Advertisement
ಡಬ್ಲ್ಯೂಎಚ್‌ಒ ನಡೆಸಿರುವ ಗ್ಲೋಬಲ್ ಅಡಲ್ಟ್ ತಂಬಾಕು ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಸುಮಾರು 3 ಕೋಟಿ ಜನ ತಂಬಾಕು ಉತ್ಪನ್ನಗಳನ್ನು ಬಳಸುತ್ತಿದ್ದಾರೆ. ಕರ್ನಾಟಕದ ಜನಸಂಖ್ಯೆಯಲ್ಲಿ ಅರ್ಧಕ್ಕರ್ಧ ಮಂದಿ ಈ ಉತ್ಪನ್ನಗಳನ್ನು ಬಳಸುತ್ತಿರುವುದು ಕಂಡು ಬಂದಿದೆ. ಈ ಪೈಕಿ ಶೇ.8.8ರಷ್ಟು ಧೂಮಪಾನಿಗಳು, ಶೇ.16.3ರಷ್ಟು ಧೂಮ ಪಾನ ರಹಿತ ತಂಬಾಕು ಬಳಕೆದಾರರು ಇದ್ದಾರೆ. ಇವರಲ್ಲಿ ಯುವಕರೇ ಹೆಚ್ಚು ವ್ಯಸನಿಗಳಾಗಿದ್ದಾರೆ. ತಂಬಾಕು ಮತ್ತು ಅದರ ಉತ್ಪನ್ನಗಳಿಂದಾಗುವ ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ವಿಶ್ವ ಆರೋಗ್ಯ ಸಂಸ್ಥೆಯು ಪ್ರತಿ ವರ್ಷ ಒಂದೊಂದು ಘೋಷವಾಕ್ಯದೊಂದಿಗೆ ಮೇ 31ರಂದು “ವಿಶ್ವ ತಂಬಾಕು ರಹಿತ ದಿನ’ವನ್ನು ಆಚರಿಸಲಾಗುತ್ತದೆ. ಅದೇ ರೀತಿ ಈ ವರ್ಷ “ನಮಗೆ ಆಹಾರ ಬೇಕು, ತಂಬಾಕು ಅಲ್ಲ’ ಎಂಬ ಘೋಷವಾಕ್ಯದೊಂದಿಗೆ ಹಾಗೂ ತಂಬಾಕು ರೈತರಿಗೆ ಪರ್ಯಾಯ ಬೆಳೆ ಉತ್ಪಾದನೆ ಮತ್ತು ಮಾರುಕಟ್ಟೆ ಅವಕಾಶಗಳ ಬಗ್ಗೆ ಅರಿವು ಮೂಡಿಸಲು ಮತ್ತು ಸಮರ್ಥನೀಯ, ಪೌಷ್ಟಿಕ ಬೆಳೆಗಳನ್ನು ಬೆಳೆಯಲು ಪೋ›ತ್ಸಾಹಿಸುವ ಗುರಿಯೊಂದಿಗೆ ಆಚರಿಸಲಾಗುತ್ತಿದೆ.
Related Articles
Advertisement
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ಕೈಗೊಂಡಿರುವ ಕ್ರಮಗಳು:
ಸಾರ್ವಜನಿಕರಿಂದ ಸಿಒಟಿಪಿಎ ಉಲ್ಲಂಘನೆಗಳನ್ನು ನೋಂದಾಯಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು “ಸ್ಟಾಪ್ಟೊಬ್ಯಾಕೊ’ ಎಂಬ ಆ್ಯಂಡ್ರಾಯಿಡ್ ಮೊಬೈಲ್ ಅಪ್ಲಿಕೇಶನ್ ಪರಿಚಯಿಸಿದೆ.
ನಗರಾಭಿವೃದ್ಧಿ ಇಲಾಖೆಯು 2022ರಲ್ಲಿ ತಂಬಾಕು ಮಾರಾಟಗಾರರ ಪರವಾನಗಿ ಕುರಿತು ಹೊರಡಿಸಿರುವ ಅಧಿಸೂಚನೆ ಪ್ರಕಾರ, ತಂಬಾಕು ಉತ್ಪನ್ನಗಳನ್ನು ಮಾರಾಟಕ್ಕೆ ಪ್ರತ್ಯೇಕ ಪರವಾನಗಿ ಕಡ್ಡಾಯವಾಗಿದೆ.
ಕರ್ನಾಟಕದಲ್ಲಿ 30ಕ್ಕೂ ಹೆಚ್ಚು ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮ ಎಂದು ಘೋಷಣೆ.
ಅಪ್ರಾಪ್ತ ವಯಸ್ಕರನ್ನು ತಂಬಾಕು ಹಾವಳಿಯಿಂದ ರಕ್ಷಿಸಲು “ತಂಬಾಕು ಮುಕ್ತ ಉತ್ಪಾದನೆ-2023′ ಎಂಬ ಹೊಸ ನೀತಿಯನ್ನು ಪರಿಚಯಿಸುವ ಪ್ರಕ್ರಿಯೆ ನಡೆಯುತ್ತಿದೆ.
ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆ(ಸಿಒಟಿಪಿಎ) 2003ರ ರಾಜ್ಯ ಮಟ್ಟದ ತಿದ್ದುಪಡಿಯು ಸರ್ಕಾರದ ಪರಿಶೀಲನೆಯಲ್ಲಿದೆ.
-ಭಾರತಿ ಸಜ್ಜನ್