Advertisement

Wrestlers Protest; ಮೇ 23 ರಂದು ಇಂಡಿಯಾ ಗೇಟ್‌ನಲ್ಲಿ ಕ್ಯಾಂಡಲ್ ಮಾರ್ಚ್

10:41 PM May 21, 2023 | Team Udayavani |

ಹೊಸದಿಲ್ಲಿ : ಮಹಿಳಾ ಗ್ರಾಪ್ಲರ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಕೋರಿ ದೆಹಲಿಯ ಜಂತರ್ ಮಂತರ್‌ನಲ್ಲಿ ಭಾರತದ ಅಗ್ರ ಕುಸ್ತಿಪಟುಗಳ ಪ್ರತಿಭಟನೆಗೆ ಒಂದು ತಿಂಗಳು ಪೂರ್ಣಗೊಳ್ಳಲಿರುವ ಮೇ 23 ರಂದು ಇಂಡಿಯಾ ಗೇಟ್‌ನಲ್ಲಿ ಕ್ಯಾಂಡಲ್ ಮಾರ್ಚ್ ನಡೆಸಲು ಸಮಿತಿಯು ನಿರ್ಧರಿಸಿದೆ.

Advertisement

ಮೇ 28 ರಂದು ಸಭೆ ನಡೆಸುತ್ತದೆ ಎಂದು ಕುಸ್ತಿಪಟುಗಳ ಪ್ರತಿಭಟನೆಯನ್ನು ಬೆಂಬಲಿಸಿ ಖಾಪ್ ಪಂಚಾಯತ್ ನಂತರ ರೈತ ನಾಯಕ ರಾಕೇಶ್ ಟಿಕಾಯತ್ ಮಹತ್ವದ ಸಭೆಯ ಬಳಿಕ ಹೇಳಿಕೆ ನೀಡಿದ್ದಾರೆ.

ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪೂನಿಯಾ, ಸಾಕ್ಷಿ ಮಲಿಕ್ ಮತ್ತು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ನೇತೃತ್ವದಲ್ಲಿ, ಕುಸ್ತಿ ಸಂಸ್ಥೆಯ ಮುಖ್ಯಸ್ಥರನ್ನು ಬಂಧಿಸಲು ಕುಸ್ತಿಪಟುಗಳು ಹೋರಾಟ ನಡೆಸುತ್ತಿದ್ದಾರೆ.

ಎ 23 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯನ್ನು ಪ್ರಾರಂಭಿಸಿದ ಕುಸ್ತಿಪಟುಗಳು ಆಂದೋಲನವನ್ನು ಮುಂದಕ್ಕೆ ಕೊಂಡೊಯ್ಯುವ ಬಗ್ಗೆ ನಿರ್ಧರಿಸಲು ಖಾಪ್ ಮಹಾಪಂಚಾಯತ್‌ಗೆ ಮೇ 21ರ ಗಡುವನ್ನು ನಿಗದಿಪಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next