Advertisement

ಪತ್ರಿಕಾ ವಿತರಕರೂ “ಇ-ಶ್ರಮ್‌’ವ್ಯಾಪ್ತಿಗೆ: ಸಚಿವ ಹೆಬ್ಬಾರ್‌ ಭರವಸೆ

10:36 PM Sep 04, 2021 | Team Udayavani |

ಬೆಂಗಳೂರು: ಯಾವುದೇ ಪರಿಸ್ಥಿತಿಯಲ್ಲೂ ಕಾರ್ಯನಿರ್ವಹಿಸುತ್ತಿರುವ ಪತ್ರಿಕಾ ವಿತರಕರ ಬದುಕು ಅಭದ್ರತೆಯಿಂದ ಕೂಡಿದ್ದು, ಅವರನ್ನು ಕೇಂದ್ರ ಸರಕಾರ ಪರಿಚಯಿಸಿರುವ “ಇ-ಶ್ರಮ’ ಪೋರ್ಟಲ್‌ ವ್ಯಾಪ್ತಿಗೆ  ಸೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಟಾರ್‌ ಹೇಳಿದ್ದಾರೆ.

Advertisement

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶನಿವಾರ ಹಮ್ಮಿಕೊಂಡಿದ್ದ ವಿಶ್ವಪತ್ರಿಕಾ ವಿತರಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ  ಮಾತನಾಡಿದ ಅವರು, ನಮ್ಮನ್ನೂ ಅಸಂಘಟಿತ ವಲಯ ಎಂದು ಪರಿಗಣಿಸಬೇಕು, ಕಟ್ಟಡ ಕಾರ್ಮಿಕರಿಗೆ ಸಿಗುವ ಸವಲತ್ತು ಹಾಗೂ ವಿಮಾ ಸೌಲಭ್ಯವನ್ನು ನಮಗೂ ನೀಡಬೇಕು ಎಂದು ಪತ್ರಿಕಾ ವಿತರಕರ ಒಕ್ಕೂಟ ಬೇಡಿಕೆ ಸಲ್ಲಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಜತೆ ಸಮಾಲೋಚನೆ ನಡೆಸಲಾಗುವುದು ಎಂದರು.

ಕೀಳರಿಮೆ ಸಲ್ಲದು :

ಯಾವುದೇ ವೃತ್ತಿಯಲ್ಲಿ ಕೀಳರಿಮೆ ಸಲ್ಲದು.  ನಾನು ಕೂಡ ಶಾಸಕ, ಸಚಿವನಾಗುವ ಮೊದಲು ಚಾಲಕನಾಗಿದ್ದವನು ಎಂದು ಈಗಲೂ ಹೆಮ್ಮೆಯಿಂದ  ಹೇಳುತ್ತಿದ್ದೇನೆ ಎಂದು ಹೇಳಿದರು.

ಸಾಮಾಜಿಕ ಭದ್ರತೆ ನೀಡುವ ಕೆಲಸ:

Advertisement

ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ ನಾರಾಯಣ ಅವರು ಮಾತನಾಡಿ, ಮನೆ ಮನೆಗೂ ಪತ್ರಿಕೆ ವಿತರಿಸುವವರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸರಕಾರ ಕಾರ್ಯ ನಿರ್ವಹಿಸಲಿದೆ ಎಂದರು.   ಹಿರಿಯ ಪತ್ರಿಕಾ ವಿತರಕರು ಮತ್ತು ಪತ್ರಿಕೆ ಹಂಚುವವರನ್ನು ಸಮ್ಮಾನಿಸಲಾಯಿತು.

ವಸತಿ ಸಚಿವ ವಿ. ಸೋಮಣ್ಣ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಹಿರಿಯ ಪತ್ರಕರ್ತರಾದ ವಿಶ್ವೇಶ್ವರ ಭಟ್‌,  ಬಿ. ವಿ. ಮಲ್ಲಿಕಾರ್ಜುನಯ್ಯ, ವಾರ್ತಾ ಇಲಾಖೆ ಆಯುಕ್ತ ಡಾ| ಪಿ.ಎಸ್‌. ಹರ್ಷ, ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಮುಂತಾದವರು ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next