ಕೆ.ಆರ್.ಪೇಟೆ: ರಾಜ್ಯದಲ್ಲಿಯೇ ನಮ್ಮ ಜಿಲ್ಲೆ ಹೆಚ್ಚು ಪ್ರವಾಸಿ ಕೇಂದ್ರ ಹೊಂದಿದೆ. ಆದರೂ ಜಿಲ್ಲೆಗೆ ಯಾವುದೇ ಪ್ರಯೋಜನವಾಗಿಲ್ಲ. ನಮ್ಮ ಜಿಲ್ಲೆ ಜನರಿಗೆ ಉದ್ಯೋಗವನ್ನು ಸೃಷ್ಟಿಸಲು ಶ್ರಮಿಸುತ್ತೇವೆ ಎಂದು ಸಚಿವ ನಾರಾಯಣಗೌಡ ಹೇಳಿದರು.
ಪಟ್ಟಣದ ಹೊಸಹೊಳಲು ಗ್ರಾಮದಲ್ಲಿ ಪ್ರವಾಸೋದ್ಯಮ ಇಲಾಖೆ ಮತ್ತು ರಾಜ್ಯ ಪುರಾತತ್ವ ಇಲಾಖೆಯಿಂದ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಮಾತನಾಡಿ, ಪ್ರವಾಸೋದ್ಯಮ ಇಲಾಖೆ ನಮ್ಮ ತಾಲೂಕಿನ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿರಲಿಲ್ಲ. ಆದ್ದರಿಂದ ಇಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಇತಿಹಾಸ ಪ್ರಸಿದ್ಧ ಹೊಸಹೊಳಲು ಗ್ರಾಮದಲ್ಲಿ ನಡೆಸಲಾಗುತ್ತಿದೆ. ಹೊಯ್ಸಳ ಸಂಸ್ಥಾನದ ಆಳ್ವಿಕೆಗೆ ಒಳಪಟ್ಟಿದ್ದ ನಮ್ಮ ತಾಲೂಕು ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಪರಂಪರೆಯ ತವರೂರು. ಆದರೂ, ಜಿಲ್ಲಾಡಳಿತಅಥವಾ ಪ್ರವಾಸೋದ್ಯಮ ಇಲಾಖೆ ಅಭಿವೃದ್ಧಿಗೆ ಗಮನ ನೀಡಿಲ್ಲ. ನಾವು ಜನಪ್ರತಿನಿಧಿಗಳು ಯೋಚಿಸಬೇಕು. ನಮ್ಮ ಕರ್ತವ್ಯದ ಬಗ್ಗೆ ಆಲೋಚನೆ ಮಾಡಬೇಕು ಎಂದು ಹೇಳಿದರು.
ಸ್ವಯಂ ಉದ್ಯೋಗಕ್ಕೆ ಯೋಜನೆ: ತಾಲೂಕಿನ ಮೈಸೂರು ರಸ್ತೆಯಲ್ಲಿರುವ ಕೈಗಾರಿಕಾ ಅಭಿವೃದ್ಧಿ ನಿಗಮದ 100 ಎಕರೆ ಜಾಗ ಕೇಳಿದ್ದೇವೆ. ಅಲ್ಲಿ ನಿರುದ್ಯೋಗಿ ಯುವಕರಿಗೆ ಹೆಚ್ಚಿನ ಜಾಗ ನೀಡಿ, ಜಿಲ್ಲೆ, ತಾಲೂಕಿನ ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಯೋಜನೆ ರೂಪಿಸಿದ್ದೇವೆ. ಕೆ.ಆರ್.ಪೇಟೆ ಅಭಿವೃದ್ಧಿಗೆ ಈಗಾಗಲೇ 9.5 ಕೋಟಿ ರೂ., ಬಿಡುಗಡೆ ಮಾಡಿಸಲಾಗಿದೆ ಎಂದರು.
ಪ್ರವಾಸೋದ್ಯಮಕ್ಕೆ ಹೊಸ ದಿಕ್ಸೂಚಿ: ಮಂಡ್ಯ ಜಿಲ್ಲಾಧಿಕಾರಿ ವೆಂಕಟೇಶ್ ಮಾತನಾಡಿ, ಜಿಲ್ಲೆಯಲ್ಲಿ ಗಗನಚುಕ್ಕಿ, ಭರಚುಕ್ಕಿ, ಹೊಸಹೊಳಲು ಲಕ್ಷ್ಮೀ ನಾರಾಯಣ ದೇಗುಲ, ಕಿಕ್ಕೇರಿಯ ಗೋವಿಂದ ನಹಳ್ಳಿ ಪಂಚಲಿಂಗ ದೇಗುಲ, ಶ್ರೀರಂಗಪಟ್ಟಣದ ದೇವಾಲಯ ಮತ್ತು ಪ್ರಕೃತಿ ಸೌಂದರ್ಯದ ಸ್ಥಳಗಳು, ರಂಗನತಿಟ್ಟು ಪಕ್ಷಿಧಾಮ ಸೇರಿದಂತೆ ಹಲವು ಪ್ರವಾಸಿ ತಾಣಗಳಿವೆ. ಇವು ರಾಜ್ಯದ ಆರ್ಥಿಕ ಭದ್ರತೆಗೆ ತನ ° ಕೊಡುಗೆ ನೀಡಬಲ್ಲದು. ಈ ಬಾರಿ ವಿಶ್ವಸಂಸ್ಥೆಯು ಪ್ರವಾಸೋದ್ಯಮಕ್ಕೆ ಹೊಸ ದಿಕ್ಸೂಚಿಯನ್ನು ನೀಡಿದೆ. ಪ್ರವಾಸೋದ್ಯಮ ಮತ್ತು ಗ್ರಾಮೀಣಾಭಿವೃದ್ಧಿ ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯಕ್ರಮ ರೂಪಿಸಿದ್ದು, ಇದರಿಂದಆರ್ಥಿಕಪುನಶ್ಚೇತನಕ್ಕೆದಾರಿಯಾಗುತ್ತದೆ ಎಂದು ಹೇಳಿದರು.
ಮೂಡಾ ಅಧ್ಯಕ್ಷಕೆ.ಶ್ರೀನಿವಾಸ್, ಜಿಪಂ ಸಿಇಒ ಎಸ್.ಎಂ.ಜುಲ್ಫಿàಕರ್ ಉಲ್ಲಾ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಎಂ.ಎನ್. ಹರೀಶ್, ಜಿಪಂ ಮಾಜಿ ಸದಸ್ಯ ಅಂಬರೀಷ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ನಾಗಣ್ಣಗೌಡ, ತಾಲೂಕುಬಿಜೆಪಿಅಧ್ಯಕ್ಷಪರಮೇಶ್‌ಅರವಿಂದ್, ತಹಶೀಲ್ದಾರ್ ಶಿವಮೂರ್ತಿ, ಪುರಸಭಾ ಸದಸ್ಯರಾದ ಎಚ್.ಆರ್.ಲೋಕೇಶ್, ಶುಭಾ ಗಿರೀಶ್, ದಿನೇಶ್ ಹಾಜರಿದ್ದರು.