ಮುಂಬಯಿ : ಕ್ರಿಕೆಟ್ ದೇವರು ಎಂದು ಕರೆಯಲ್ಪಡುವ ಸಚಿನ್ ತೆಂಡೂಲ್ಕರ್ ಅವರು ವಿಶ್ವದ 12 ನೇ ‘ಅತ್ಯಂತ ಮೆಚ್ಚುಗೆ ಪಡೆದ ವ್ಯಕ್ತಿ’ ಎಂದು ಗುರುತಿಸಲ್ಪಟ್ಟಿದ್ದಾರೆ ಎಂದು ಯೂಗೋವ್ ನಡೆಸಿದ ಸಮೀಕ್ಷೆಯಲ್ಲಿ ತಿಳಿದು ಬಂದಿದೆ.
ಇಂಟರ್ನೆಟ್ ಆಧಾರಿತ ಮಾರುಕಟ್ಟೆ ಸಂಶೋಧನೆ ಮತ್ತು ಡೇಟಾ ಅನಾಲಿಟಿಕ್ಸ್ ಸಂಸ್ಥೆ ಯೂಗೋವ್, ಈ ವರ್ಷದ ಅಧ್ಯಯನ ಮಾಡಲು 38 ದೇಶಗಳು ಮತ್ತು ಪ್ರಾಂತ್ಯಗಳಲ್ಲಿ 42,000 ಕ್ಕಿಂತ ಹೆಚ್ಚು ಜನರನ್ನು ಸಮೀಕ್ಷೆಗೋಳ ಪಡಿಸಿತ್ತು.
ಕ್ರೀಡಾ ಹೀರೋಗಳಲ್ಲಿ, ಲಿಯೋನೆಲ್ ಮೆಸ್ಸಿ ಮತ್ತು ಕ್ರಿಸ್ಟಿಯಾನೋ ರೊನಾಲ್ಡೊ ನಂತರ ಸಚಿನ್ ಮೂರನೇ ಸ್ಥಾನದಲ್ಲಿದ್ದಾರೆ.
ಈ ಪಟ್ಟಿಯಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಬಾಲಿವುಡ್ ಸೂಪರ್‌ಸ್ಟಾರ್‌ಗಳಾದ ಶಾರುಖ್ ಖಾನ್, ಅಮಿತಾಬ್ ಬಚ್ಚನ್ ಮತ್ತು ವಿರಾಟ್ ಕೊಹ್ಲಿ ಅವರಿಗಿಂತ ತೆಂಡೂಲ್ಕರ್ ಮುಂದಿದ್ದಾರೆ.
ಯುನಿಸೆಫ್‌ನೊಂದಿಗೆ ತೆಂಡೂಲ್ಕರ್ ಅವರು ಒಂದು ದಶಕಕ್ಕೂ ಹೆಚ್ಚು ಕಾಲ ಸಂಬಂಧ ಹೊಂದಿದ್ದು, ಮತ್ತು 2013 ರಲ್ಲಿ ದಕ್ಷಿಣ ಏಷ್ಯಾದ ರಾಯಭಾರಿಯಾಗಿ ನೇಮಕಗೊಂಡಿದ್ದರು.
ಸಚಿನ್ ಅವರು ಭಾರತದ ವಿವಿಧ ರಾಜ್ಯಗಳಾದ್ಯಂತ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರೋಗ್ಯ, ಶಿಕ್ಷಣ ಮತ್ತು ಕ್ರೀಡಾ ವಲಯದಲ್ಲಿ ಹಲವಾರು ಉಪಕ್ರಮಗಳನ್ನು ಬೆಂಬಲಿಸಿದ್ದರು.