Advertisement
ಪಾವಗಡ ತಾಲೂಕಿನ ತಿರುಮಣಿಯಲ್ಲಿ ಗುರುವಾರ 600 ಮೆ.ವ್ಯಾ. ಸೋಲಾರ್ ವಿದ್ಯುತ್ ಪಾರ್ಕ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು. ತಿರುಮಣಿ ಸುತ್ತಮುತ್ತ 13 ಸಾವಿರ ಎಕರೆ ಪ್ರದೇಶದಲ್ಲಿ ಸೋಲಾರ್ ವಿದ್ಯುತ್ ಘಟಕ ವ್ಯಾಪಿಸಿದೆ. ಇದುಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಸೋಲಾರ್ ಪಾರ್ಕ್ ಎಂದು ಹೇಳಿದರು.
ಭಾಗದಲ್ಲಿ ಆರ್ಥಿಕ, ಸಾಮಾಜಿಕ ಬದಲಾವಣೆಗಳು ಉಂಟಾಗಿ ಜನರ ಜೀವನ ಮಟ್ಟ ಸುಧಾರಿಸಲಿದೆ ಎಂದು ಹೇಳಿದರು. ಈ ವೇಳೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ, ವಿದ್ಯುತ್ ಉತ್ಪಾದನೆಯಲ್ಲಿ ರಾಜ್ಯ ದೇಶದಲ್ಲಿಯೇ 4ನೇ ಅತಿದೊಡ್ಡ ರಾಜ್ಯವಾಗಿದ್ದು, ಸೋಲಾರ್ ವಿದ್ಯುತ್ ಉತ್ಪಾದನೆಯಲ್ಲಿ ಇಡೀ ವಿಶ್ವದಲ್ಲಿಯೇ ನಂ.1 ಸ್ಥಾನದಲ್ಲಿರುವುದರಿಂದ ಇನ್ನು ಮುಂದೆ ರಾಜ್ಯದ ಜನರಿಗೆ ಯಾವುದೇ ರೀತಿಯ ಲೋಡ್‌ಶೆಡ್ಡಿಂಗ್ ಸಮಸ್ಯೆ ಇರುವುದಿಲ್ಲ ಎಂದು ತಿಳಿಸಿದರು. ಪಾವಗಡ ತಾಲೂಕಿನಲ್ಲಿ
ಉತ್ಪಾದನೆಯಾಗುವ ಸೌರ ವಿದ್ಯುತ್‌ನ್ನು ಇಲ್ಲಿಯ ರೈತರಿಗೆ ಮೊದಲ ಆದ್ಯತೆ ನೀಡಿ ಅವರ ಕೃಷಿ ಕಾರ್ಯಗಳಿಗೆ ನೀಡಲಾಗುವುದು ಎಂದರು.