Advertisement
ನಗರದ ಡಾ. ಅಂಬೇಡ್ಕರ್ ಭವನದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಶನಿವಾರ, ವಿಶ್ವ ರೈತ ನಾಯಕ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅವರ 85ನೇ ಜನ್ಮ ದಿನಾಚರಣೆಯ ಅಂಗವಾಗಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಮ್ಮಿಕೊಂಡಿದ್ದ ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ಜಾಗೃತಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸ್ವಾತಂತ್ರ್ಯ ಪೂರ್ವದಲ್ಲಿ ಭಾರತದಲ್ಲಿ ಒಂದು ಕಂಪನಿಯ ಸರ್ಕಾರದ ಆಳ್ವಿಕೆ ಇತ್ತು. ಇಂದು ಅಂಬಾನಿ, ಅದಾನಿ ಮತ್ತಿತರ ಹತ್ತಾರು ಕಂಪನಿ ಸರ್ಕಾರಗಳ ಆಳ್ವಿಕೆಯಿದೆ. ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ಲಕ್ಷಾಂತರ ಜನರು ಎರಡೂವರೆ ತಿಂಗಳುಗಳಿಂದ ದೆಹಲಿಯ ಗಡಿಯ ಸುತ್ತಲೂ ಜೀವ ಪಣಕ್ಕಿಟ್ಟು ಕುಳಿತಿದ್ದಾರೆ. ಧರಣಿ ಸ್ಥಳದಲ್ಲಿ ಹಲವು ರೈತರು ಮೃತಪಟ್ಟಿದ್ದಾರೆ. ಮೋದಿ-ಶಾ ಅವರು ಕಲ್ಲು ಹೃದಯದವರಾಗಿದ್ದಾರೆ ಎಂದರು.
Related Articles
Advertisement
ಮಂಡಿಯೂ ಇರುತ್ತದೆ, ಖಾಸಗಿಯವರಿಗೂ ಅವಕಾಶ ಇರುತ್ತದೆ ಎಂದು ಹೇಳುತ್ತಿದ್ದಾರೆ. ಖಾಸಗಿ ಶಾಲೆಗಳ ಎದುರು ಸರ್ಕಾರಿ ಶಾಲೆಗಳ ಸ್ಥಿತಿ ಏನಾಗಿದೆ ಎಂಬುದು ನಮ್ಮ ಕಣ್ಣೆದುರೇ ಇದೆ. ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಸಂಸ್ಥೆ, ಖಾಸಗಿ ಜಿಯೋ ಎದುರು ತೆವಳುತ್ತಿಲ್ಲವೇ? ಹಿಂದೆ ಕಾಫಿ ನಿಯಂತ್ರಿತ ಮಾರುಕಟ್ಟೆ ಇತ್ತು. ನಂತರ ಖಾಸಗಿ ಮಾರುಕಟ್ಟೆಗೆ ಅವಕಾಶ ಕೊಟ್ಟ ಕಾರಣಕ್ಕೆ ಈಗ ಕಾಫಿ ನಿಯಂತ್ರಿತ ಮಾರುಕಟ್ಟೆ ಹೆಸರಿಗಷ್ಟೇ ಇದೆ. ಖಾಸಗಿ, ದಲ್ಲಾಳಿಗಳು ಬಂಡವಾಳಶಾಹಿಗಳ ಹಿಡಿತಕ್ಕೆ ಕಾಫಿ ಬೆಳೆಗಾರ ಕಣ್ಣುಬಾಯಿ ಬಿಡುತ್ತಿದ್ದಾನೆ ಎಂದು ದೇವನೂರು ಮಹಾದೇವ ತಿಳಿಸಿದರು.
