ಹೊಸದಿಲ್ಲಿ: ಬಿಜೆಪಿ ಸಂಸದ ಮತ್ತು ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧ ಪ್ರತಿಭಟನೆ ಮಾಡುವ ಕುಸ್ತಿಪಟುಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಶನಿವಾರ ರಾತ್ರಿ ಅಮಿತ್ ಶಾ ನಿವಾಸದಲ್ಲಿ ಕುಸ್ತಿಪಟುಗಳು ಭೇಟಿಯಾಗಿದ್ದಾರೆ ಎಂದು ಖ್ಯಾತ ರಸ್ಲರ್ ಭಜರಂಗ್ ಪುನಿಯಾ ಹೇಳಿದ್ದಾರೆ.
ರಾತ್ರಿ 11 ಗಂಟೆಗೆ ಆರಂಭವಾದ ಸಭೆಯು ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು. ಇದರಲ್ಲಿ ಭಜರಂಗ್ ಪುನಿಯಾ, ಸಾಕ್ಷಿ ಮಲಿಕ್, ಸಂಗೀತಾ ಫೋಗಟ್ ಮತ್ತು ಸತ್ಯವರ್ತ್ ಕಡಿಯನ್ ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಶಾರದಾಂಬೆ ದೇಗುಲ: ತಿತ್ವಾಲ್ ತಲುಪಿದ ಶೃಂಗೇರಿ ಶ್ರೀಗಳು
ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಿಷ್ಪಕ್ಷಪಾತ ತನಿಖೆ ಮತ್ತು ತ್ವರಿತ ಕ್ರಮಕ್ಕೆ ಕುಸ್ತಿಪಟುಗಳು ಒತ್ತಾಯಿಸಿದ್ದಾರೆ.
ಕಾನೂನು ಎಲ್ಲರಿಗೂ ಒಂದೇ ಆಗಿರುತ್ತದೆ ಎಂದು ಅಮಿತ್ ಶಾ ಕುಸ್ತಿಪಟುಗಳಿಗೆ ಭರವಸೆ ನೀಡಿದರು. “ಕಾನೂನು ತನ್ನದೇ ಆದ ಕ್ರಮವನ್ನು ತೆಗೆದುಕೊಳ್ಳಲಿದೆ” ಎಂದು ಅವರು ಕುಸ್ತಿಪಟುಗಳಿಗೆ ಹೇಳಿದರು ಎಂದು ವರದಿಯಾಗಿದೆ.