Advertisement

ಸಾವಿನಲ್ಲೂ ಸಾರ್ಥಕ್ಯ ; ಪಾಂಗಾಳ ಗೋಪಾಲಕೃಷ್ಣ ನಾಯಕ್‌ ಮಣಿಪಾಲ ಕೆಎಂಸಿಗೆ ದೇಹದಾನ

11:16 PM Jan 20, 2024 | Team Udayavani |

ಕಟಪಾಡಿ: ಕಟಪಾಡಿ ನಾಯಕ್‌ ಮನೆತನದ ಪಾಂಗಾಳ ಗೋಪಾಲಕೃಷ್ಣ ನಾಯಕ್‌ ಸಾವಿನಲ್ಲೂ ಸಾರ್ಥಕ್ಯ ಮೆರೆದಿದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ದೇಹದಾನ ಮಾಡಿದ್ದಾರೆ.

Advertisement

ಭಾರತ ಸ್ವಾತಂತ್ರ್ಯ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದ ಕಟಪಾಡಿ ನಾಯಕ್‌ ಮನೆತನದ ಹಿರಿಯರಾದ, ಸ್ವಾತಂತ್ರ್ಯ ಹೋರಾಟಗಾರ ಪಾಂಗಾಳ ಲಕ್ಷ್ಮೀನಾರಾಯಣ ನಾಯಕ್‌ ಅವರ ಪುತ್ರ ಪಾಂಗಾಳ ಗೋಪಾಲಕೃಷ್ಣ ನಾಯಕ್‌ (92) ಶನಿವಾರ ಸ್ವಗೃಹದಲ್ಲಿ ನಿಧನ ಹೊಂದಿದರು.

ಕಟಪಾಡಿಯಲ್ಲಿ ಹೆಸರಾಂತ ನಾಯಕ್‌ ಆಯುರ್ವೇದಾಶ್ರಮ ಸಂಸ್ಥೆಯನ್ನು ನಡೆಸಿಕೊಂಡು ಬಂದಿದ್ದ ಅವರು ಅವಿವಾಹಿತರಾಗಿದ್ದು, ಗಾಂಧಿ ತಣ್ತೀದಡಿ ಸರಳ ಜೀವನ ನಡೆಸುತ್ತಿದ್ದವರು. ಸದಾ ಕಾಲ ಖಾದಿ ಬಟ್ಟೆ ಧರಿಸಿ, ದೇಸೀ ಆಹಾರ ಪದ್ಧತಿಯನ್ನು ಅನುಸರಿಸಿಕೊಂಡು ಬಂದವರು.

ಪ್ರಾಣಿ ಪಕ್ಷಿಗಳ ಬಗ್ಗೆ ಅತೀವ ಕಾಳಜಿ ಹೊಂದಿದ್ದರು. ಪರಿಸರ ಪ್ರೇಮಿಯಾಗಿ ಕಟಪಾಡಿ ಭಾಗದಲ್ಲಿ ಗಿಡಮರಗಳ ರಕ್ಷಣೆ ಮಾಡಿಕೊಂಡು ಬಂದವರು. ಆಯುರ್ವೆàದ, ಶಾಸ್ತ್ರೀಯ ಸಂಗೀತದ ಬಗ್ಗೆ ಕೂಡಾ ಹೆಚ್ಚಿನ ಒಲವು ಹೊಂದಿದ್ದರು. ತಂದೆಯ ಜತೆ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕೂಡ ಗುರುತಿಸಿಕೊಂಡಿದ್ದರು.
ಮೃತರು ಸಹೋದರ ಡಾ| ಪಾಂಗಾಳ ಸೀತಾರಾಮ ನಾಯಕ್‌, ಇಬ್ಬರು ಸಹೋದರಿಯರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ದೇಹದಾನ
ಗೋಪಾಲಕೃಷ್ಣ ನಾಯಕ್‌ ಅವರ ಇಚ್ಛೆಯಂತೆ ಪಾರ್ಥಿವ ಶರೀರವನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾನ ಮಾಡಲಾಯಿತು.

Advertisement

ಸಂತಾಪ
ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್‌. ಮೆಂಡನ್‌, ಕಟಪಾಡಿ ಎಸ್‌ವಿಎಸ್‌ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಂ.ಡಿ. ಕಿಣಿ, ಸಂಚಾಲಕ ಕೆ. ಸತ್ಯೇಂದ್ರ ಪೈ, ಮಣಿಪಾಲ ರಂಗ ಪೈ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೇಮ್‌ ಕುಮಾರ್‌, ಕಟಪಾಡಿ ಗ್ರಾ.ಪಂ. ಅಧ್ಯಕ್ಷೆ ಪ್ರಭಾ ಬಿ. ಶೆಟ್ಟಿ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next