Advertisement

WPL 2024: ಈ ಬಾರಿ ಬೆಂಗಳೂರು ಮತ್ತು ದೆಹಲಿಯಲ್ಲಿ ಕೂಟ; ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

11:29 AM Jan 23, 2024 | Team Udayavani |

ಮುಂಬೈ: ವನಿತಾ ಕ್ರಿಕೆಟಿಗರ ವರ್ಣರಂಜಿತ ಟಿ20 ಲೀಗ್ ಡಬ್ಲ್ಯೂಪಿಎಲ್ (WPL) ನ ಎರಡನೇ ಆವೃತ್ತಿಗೆ ಸಜ್ಜಾಗಿದೆ. ಈ ವರ್ಷದ ಕೂಟದ ವೇಳಾಪಟ್ಟಿಯು ಬಿಡುಗಡೆಯಾಗಿದ್ದು, ಫೆ.23ರಂದು ಬೆಂಗಳೂರಿನಲ್ಲಿ ಆರಂಭವಾಗಲಿದ್ದು ಮಾರ್ಚ್ 17ರಂದು ಹೊಸದಿಲ್ಲಿಯಲ್ಲಿ ಫೈನಲ್ ಪಂದ್ಯ ನಡೆಯಲಿದೆ.

Advertisement

ಕಳೆದ ವರ್ಷದ ಸಂಪೂರ್ಣ ಕೂಟವು ಮುಂಬೈನಲ್ಲಿ ನಡೆದಿದ್ದು, ಈ ಬಾರಿ ಬೆಂಗಳೂರು ಮತ್ತು ಹೊಸದಿಲ್ಲಿಯಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಕಳೆದ ವರ್ಷದ ಫೈನಲಿಸ್ಟ್ ಗಳಾದ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸೆಣಸಾಡಲಿದೆ.

ಈ ವರ್ಷ ಮಹಿಳಾ ಪ್ರೀಮಿಯರ್ ಲೀಗ್‌ ನಲ್ಲಿ ಒಟ್ಟು 22 ಪಂದ್ಯಗಳು ನಡೆಯಲಿವೆ. ಅಂತಿಮ ಪಂದ್ಯ ಮಾರ್ಚ್ 17 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಎಲ್ಲಾ ಪಂದ್ಯಗಳು ಸಂಜೆ 7:30ಕ್ಕೆ ಆರಂಭವಾಗಲಿವೆ. ಮಾರ್ಚ್ 15 ರಂದು ಎಲಿಮಿನೇಟರ್ ಪಂದ್ಯ ನಡೆಯಲಿದೆ.

ಡಬ್ಲ್ಯೂಪಿಎಲ್ ನ 2024 ರ ಋತುವು ಕಳೆದ ವರ್ಷದಂತೆ ಅದೇ ಸ್ವರೂಪದಲ್ಲಿ ನಡೆಯಲಿದೆ. ಲೀಗ್ ಹಂತದಲ್ಲಿ ಅಗ್ರ ಮೂರು ತಂಡಗಳು ಪ್ಲೇ ಆಫ್‌ ಗಳಿಗೆ ಅರ್ಹತೆ ಪಡೆಯುತ್ತವೆ. ಲೀಗ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಲಿದ್ದು, ಎರಡು ಮತ್ತು ಮೂರನೇ ಸ್ಥಾನ ಪಡೆಯುವ ತಂಡಗಳು ಮಾರ್ಚ್ 15 ರಂದು ಎಲಿಮಿನೇಟರ್‌ ನಲ್ಲಿ ಆಡಲಿವೆ.

WPL 2024: ಪೂರ್ಣ ವೇಳಾಪಟ್ಟಿ

Advertisement

ಫೆಬ್ರವರಿ 23- ಮುಂಬೈ ಇಂಡಿಯನ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್: ಬೆಂಗಳೂರು

ಫೆಬ್ರವರಿ 24- ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಯುಪಿ ವಾರಿಯರ್ಸ್: ಬೆಂಗಳೂರು

ಫೆಬ್ರವರಿ 25- ಗುಜರಾತ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್: ಬೆಂಗಳೂರು

ಫೆಬ್ರವರಿ 26 – ಯುಪಿ ವಾರಿಯರ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್: ಬೆಂಗಳೂರು

ಫೆಬ್ರವರಿ 27 – ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಜೈಂಟ್ಸ್: ಬೆಂಗಳೂರು

ಫೆಬ್ರವರಿ 28 – ಮುಂಬೈ ಇಂಡಿಯನ್ಸ್ ವಿರುದ್ಧ ಯುಪಿ ವಾರಿಯರ್ಸ್: ಬೆಂಗಳೂರು

ಫೆಬ್ರವರಿ 29 – ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್: ಬೆಂಗಳೂರು

ಮಾರ್ಚ್ 1 – ಯುಪಿ ವಾರಿಯರ್ಸ್ ವಿರುದ್ಧ ಗುಜರಾತ್ ಜೈಂಟ್ಸ್; ಬೆಂಗಳೂರು

ಮಾರ್ಚ್ 2 – ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮುಂಬೈ ಇಂಡಿಯನ್ಸ್: ಬೆಂಗಳೂರು

ಮಾರ್ಚ್ 3 – ಗುಜರಾತ್ ಜೈಂಟ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್: ಬೆಂಗಳೂರು

ಮಾರ್ಚ್ 4 – ಯುಪಿ ವಾರಿಯರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು: ಬೆಂಗಳೂರು

ಮಾರ್ಚ್ 5 – ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್: ದೆಹಲಿ

ಮಾರ್ಚ್ 6 – ಗುಜರಾತ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು: ದೆಹಲಿ

ಮಾರ್ಚ್ 7 – ಯುಪಿ ವಾರಿಯರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್: ದೆಹಲಿ

ಮಾರ್ಚ್ 8 – ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಯುಪಿ ವಾರಿಯರ್ಸ್: ದೆಹಲಿ

ಮಾರ್ಚ್ 9 – ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಜೈಂಟ್ಸ್: ದೆಹಲಿ

ಮಾರ್ಚ್ 10 – ದೆಹಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು: ದೆಹಲಿ

ಮಾರ್ಚ್ 11 – ಗುಜರಾತ್ ಜೈಂಟ್ಸ್ ವಿರುದ್ಧ ಯುಪಿ ವಾರಿಯರ್ಸ್: ದೆಹಲಿ

ಮಾರ್ಚ್ 12 – ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು; ದೆಹಲಿ

ಮಾರ್ಚ್ 13 – ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಜೈಂಟ್ಸ್: ದೆಹಲಿ

ಮಾರ್ಚ್ 15 – ಎಲಿಮಿನೇಟರ್: ದೆಹಲಿ

ಮಾರ್ಚ್ 17 – ಫೈನಲ್: ದೆಹಲಿ

Advertisement

Udayavani is now on Telegram. Click here to join our channel and stay updated with the latest news.

Next