Advertisement

ಟೋಕಿಯೊ: ಸೆಮಿ ಫೈನಲ್ ನಲ್ಲಿ ಎಡವಿದ ಕುಸ್ತಿಪಟು ಭಜರಂಗ್ ಪೂನಿಯಾ

03:15 PM Aug 06, 2021 | Team Udayavani |

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತದ ತಾರಾ ಕುಸ್ತಿಪಟು ಭಜರಂಗ್ ಪೂನಿಯಾ ಅವರು 65 ಕೆಜಿ ಫ್ರೀಸ್ಟೈಲ್ ವಿಭಾಗದ ಸೆಮಿ ಫೈನಲ್ ಪಂದ್ಯದಲ್ಲಿ ಸೋಲನುಭವಿಸಿದ್ದಾರೆ.

Advertisement

ಅಜರ್‌ಬೈಜಾನಿಯಾದ ಹಾಜಿ ಆಲಿಯಾವ್‌ ವಿರುದ್ಧ ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಭಜರಂಗ್ ಪೂನಿಯಾ 5-12 ಅಂಕಗಳ ಅಂತರದಿಂದ ಸೋಲನುಭವಿಸಿದರು. ಆರಂಭದಿಂದಲೇ ಆಕ್ರಮಣಕಾರಿಯಾಗಿ ಆಡಿದ ಹಾಜಿ ಆಲಿಯಾವ್‌ ಸತತ ಅಂಕಗಳನ್ನು ಗಳಿಸುತ್ತಾ ಪಂದ್ಯದಲ್ಲಿ ಹಿಡಿತ ಸಾಧಿಸಿದರು.

ಇದನ್ನೂ ಓದಿ:ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರಿನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ

ಇಂದು ಬೆಳಗ್ಗೆ ನಡೆದಿದ್ದ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಇರಾನಿನ ಮೊರ್ತೆಜಾ ಘಿಯಾಸಿ ಚೆಕಾ ವಿರುದ್ಧ ಭಜರಂಗ್ ಪೂನಿಯಾ ಗೆಲುವು ಸಾಧಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next