Advertisement

ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್‌ ಕ್ಲಬ್‌: ವಿಶ್ವ ತಂಬಾಕು ರಹಿತ ದಿನಾಚರಣೆ

11:49 AM Jun 02, 2019 | sudhir |

ಬೆಳ್ಮಣ್‌: ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ ಸಂಘಟನೆ ಉಡುಪಿ, ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್‌ ಕ್ಲಬ್‌ ಇವುಗಳ ಸಹಯೋಗದಲ್ಲಿ ವಿಶ್ವ ತಂಬಾಕು ರಹಿತ ದಿನವನ್ನು ಶುಕ್ರವಾರ ಕಲ್ಯಾ ಸರಕಾರಿ ಫ್ರೌಢ ಶಾಲಾ ಸಭಾಭವನದಲ್ಲಿ ಆಚರಿಸಲಾಯಿತು.

Advertisement

ಸಂಪನ್ಮೂಲ ವ್ಯಕ್ತಿ, ಶಾಲಾ ವಿಜ್ಞಾನ ಶಿಕ್ಷಕಿ ಸತ್ಯವತಿ ಮಾತನಾಡಿ, ತಂಬಾಕು ಸೇವನೆಯಿಂದಾಗುವ ದುಷ್ಪರಿ ಣಾಮಗಳ ಬಗ್ಗೆ ಸಾಮಾನ್ಯ ಜನರಲ್ಲಿ ಅರಿವು ಮೂಡಿಸುವ ಮೂಲಕ ತಂಬಾಕು ರಹಿತ ಸಮಾಜ ಕಟ್ಟಲು ಸಾಧ್ಯ. ತಂಬಾಕಿನಿಂದ ಮಾರಕ ರೋಗಗಳಿಗೆ ತುತ್ತಾಗಿ ಲಕ್ಷಾಂತರ ಮಂದಿ ಸಾವನ್ನಪ್ಪುತ್ತಿದ್ದಾರೆ. ಚಿಕ್ಕ ಮಕ್ಕಳಲ್ಲಿ ಈ ಬಗ್ಗೆ ಅರಿವು ಮೂಡಿಸಿದರೆ ಭವಿಷ್ಯದಲ್ಲಿ ಅವರು ತಂಬಾಕು ಸೇವನೆಯಿಂದ ದೂರವಿರುವಂತೆ ಮಾಡಬಹುದು. ಈ ಬಗ್ಗೆ ಚಿತ್ರಮಂದಿರ, ಸಾಮಾಜಿಕ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದ್ದರೂ ನಿರೀಕ್ಷಿತ ಫಲಿತಾಂಶ ದೊರೆಯುತ್ತಿಲ್ಲ ಎಂದರು.

ಫ್ರೆಂಡ್ಸ್‌ ಕ್ಲಬ್‌ನ ನಿಕಟ ಪೂರ್ವಾಧ್ಯಕ್ಷ ಕಾಸ್ರಬೈಲು ಸುರೇಶ್‌ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಸುಧಾಕರ್‌ ಶೆಣೈ, ಕನ್ನಡ ಸಾಹಿತ್ಯ ಪರಿಷತ್ತ್ ಬೆಳ್ಮಣ್‌ ಹೋಬಳಿ ಘಟಕದ ಅಧ್ಯಕ್ಷ ಅಬ್ಬನಡ್ಕ ಸಂದೀಪ್‌ ವಿ. ಪೂಜಾರಿ, ಸಂಘದ ಕೋಶಾಧಿಕಾರಿ ಅಬ್ಬನಡ್ಕ ಹರಿಪ್ರಸಾದ್‌ ಆಚಾರ್ಯ, ಕಾರ್ಯದರ್ಶಿ ಪ್ರಶಾಂತ್‌ ಪೂಜಾರಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಸಾಕ್ಷ್ಯಚಿತ್ರ ಪ್ರದರ್ಶನದ ಜತೆಗೆ ಜಾಗೃತಿ ಜಾಥಾ ನಡೆಸಲಾಯಿತು.

ಶಾಲೆಯ ಮುಖ್ಯ ಶಿಕ್ಷಕಿ ಸುಮನಾ ಭಟ್ ಮಾತನಾಡಿ, ಮಹಿಳೆಯರು ಮಕ್ಕಳೆಂಬ ತಾರತಮ್ಯವಿಲ್ಲದೆ ಎಲ್ಲರೂ ತಂಬಾಕು ಸೇವನೆಗೆ ಬಲಿಯಾಗುತ್ತಿರುವುದು ಬೇಸರದ ಸಂಗತಿ. ತ‌ಂಬಾಕು ಸೇವನೆಯಿಂದ ಕ್ಯಾನ್ಸರ್‌ ಸೇರಿದಂತೆ ಹಲವಾರು ರೋಗಗಳು ಬರುತ್ತವೆ. ಈ ಬಗ್ಗೆ ಅರಿವು ಮೂಡಿಸಿದಾಗ ಮಾತ್ರ ತಂಬಾಕು ಸೇವನೆ ವ್ಯಸನವನ್ನು ದೂರವಾಗಿಸಬಹುದು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next