Advertisement

ವಿಶ್ವ ತಂಬಾಕು ರಹಿತ ದಿನಾಚರಣೆ: ಜನ ಜಾಗೃತಿ ರಥಕ್ಕೆ ಚಾಲನೆ

02:09 PM Jun 03, 2020 | Suhan S |

ಬಾಗಲಕೋಟೆ :  ವಿಶ್ವ ತಂಬಾಕು ರಹಿತ ದಿನಾಚರಣೆ ನಿಮಿತ್ತ ಬಾಗಲಕೋಟೆ ಜಿಲ್ಲೆಯಲ್ಲಿ ಯುವ ಪೀಳಿಗೆಯನ್ನು ತಂಬಾಕು ಉದ್ಯಮಿಗಳ ಕುತಂತ್ರ ಹಾಗೂ ತಂಬಾಕು ಮತ್ತು ನಿಕೋಟಿನ್‌ ಬಳಕೆಯಿಂದ ರಕ್ಷಣೆ ಮಾಡುವ ಘೋಷ ವಾಕ್ಯವುಳ್ಳ ಜನ ಜಾಗೃತಿ ರಥಕ್ಕೆ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ಅರವಿಂದ ಪಟ್ಟಣಶೆಟ್ಟಿ ಚಾಲನೆ ನೀಡಿದರು.

Advertisement

ಮಂಗಳವಾರ ನಗರದ 50 ಹಾಸಿಗೆಗಳ ಆಸ್ಪತ್ರೆಯ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಈ ಜಾಗೃತಿ ರಥ ಸತತ ಮೂರು ದಿನಗಳವರೆಗೆ ನಾನಾ ಕಡೆ ಸಂಚರಿಸಿ ತಂಬಾಕು ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಿದೆ. ಈ ವರ್ಷ ಕೋವಿಡ್‌-19 ಭೀತಿ ಹಿನ್ನೆಲೆಯಲ್ಲಿ ಲಾಕ್‌ ಡೌನ್‌ ಇರುವುದರಿಂದ ಕಾರ್ಯಕ್ರಮವನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ವಿಜಯ ಕಂಠಿ, ಜಿಲ್ಲಾ ತಂಬಾಕು ಸಲಹೆಗಾರ ಶಶಿಕಾಂತ ಕುಮಠಳ್ಳಿ, ಹಿರಿಯ ಆರೋಗ್ಯ ಮೇಲ್ವಿಚಾರಕ ಸಿ.ಬಿ. ಸೊಲ್ಲಾಪುರ, ಶಿವಲಿಂಗ ಕರಗಣ್ಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next