Advertisement

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

05:07 PM Nov 25, 2024 | Team Udayavani |

ಪರ್ತ್:‌ ಆಸ್ಟ್ರೇಲಿಯಾ ವಿರುದ್ದ ಟೆಸ್ಟ್‌ ಸರಣಿಯ ಮೊದಲ ಪಂದ್ಯವನ್ನು ಟೀಂ ಇಂಡಿಯಾ ಭರ್ಜರಿಯಾಗಿ ಗೆದ್ದುಕೊಂಡಿದೆ. ಈ ಮೂಲಕ ಬಾರ್ಡರ್‌ ಗಾವಸ್ಕರ್‌ ಟ್ರೋಫಿ ಸರಣಿಯಲ್ಲಿ ಶುಭಾರಂಭ ಮಾಡಿದೆ.

Advertisement

ಇದಕ್ಕೂ ಮೊದಲು ಭಾರತದಲ್ಲಿ ನಡೆದಿದ್ದ ನ್ಯೂಜಿಲ್ಯಾಂಡ್‌ ವಿರುದ್ದದ ಸರಣಿಯಲ್ಲಿ ಭಾರತ ವೈಟ್‌ ವಾಶ್‌ ಅವಮಾನಕ್ಕೆ ಸಿಲುಕಿತ್ತು. ಹೀಗಾಗಿ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ (World Test Championship) ಫೈನಲ್‌ ಪ್ರವೇಶಿಸುವ ಭಾರತದ ಓಟಕ್ಕೆ ಅಡ್ಡಿಯಾಗಿತ್ತು. ಬಾರ್ಡರ್‌ ಗಾವಸ್ಕರ್‌ ಟ್ರೋಫಿ ಸರಣಿ ಗೆದ್ದರೆ ಮಾತ್ರ ಅವಕಾಶ ಎಂಬ ಪರಿಸ್ಥಿತಿ ಉಂಟಾಗಿತ್ತು.

ಇದೀಗ ಪರ್ತ್‌ ಗೆಲುವಿನೊಂದಿಗೆ ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ (WTC Points Table) ಭಾರತ ಮುನ್ನಡೆ ಸಾಧಿಸಿದೆ. ಸದ್ಯ 61.11 ಅಂಕ ಹೊಂದಿರುವ ಭಾರತ ಮತ್ತೆ ಮೊದಲ ಸ್ಥಾನಕ್ಕೇರಿದೆ. ಮೊದಲ ಸ್ಥಾನದಲ್ಲಿದ್ದ ಆಸ್ಟ್ರೇಲಿಯಾ 57.69 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.

ಶ್ರೀಲಂಕಾ 55.56 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ನ್ಯೂಜಿಲ್ಯಾಂಡ್ ತಂಡವು 54.55 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದು, ದಕ್ಷಿಣ ಆಫ್ರಿಕಾ ಪ್ರಸ್ತುತ 54.17 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ.

Advertisement

ಪರ್ತ್‌ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡವು 295 ರನ್‌ ಅಂತರದಿಂದ ಗೆಲುವು ಸಾಧಿಸಿದೆ. ಭಾರತ ನೀಡಿದ್ದ 534 ರನ್‌ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾವು 238 ರನ್‌ ಗೆ ಆಲೌಟಾಯಿತು.

Advertisement

Udayavani is now on Telegram. Click here to join our channel and stay updated with the latest news.

Next