ಕೋವಿಡ್ ಹಾವಳಿಯಿಂದ ದೇಶವೇ ತತ್ತರಿಸಿರುವ ಕಾಲದಲ್ಲಿ ಕೇವಲ ನೂರು ಜನ ಶತಕೋಟ್ಯಧೀಶರು 12.5 ಲಕ್ಷ ಕೋಟಿ ಲಾಭ ಗಳಿಸಿದ್ದಾರೆ. ಬಂಡವಾಳಶಾಹಿಗಳು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ. ಇದು ಹೇಗೆ ಸಾಧ್ಯ? ಈರುಳ್ಳಿ ಇನ್ನಿತರ ಪದಾರ್ಥಗಳನ್ನು ಸಂಗ್ರಹಿಸಿಟ್ಟು ಕೃತಕ ಅಭಾವ ಸೃಷ್ಟಿಸಿ ಬೆಲೆ ಗಗನಕ್ಕೆ ಏರಿಸುವಂತೆ ಎಲ್ಲ ದವಸ ಧಾನ್ಯಗಳ ಬೆಲೆಯೂ ಏರಿಕೆಯಾಗಲಿದೆ. ಮಧ್ಯಮ ವರ್ಗ ಬಡವರಾದರೆ, ಈಗಿನ ಬಡವರು ಹಸಿವಿನ ದವಡೆಗೆ ಸಿಲುಕಲಿದ್ದಾರೆ. ಈ ನೂತನ ಕಾಯ್ದೆಯಿಂದ ರೈತರಿಗೆ ಮಾತ್ರವಲ್ಲ ಬಡ ಹಾಗೂ ಮಧ್ಯಮ ವರ್ಗದ ಎಲ್ಲರಿಗೂ ತೊಂದರೆಯಾಗುತ್ತಿದೆ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಮಹಾದೇವ ಹೇಳಿದರು.
ರೈತ ಮುಖಂಡ ಬಡಗಲಪುರ ನಾಗೇಂದ್ರ, ಚಿಂತಕ ಡಾ. ಮುಜಫರ್ ಅಸಾದಿ, ಡಾ. ಪ್ರಕಾಶ್ ಕಮ್ಮರಡಿ, ರೈತ ಸಂಘದ ವಿಭಾಗೀಯ ಕಾರ್ಯದರ್ಶಿ ಎ.ಎಂ. ಮಹೇಶಪ್ರಭು, ಎಚ್.ಸಿ. ಮಹೇಶ್‌ಕುಮಾರ್, ಹೆಬ್ಬಸೂರು ಬಸವಣ್ಣ, ಸಿದ್ಧರಾಜು ಮತ್ತಿತರರು ಉಪಸ್ಥಿತರಿದ್ದರು.
ಪ್ರೊ. ಎಂ.ಡಿ.ಎನ್. ಇದ್ದರೆ ಅವರೂ ದೇಶದ್ರೋಹಿಯಾಗುತ್ತಿದ್ದರು :
ಚಾಮರಾಜನಗರ: ರೈತ ನಾಯಕ ಪ್ರೊ. ಎಂ.ಡಿ. ನಂಜುಂಡಸ್ವಾಮಿ ಬದುಕಿದ್ದರೆ ಅವರು ಸಹ ದೇಶದೊ್ರೀಹಿ ಎಂದು ಕರೆಸಿಕೊಳ್ಳುತ್ತಿದ್ದರು ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಬೇಸರ ವ್ಯಕ್ತಪಡಿಸಿದರು.
ಪ್ರೊ.ಎಂಡಿಎನ್ ಅವರ 85ನೇ ಜನ್ಮದಿನಾಚರಣೆ ಅಂಗವಾಗಿ ನಗರದಲ್ಲಿ ರೈತ ಸಂಘ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರೊಫೆಸರ್ ಅವರು ಬದುಕಿದ್ದರೆ ಈಗ ಬಂಧನಲ್ಲಿರುತ್ತಿದ್ದರು. ಸರ್ಕಾರವನ್ನು ಪ್ರಶ್ನಿಸಿದವರನ್ನೆಲ್ಲಾ ಯುಎಪಿಎ ಕಾಯ್ದೆಯಡಿ ಜೈಲಿಗಟ್ಟಲಾಗುತ್ತಿದೆ. ಹಾಗೆಯೇ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅವರಿದ್ದರೆ, ದೇಶದೊ್ರೀಹಿ ಎಂದು ಕರೆದು, ಅವರನ್ನೂ ಯುಎಪಿಎ ಕಾಯ್ದೆಯಡಿ ವಿಚಾರಣೆಗೂ ಅವಕಾಶ ನೀಡದೇ ಬಂಧಿಸಿ ಜೈಲಿನಲ್ಲಿಡುತ್ತಿದ್ದರು ಎಂದು ಮಹಾದೇವ ವಿಷಾದಿಸಿದರು.
ಚಾಮರಾಜನಗರದ ಡಾ. ಅಂಬೇಡ್ಕರ್ ಭವನದಲ್ಲಿ ಪ್ರೊ.ಎಂಡಿಎನ್ ಅವರ 85ನೇ ಜನ್ಮದಿನಾಚರಣೆ ಅಂಗವಾಗಿ ರೈತ ಸಂಘ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಾಹಿತಿ ದೇವನೂರ ಮಹಾದೇವ ಮಾತನಾಡಿದರು.