸುವ ಸಣ್ಣಮನಸ್ಸು ನಮ್ಮದಾ ಗದಿರಲಿ. ಆಕೆಯೊಂದಿಗೆ ಬದುಕಿನುದ್ದಕ್ಕೂ ಖುಷಿ- ಖುಷಿ ಯಾಗಿರುತ್ತೇವೆ ಎನ್ನುವ ಸಂಕಲ್ಪ ಮಾಡುವ ದಿನ ಇದಾಗಿರಲಿ. ಬಹುತೇಕರು ಅಮ್ಮನಿಗೆ ಉಡುಗೊರೆ ನೀಡುತ್ತಾರೆ. ಆದರೆ ತಾವೇ ಅಮ್ಮನಿಗೆ ಬೆಲೆ ಕಟ್ಟಲಾಗದ ಉಡುಗೊರೆ ಎಂಬುದನ್ನು ಮರೆತು ಬಿಡುತ್ತಾರೆ. ಸಿಕ್ಕ ಒಂದಿಷ್ಟು ಸಮಯವನ್ನು ಮೀಸಲಿಟ್ಟರೇ ಅದ ಕ್ಕಿಂತ ಖುಷಿ ಅಮ್ಮನಿಗೆ ಮಗದೊಂದಿಲ್ಲ. ಭೂಮಿ ಮೇಲಿನ ನಿಷ್ಕ ಲ್ಮಶ ಪ್ರೀತಿ ಹಂಚುವ ಸಹೃದಯಕ್ಕೆ ಜತೆಗಾರರಾಗೋಣ. ಅವರ ಸುಖ- ದುಃಖ ಆಲಿಸುವ ಮಗುವಿನ ಹೃದಯ ನಮ್ಮದಾಗಲಿ. ಆ ಮೂಲಕ ಅಮ್ಮನ ಬಾಳಲಿ ಅನುದಿನವೂ ಖುಷಿ ತುಂಬಿರಲಿ.
– ರಾಧಿಕಾ, ಕುಂದಾಪುರ